ಮಂಡ್ಯ: ಲಕ್ಷಾಂತರ ಮೌಲ್ಯದ ಮರಗಳನ್ನು ಕಡಿದು ಸಾಗಿಸಿದ ಗ್ರಾ.ಪಂ. ಅಧ್ಯಕ್ಷ, ಕ್ರಮಕ್ಕೆ ಗ್ರಾಮಸ್ಥರ ಒತ್ತಾಯ
ಮರಗಳ ಮಾರಣ ಹೋಮದ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಮರಗಳ ಕಟಾವಿಗೆ ಸ್ಥಳೀಯರು ಅಡ್ಡಿಪಡಿಸಿದ್ದಾರೆ. ಅಕ್ರಮದ ಬಗ್ಗೆ ಪ್ರಶ್ನಿಸಿದ ಸ್ಥಳೀಯರ ವಿರುದ್ಧವೇ ಪಂಚಾಯಿತಿ ಅಧ್ಯಕ್ಷ ರಮೇಶ್ ದರ್ಪ ಮೆರೆದಿದ್ದಾರೆ. ಈ ವೇಳೆ ಸ್ಥಳೀಯರ ಆಕ್ರೋಶ ಹೆಚ್ಚಾಗ್ತಿದ್ದಂತೆ ಅಧ್ಯಕ್ಷ ಆ್ಯಂಡ್ ಟೀಂ ಸ್ಥಳದಿಂದ ಕಾಲ್ಕಿತ್ತಿದ್ದಾರೆ.
ಮಂಡ್ಯ, ಡಿ.29: ಸರ್ಕಾರಿ ಜಾಗದಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಮರಗಳ (Trees) ಮಾರಣ ಹೋಮ ಮಾಡಲಾಗಿದೆ. ಮಂಡ್ಯ (Mandya) ತಾಲೂಕಿನ ಹೆಚ್.ಮಲ್ಲಿಗೆರೆ ಬಳಿ ಅರಣ್ಯ ಇಲಾಖೆಗೆ ಸೇರಿದ್ದ ಜಾಗದಲ್ಲಿದ್ದ 30, 40 ವರ್ಷಗಳ ಮರಗಳನ್ನ ಕಡಿದು ಮಾರಾಟ ಮಾಡಲಾಗಿದೆ. ಇನ್ನು ಅಕ್ರಮವಾಗಿ ಮರ ಕಡಿದು ಸಾಗಾಣಿಕೆ ಮಾಡಲಾಗುತ್ತಿದೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷನ ವಿರುದ್ಧವೇ ಗ್ರಾಮಸ್ಥರು ಆರೋಪಿಸಿದ್ದಾರೆ.
ಹೆಚ್.ಮಲ್ಲಿಗೆರೆ ಬಳಿ ಅರಣ್ಯ ಇಲಾಖೆಗೆ ಸೇರಿದ್ದ ಜಾಗದಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಮರಗಳ ಕಳ್ಳತನವಾಗಿದೆ. 19ಕ್ಕೂ ಹೆಚ್ಚು ಬೃಹತ್ ಮರಗಳನ್ನ ಅಕ್ರಮವಾಗಿ ಕಡಿದು ಸಾಗಣೆ ಮಾಡಲಾಗಿದೆ. ಮರಗಳ ಮಾರಣ ಹೋಮದ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಮರಗಳ ಕಟಾವಿಗೆ ಸ್ಥಳೀಯರು ಅಡ್ಡಿಪಡಿಸಿದ್ದಾರೆ. ಅಕ್ರಮದ ಬಗ್ಗೆ ಪ್ರಶ್ನಿಸಿದ ಸ್ಥಳೀಯರ ವಿರುದ್ಧವೇ ಪಂಚಾಯಿತಿ ಅಧ್ಯಕ್ಷ ರಮೇಶ್ ದರ್ಪ ಮೆರೆದಿದ್ದಾರೆ. ಈ ವೇಳೆ ಸ್ಥಳೀಯರ ಆಕ್ರೋಶ ಹೆಚ್ಚಾಗ್ತಿದ್ದಂತೆ ಅಧ್ಯಕ್ಷ ಆ್ಯಂಡ್ ಟೀಂ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಅರಣ್ಯ ಇಲಾಖೆಯ ಅನುಮತಿಯನ್ನೂ ಪಡೆಯದೆ ಮರಗಳಿಗೆ ಕೊಡಲಿ ಹಾಕಿದ್ದು ಈ ಸಂಬಂಧ ಸ್ಥಳಕ್ಕೆ ಅರಣ್ಯಾಧಿಕಾರಿಗಳು, ರೇಷ್ಮೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. RFO ಚೈತ್ರಾ ನೇತೃತ್ವದಲ್ಲಿ ಸ್ಥಳ ಪರಿಶೀಲಿಸಿ, ಕಡಿದ ಮರಗಳ ಸರ್ವೇ ಮಾಡಲಾಗಿದೆ. ಇನ್ನು ನ್ಯಾಯಾಲಯದ ಅನುಮತಿ ಪಡೆದು ಪ್ರಕರಣ ದಾಖಲಿಸುವ ಭರವಸೆಯನ್ನು ಅಧಿಕಾರಿಗಳು ಗ್ರಾಮಸ್ಥರಿಗೆ ನೀಡಿದ್ದಾರೆ.
ಇದನ್ನೂ ಓದಿ: ಬೆಂಗಳೂರು: ವರ್ತೂರಿನ ಪ್ರೆಸ್ಟೀಜ್ ಹೆಬಿಟೇಡ್ ಅಪಾರ್ಟ್ಮೆಂಟ್ನಲ್ಲಿ ಕರೆಂಟ್ ಶಾಕ್ನಿಂದ ಬಾಲಕಿ ಸಾವು
ಟಿವಿ9 ವರದಿ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು
ತುಂಗಭದ್ರಾ ನದಿಯಲ್ಲಿ ಅಕ್ರಮ ಮರಳು ದಂಧೆ ವಿಚಾರ ಭಾರಿ ಸದ್ದು ಮಾಡಿತ್ತು. ಈ ಬಗ್ಗೆ ನಿಮ್ಮ ಟಿವಿ9 ವಿಸ್ತೃತ ವರದಿ ಮಾಡಿತ್ತು. ಈ ವರದಿ ಬೆನ್ನಲ್ಲೇ ಗದಗ ಜಿಲ್ಲಾ ಪೊಲೀಸರು ಅಲರ್ಟ್ ಆಗಿದ್ದಾರೆ. ಈಗ ನದಿ ಪಾತ್ರದಲ್ಲಿ ಅಕ್ರಮವಾಗಿ ಸಂಗ್ರಹಿಸಿದ ಮರಳಿಗೆ ಕಾವಲು ಹಾಕಲಾಗಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಸಿಂಗಟಾಲೂರ, ಶೀರನಹಳ್ಳಿ, ಹೆಸರೂರ ಗ್ರಾಮಗಳ ತುಂಗಭದ್ರಾ ನದಿ ಪಾತ್ರದಲ್ಲಿ ಅಕ್ರಮವಾಗಿ ಮರಳು ಸಂಗ್ರಹಿಸಲಾಗಿತ್ತು. ಮಾಹಿತಿ ನೀಡಿದ್ರೂ ಸ್ಥಳಕ್ಕೆ ಗಣಿ ಇಲಾಖೆ ಅಧಿಕಾರಿಗಳು ಬಂದಿಲ್ಲ ಎಂದು ದೂರಲಾಗಿದೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ