ಮಂಡ್ಯ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರರಿಬ್ಬರ ದುರ್ಮರಣ
ಪಣ್ಣೆದೊಡ್ಡಿ ಗ್ರಾಮದ ವಿನಯ್(27), ಹರಳಹಳ್ಳಿಯ ಪ್ರಸನ್ನ(30) ಮೃತ ದುರ್ದೈವಿಗಳು. ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಬೆಸಗರಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಮಂಡ್ಯ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್(Bike) ಸವಾರರಿಬ್ಬರು ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಪಣ್ಣೆದೊಡ್ಡಿ ಬಳಿ ನಡೆದಿದೆ. ಪಣ್ಣೆದೊಡ್ಡಿ ಗ್ರಾಮದ ವಿನಯ್(27), ಹರಳಹಳ್ಳಿಯ ಪ್ರಸನ್ನ(30) ಮೃತ ದುರ್ದೈವಿಗಳು. ಸದ್ಯ ಸ್ಥಳಕ್ಕೆ ಪೊಲೀಸರು(Karnataka police) ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಬೆಸಗರಹಳ್ಳಿ ಪೊಲೀಸ್ ಠಾಣೆಯಲ್ಲಿ(Police station) ಈ ಸಂಬಂಧ ಪ್ರಕರಣ ದಾಖಲಾಗಿದೆ.
ಮೈಸೂರು: ಶಾಲೆಯಲ್ಲಿ ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ; ಮುಖ್ಯ ಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್
ಮೈಸೂರು: ಶಾಲೆಯಲ್ಲಿ ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೆಚ್.ಡಿ.ಕೋಟೆ ತಾಲೂಕಿನ ಪ್ರೌಢ ಶಾಲೆ ಮುಖ್ಯ ಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಮುಖ್ಯ ಶಿಕ್ಷಕ ವಿದ್ಯಾರ್ಥಿನಿ ಜತೆ ಅಸಭ್ಯವಾಗಿ ವರ್ತಿಸಿದ ವಿಡಿಯೋ ವೈರಲ್ ಆಗಿತ್ತು. ಈ ಬಗ್ಗೆ ಪರಿಶೀಲಿಸಿ ಕ್ರಮಕ್ಕೆ ಬಿಇಒ ಚಂದ್ರಕಾಂತ್ ಸೂಚಿಸಿದ್ದರು. ಸದ್ಯ ಮುಖ್ಯ ಶಿಕ್ಷಕನ ವಿರುದ್ಧ ಹೆಚ್.ಡಿ.ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು: ಕುವೆಂಪುನಗರದಲ್ಲಿ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರನಿಗೆ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ನೆರವು
ಜಿಲ್ಲೆಯ ಕುವೆಂಪುನಗರದಲ್ಲಿ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರನಿಗೆ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ನೆರವು ನೀಡಿದ್ದಾರೆ. ಆಟೋದಲ್ಲಿ ಗಾಯಾಳುವನ್ನು ಆಸ್ಪತ್ರೆಗೆ ಕಳುಹಿಸಿ ಚಿಕಿತ್ಸೆಗೆ ನೆರವು ನೀಡಿದ್ದಾರೆ. ರಸ್ತೆ ಗುಂಡಿ ತಪ್ಪಿಸಲು ಹೋಗಿ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರನಿಗೆ ಅಲ್ಲೇ ಪಾದಯಾತ್ರೆ ನಡೆಸುತ್ತಿದ್ದ ಮಾಜಿ ಶಾಸಕ ಎಂ.ಕೆ ಸೋಮಶೇಖರ್ ಸಹಾಯಕ್ಕೆ ಮುಂದಾಗಿದ್ದಾರೆ.
ಮಂಡ್ಯ: ಪತಿಯಿಂದ ವಿಚ್ಛೇದಿತ ಪತ್ನಿ ಹತ್ಯೆ
ಮಂಡ್ಯ ತಾಲೂಕಿನ ರಾಗಿಮುದ್ದನಹಳ್ಳಿಯಲ್ಲಿ ಪತಿ ತನ್ನ ವಿಚ್ಛೇದಿತ ಪತ್ನಿಯನ್ನು ಹತ್ಯೆ ಮಾಡಿದ್ದಾರೆ. ಶಾಲಿನಿ ಕತ್ತು ಕೊಯ್ದು ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಲಾಗಿದೆ. ಪತ್ನಿ ಶಾಲಿನಿ (32) ಕೊಲೆಯಾದ ಮಹಿಳೆ. ಪತ್ನಿ ಹತ್ಯೆಗೈದು ವಿಚ್ಛೇದಿತ ಪತಿ ಸುರೇಶ್(40) ಪರಾರಿಯಾಗಿದ್ದಾನೆ. 15 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಕಳೆದ ನಾಲ್ಕು ವರ್ಷಗಳ ಹಿಂದೆ ವಿಚ್ಛೇದನ ಪಡೆದಿದ್ದರು. ಸದ್ಯ ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಲವು ವರ್ಷ ಅನ್ಯೋನ್ಯವಾಗಿದ್ದ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ವಿಚ್ಛೇದನದ ಬಳಿಕ ಇಬ್ಬರು ಹೆಣ್ಣು ಮಕ್ಕಳೊಂದಿಗೆ ತಂದೆ ಮನೆಯಲ್ಲಿ ಶಾಲಿನಿ ಜೀವನ ಸಾಗಿಸುತ್ತಿದ್ದಳು. ತನ್ನನ್ನು ಬಿಟ್ಟು ಜೀವನ ಸಾಗಿಸುತ್ತಿದ್ದಾಳೆ ಎಂದು ಖಿನ್ನತೆ ಒಳಗಾಗಿದ್ದ ಸುರೇಶ್. ಪತ್ನಿ ಕೆಲಸದಿಂದ ಬರುವುದನ್ನೇ ಕಾದು ಕತ್ತು ಕೂಯ್ದು, ಬಳಿಕ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ.
ಇದನ್ನೂ ಓದಿ:
ಒಂದೇ ಹುಡುಗಿಯನ್ನ ಪ್ರೀತಿ ಮಾಡಿದರು, ಒಬ್ಬನ ಹತ್ಯೆ ಮಾಡಿ, ಅಪಘಾತವೆಂದು ನಾಟಕವಾಡಿದ್ದರು: ಆಮೇಲೇನಾಯ್ತು?
ಶಿವಮೊಗ್ಗ: ವೇಗವಾಗಿ ಬಂದ ಟಿಪ್ಪರ್ ಕಾರಿಗೆ ಡಿಕ್ಕಿ! ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು
Published On - 9:07 am, Sat, 29 January 22