ಚನ್ನಪಟ್ಟಣ ಮೂಲದ ಐವರು ಕಾವೇರಿ ನದಿ ಪಾಲು: ದೇವಸ್ಥಾನಕ್ಕೆ ಹೋದವರು ಮಸಣಕ್ಕೆ

Mandya News: ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿ ಬಳಿ ಕಾವೇರಿ ನದಿಯಲ್ಲಿ ಭಾರಿ ದುರಂತ ಒಂದು ಸಂಭವಿಸಿದೆ. ದೇವಸ್ಥಾನಕ್ಕೆ ತೆರಳಿದ್ದಾಗ ಚನ್ನಪಟ್ಟಣ ಮೂಲದ ಒಂದೇ ಕುಟುಂಬದ ಐವರು ನೀರುಪಾಲಾಗಿರುವಂತಹ ಘಟನೆ ನಡೆದಿದೆ. ಸದ್ಯ ಹಲಗೂರು ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿದ್ದಾರೆ.

ಚನ್ನಪಟ್ಟಣ ಮೂಲದ ಐವರು ಕಾವೇರಿ ನದಿ ಪಾಲು: ದೇವಸ್ಥಾನಕ್ಕೆ ಹೋದವರು ಮಸಣಕ್ಕೆ
ಪ್ರಾತಿನಿಧಿಕ ಚಿತ್ರ
Image Credit source: Getty images
Edited By:

Updated on: Jun 24, 2026 | 7:43 PM

ಮುಖ್ಯಾಂಶಗಳು

  • ಕಾವೇರಿ ನದಿಯಲ್ಲಿ ಐವರು ನೀರುಪಾಲು
  • ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿ ಬಳಿ ಘಟನೆ
  • ಒಂದೇ ಕುಟುಂಬದ ಐವರು ಜಲಸಮಾಧಿ

ಮಂಡ್ಯ, ಜೂನ್​​ 24: ಒಂದೇ ಕುಟುಂಬದ ಐವರು ಜಲಸಮಾಧಿ (death) ಆಗಿರುವಂತಹ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿ ಬಳಿಯ ಕಾವೇರಿ ನದಿಯಲ್ಲಿ ನಡೆದಿದೆ. ಚೈತ್ರ(20), ಶ್ವೇತಾ (38), ವಿಜಯಮ್ಮ(50), ಪ್ರಿಯಾಂಕ(28) ಮತ್ತು ಮಹೇಶ್ ಮೃತರು. ಸದ್ಯ ಕಾರ್ಯಚರಣೆ ನಡೆಸಿ ಪೊಲೀಸರು ಮತ್ತು ಅಗ್ನಿಶಾಮಕದಳ ಸಿಬ್ಬಂದಿ ಐವರ ಮೃತದೇಹವನ್ನು ನದಿಯಿಂದ ಹೊರತೆಗೆದಿದ್ದಾರೆ.

ನಡೆದಿದ್ದೇನು?

ಚನ್ನಪಟ್ಟಣ ಮೂಲದ ಒಂದೇ ಕುಟುಂಬದ ಐವರು ಇಂದು ಸಂಜೆ 4.45ಕ್ಕೆ ಮುತ್ತತ್ತಿಯ ಮುತ್ತೆತ್ತರಾಯ ದೇಗುಲಕ್ಕೆ ಬಂದಿದ್ದರು. ಈ ವೇಳೆ ಕಾವೇರಿ ನದಿಗಿಳಿದು ಫೋಟೋ ತೆಗೆದುಕೊಳ್ಳಲು ಹೋಗಿ ದುರ್ಘಟನೆ ಸಂಭವಿಸಿದೆ.

ಮಲಗಿದ್ದಾಗ ಹಾವು ಕಡಿದು ಬಾಲಕ ಸಾವು: ಸಹೋದರಿ ಪಾರು

ಮಲಗಿದ್ದಾಗ ಹಾವು ಕಡಿದು ಬಾಲಕ ಸಾವನ್ನಪ್ಪಿದ್ದು, ಸಹೋದರಿ ಪ್ರಾಣಾಪಾಯದಿಂದ ಪಾರಾಗಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸಹಸ್ರಳ್ಳಿಯಲ್ಲಿ ನಡೆದಿದೆ. 6ನೇ ತರಗತಿ ವಿದ್ಯಾರ್ಥಿ ಮಿಥುನ್ ಪುಟ್ಟಪ್ಪ ನಾಯ್ಕ(12) ಮೃತ ಬಾಲಕ. ರಾತ್ರಿ ಮಲಗಿದ್ದಾಗ ಮಿಥುನ್​, ಸಹೋದರಿ ದೀಕ್ಷಾಗೆ ಹಾವು ಕಚ್ಚಿದೆ.

ಇದನ್ನೂ ಓದಿ: ಆಸ್ತಿಗಾಗಿ ತಂದೆ ಕಥೆಯನ್ನೇ ಮುಗಿಸಿದ್ರಾ ಮಕ್ಕಳು?: ದೂರು, ಪ್ರತಿದೂರಿನ ಹಿನ್ನೆಲೆ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ

ಇಂದು ಬೆಳಗ್ಗೆ ಎದ್ದಾಗ ಮಿಥುನ್, ದೀಕ್ಷಾ ವಾಂತಿ ಮಾಡಿಕೊಂಡಿದ್ದರು. ತಕ್ಷಣ ಇಬ್ಬರನ್ನೂ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಶಿರಸಿಗೆ ಕರೆದೊಯ್ಯುವ ವೇಳೆ ಮಿಥುನ್ ಸಾವನ್ನಪ್ಪಿದ್ದು, ಸದ್ಯ ಬಾಲಕಿ ದೀಕ್ಷಾಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಪರಿಶೀಲನೆ ವೇಳೆ ಮಿಥುನ್ ಕಿವಿ, ದೀಕ್ಷಾ ಕೈಗೆ ಹಾವು ಕಚ್ಚಿರುವುದು ಪತ್ತೆ ಆಗಿದೆ. ಬನವಾಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕಾರು ಡಿಕ್ಕಿ: ಬೈಕ್ ಸವಾರ ಸಾವು

ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವಂತಹ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಜಡಲತಿಮ್ಮನಹಳ್ಳಿ ರೈಲ್ವೆ ಗೇಟ್ ಬಳಿ ನಡೆದಿದೆ. ಚಿಕ್ಕಬಳ್ಳಾಪುರದ ಕಂದವಾರ ನಿವಾಸಿ ಶ್ರೀನಿವಾಸ್ ಮೃತ ಬೈಕ್ ಸವಾರ. ನಂದಿಗಿರಿಧಾಮ ಪೊಲೀಸ್ ಠಾಣೆ ವ್ಯಾಪ್ತಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: TV9 ಬಿಗ್ ಇಂಪ್ಯಾಕ್ಟ್: ಹಸಿದ ಹೊಟ್ಟೆಗೆ ಸಿಕ್ತು ಅನ್ನ, ಆದಿವಾಸಿಗಳು ಫುಲ್ ಖುಷ್

ಬ್ರೇಕ್ ಬದಲು ಎಕ್ಸಲೇಟರ್ ತುಳಿದ ಹಿನ್ನಲೆ ಮುಂದೆ ಇದ್ದ ಬೈಕ್​​ಗೆ ಕಾರು ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಶ್ರೀನಿವಾಸ್​​ರನ್ನು ಕಾರು ಚಾಲಕ ಮುದ್ದೇನಹಳ್ಳಿ ಸತ್ಯಸಾಯಿ ಆಸ್ಪತ್ರೆ ಕರೆದುಕೊಂಡು ಹೋಗುತ್ತಿದ್ದ ವೇಳೆ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ. ಮುದ್ದೇನಹಳ್ಳಿ ಸತ್ಯಸಾಯಿ ಆಸ್ಪತ್ರೆಯಲ್ಲಿ ಶ್ರೀನಿವಾಸ್​​ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ರಾತ್ರಿ ಪಾಳೆ ಮುಗಿಸಿಕೊಂಡು ವಾಪಸ್ ಚಿಕ್ಕಬಳ್ಳಾಪುರಕ್ಕೆ ಬರುತ್ತಿದ್ದಾಗ ಅನಾಹುತ ಸಂಭವಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:18 pm, Wed, 24 June 26

Follow Us