AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮ್ಮ-ಅಪ್ಪ ಸ್ವಾರಿ, ನಿಮ್ಮ ಕಣ್ಮುಂದೆ ಸಾಯೋಕೆ ಆಗಲ್ಲ: ಪತ್ರ ಬರೆದಿಟ್ಟು ಸಹೋದರಿಯರು ನಾಪತ್ತೆ

ಮನೆಯಲ್ಲಿ ತಾಯಿ ಬೈದಿದ್ದಕ್ಕೆ ಮನನೊಂದು ಅಪ್ರಾಪ್ತ ಸಹೋದರಿಯರು ನಾಪತ್ತೆಯಾಗಿದ್ದಾರೆ. ಮನೆ ಬಿಟ್ಟು ಹೋಗುವ ಮುನ್ನ ಆಘಾತಕಾರಿ ಪತ್ರವೊಂದು ಬರೆದಿಟ್ಟು ಹೋಗಿರುವುದು ಕುಟುಂಬದಲ್ಲಿ ಆತಂಕ ಮನೆ ಮಾಡಿದ್ದು, ಗಾಬರಿಗೊಂಡ ಪೋಷಕರು ಪತ್ರದೊಂದಿಗೆ ಪೊಲೀಸರ ಮೊರೆ ಹೋಗಿದ್ದಾರೆ. ಈ ಘಟನೆ ನಡೆದಿದ್ದೆಲ್ಲಿ? ಸಹೋದರಿಯರು ಬರೆದ ಪತ್ರದಲ್ಲೇನಿದೆ ಎನ್ನುವ ಡಿಟೇಲ್ಸ್ ಇಲ್ಲಿದೆ.

ಅಮ್ಮ-ಅಪ್ಪ ಸ್ವಾರಿ, ನಿಮ್ಮ ಕಣ್ಮುಂದೆ ಸಾಯೋಕೆ ಆಗಲ್ಲ: ಪತ್ರ ಬರೆದಿಟ್ಟು ಸಹೋದರಿಯರು ನಾಪತ್ತೆ
ಸುಜಾತಾ, ರುಕ್ಮಿಣಿ
ದಿಲೀಪ್​, ಚೌಡಹಳ್ಳಿ
| Edited By: |

Updated on: May 19, 2026 | 3:13 PM

Share

ಮಂಡ್ಯ, (ಮೇ 19): ತಾಯಿ ಬೈದಿದ್ದಕ್ಕೆ ಅಪ್ರಾಪ್ತ ಸಹೋದರಿಯರು (Sisters) ಭಾವುಕವಾಗಿ ಪತ್ರ ಬರೆದಿಟ್ಟು ಮನೆಯಿಂದ ನಾಪತ್ತೆಯಾಗಿರುವ ಘಟನೆ ಮಂಡ್ಯ (Mandya) ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕಾಳೇನಹಳ್ಳಿಯಲ್ಲಿ ನಡೆದಿದೆ. ರಾಮಚಂದ್ರ ಮಕ್ಕಳಾದ ಸುಜಾತಾ(16), ರುಕ್ಮಿಣಿ(14) ಮನೆಬಿಟ್ಟು ಹೋಗಿರುವ ಸಹೋದರಿಯರು. ಯಾವುದೋ ವಿಷಯಕ್ಕೆ ಮನೆತಲ್ಲಿ ತಾಯಿ ಬೈದಿದ್ದಾರೆ. ಇದರಿಂದ ಮನನೊಂದು ಸಹೋದರಿಯರು, ಮನೆಬಿಟ್ಟು ಹೋಗಿದ್ದಾರೆ.ಹೋಗುವ ಮುನ್ನ ಭಾವುಕ ಪತ್ರವೊಂದು ಬರೆದಿಟ್ಟಿದ್ದಾರೆ. ಅಮ್ಮ-ಅಪ್ಪ ಸ್ವಾರಿ. ನಿಮ್ಮ ಕಣ್ಣು ಮುಂದೆ ಸಾಯುವುದಕ್ಕೆ ಆಗಲ್ಲ. ಹೀಗಾಗಿ ನಾವು ದೂರ ಹೋಗಿ ಸತ್ತಿದ್ದೇವೆ ಎಂದು ಆಘಾತಕಾರಿ ಪತ್ರ ಬರೆದಿಟ್ಟು ಹೋಗಿರುವುದು ಆತಂಕಕ್ಕೆ ಕಾರಣವಾಗಿದೆ.

ಮುಖ್ಯಾಂಶಗಳು

  • ತಾಯಿ ಬೈದಿದ್ದಕ್ಕೆ ಆಘಾತಕಾರಿ ಬರೆದಿಟ್ಟು ಸಹೋದರಿಯರು ನಾಪತ್ತೆ
  • ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕಾಳೇನಹಳ್ಳಿಯಲ್ಲಿ ಘಟನೆ
  • ರಾಮಚಂದ್ರ ಮಕ್ಕಳಾದ ಸುಜಾತಾ(16), ರುಕ್ಮಿಣಿ(14) ನಾಪತ್ತೆ
  • ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಪೊಲೀಸರಿಂದ ಶೋಧ ಕಾರ್ಯ

ಪೋಷಕರು ಹಾಗೂ ಗ್ರಾಮಸ್ಥರಲ್ಲಿ ಆತಂಕ

ಶ್ರೀರಂಗಪಟ್ಟಣ ತಾಲೂಕಿನ ಕಾಳೇನಹಳ್ಳಿ ಗ್ರಾಮದ ರಾಮಚಂದ್ರ ಎಂಬುವರ ಮಕ್ಕಳಾದ ಸುಜಾತ ಮತ್ತು ರುಕ್ಮಿಣಿ ಮನೆ ಬಿಟ್ಟು ಹೋಗಿದ್ದು, ಮನೆಯಿಂದ ಹೋಗುವ ಮುನ್ನ ಬರೆದಿಟ್ಟಿರುವ ಪತ್ರದಲ್ಲಿ ತಮ್ಮ ನೋವು ತೋಡಿಕೊಂಡಿದ್ದಾರೆ. ಅಪ್ಪ-ಅಮ್ಮ ಸ್ಸಾರಿ ನಿಮ್ಮ ಕಣ್ಮುಂದೆ ಸಾಯೋಕೆ ಆಗಲ್ಲ ಅಂತಾ ನಾವು ದೂರ ಹೋಗಿ ಸತ್ತಿದ್ದೇವೆ ಸ್ಸಾರಿ ಎಂದು ಪತ್ರದಲ್ಲಿ ಬರೆದಿದ್ದು, ಈ ಪತ್ರ ಪೋಷಕರು ಹಾಗೂ ಗ್ರಾಮಸ್ಥರು ಆತಂಕಗೊಂಡಿದ್ದಾರೆ.

ಆತಂಕದಿಂದಲೇ ಪೊಲಿಸರ ಮೊರೆ ಹೋದ ಪೋಷಕರು

ಈ ಪತ್ರ ಓದಿದ ಕೂಡಲೇ ಆತಂಕಗೊಂಡ ಪೋಷಕರು, ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಗೆ ತೆರಳಿ ಮಕ್ಕಳನ್ನ ಹುಡುಕಿಕೊಡಿ ಎಂದು ಕಣ್ಣೀರಿಟ್ಟಿದ್ದಾರೆ. ಕೂಡಲೇ ಪೊಲೀಸರು ದೂರು ದಾಖಲಿಸಿಕೊಂಡು ಮಕ್ಕಳ ಪತ್ತೆಗೆ ಶೋಧಕಾರ್ಯ ನಡೆಸಿದ್ದಾರೆ. ಮಕ್ಕಳು ಏನಾದರೂ ಪ್ರಾಣಕ್ಕೆ ಅಪಾಯ ಮಾಡಿಕೊಂಡಿರಬಹುದೇ ಎಂದು ಕುಟುಂಬಸ್ಥರು ಆತಂಕಗೊಂಡು ಕಣ್ಣೀರು ಹಾಕುತ್ತಿದ್ದಾರೆ.

ಹುಟ್ಟಿಸಿ ಬೆಳೆಸಿದ ಪೋಷಕರು ಅಂದಮೇಲೆ ಮಕ್ಕಳು ತಪ್ಪು ಮಾಡಿದ್ರೆ ಬೈದು ಬುದ್ಧಿ ಹೇಳುತ್ತಾರೆ. ಆದ್ರೆ, ಮಕ್ಕಳಾದವರು, ತಂದೆ ತಾಯಿ ಬೈದರು ಎಂದು ಮನನೊಂದು ಈ ರೀತಿಯ ನಿರ್ಧಾರ ಕೈಗೊಳ್ಳುವುದು ತಪ್ಪು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Dileep CP
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More