AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಂಡವಪುರ: ಅರಳಕುಪ್ಪೆ ಗ್ರಾಮದಲ್ಲಿ ಭತ್ತ ನಾಟಿ ಮಾಡಿದ ಹೆಚ್​​ಡಿ ಕುಮಾರಸ್ವಾಮಿ, ವಿಡಿಯೋ ನೋಡಿ

ಜೆಡಿಎಸ್​ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಅರಳಕುಪ್ಪೆ ಗ್ರಾಮದ ಲಕ್ಷ್ಮಣ ಎಂಬುವವರ ಜಮೀನಿನಲ್ಲಿ ಭತ್ತದ ನಾಟಿ ಮಾಡಿದರು. ಹೆಚ್​ಡಿ ಕುಮಾರಸ್ವಾಮಿ ಅವರಿಗೆ ಜೆಡಿಎಸ್​ ನಾಯಕರು ಸಾಥ್​ ನೀಡಿದರು.

ಪ್ರಶಾಂತ್​ ಬಿ.
| Updated By: ವಿವೇಕ ಬಿರಾದಾರ|

Updated on: Aug 11, 2024 | 2:34 PM

Share

ಮಂಡ್ಯ, ಆಗಸ್ಟ್​ 11: ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಅವರು ರವಿವಾರ ಮಂಡ್ಯ (Mandya) ಜಿಲ್ಲೆ ಪಾಂಡವಪುರ (Pandavapur) ತಾಲ್ಲೂಕಿನ ಅರಳಕುಪ್ಪೆ ಗ್ರಾಮದ ಲಕ್ಷ್ಮಣ ಎಂಬುವವರ ಜಮೀನಿನಲ್ಲಿ ಭತ್ತ ನಾಟಿ ಮಾಡಿದರು. ಭತ್ತದ ನಾಟಿಗೂ ಮೊದಲು ಹೆಚ್​ಡಿ ಕುಮಾರಸ್ವಾಮಿ ಅವರು ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದರು. ಹೆಚ್​​ಡಿ ಕುಮಾರಸ್ವಾಮಿ ಅವರಿಗೆ ಜೆಡಿಎಸ್ ನಾಯಕರ ಸಾಥ್ ನೀಡಿದ್ದರು. ಜೆಡಿಎಸ್​ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ ಅವರು ಈ ಹಿಂದೆ 2018ರಲ್ಲೂ ಕಾವೇರಿ ಮಾತೆಗೆ ಪೂಜೆ ಮಾಡಿ ಭತ್ತ ನಾಟಿ ಮಾಡಿದ್ದರು.

ಭತ್ತ ನಾಟಿ ಮಾಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಹೆಚ್​ಡಿ ಕುಮಾರಸ್ವಾಮಿ, ಕೆಆರ್​ಎಸ್​ ಡ್ಯಾಂ ಭರ್ತಿಯಾಗಿದ್ದು, ಹೀಗಾಗಿ ಅರಳಕುಪ್ಪೆ ಗ್ರಾಮಕ್ಕೆ ಬಂದು ಭತ್ತ ನಾಟಿ ಮಾಡುವಂತೆ ರೈತರು ಮನವಿ ಮಾಡಿದರು. ರೈತ ಮಹಿಳೆಯರ ಜೊತೆಗೂಡಿ ಭತ್ತದ ನಾಟಿ ಮಾಡಿದ್ದೇನೆ. ಮುಖ್ಯಮಂತ್ರಿಯಾಗಿದ್ದಾಗ ಮೊದಲ ಬಾರಿಗೆ ನಾಟಿ ಮಾಡಿದ್ದೆ. ಈಗ ಕೇಂದ್ರದ ಮಂತ್ರಿ ಆಗಿದ್ದೇನೆ. ರೈತರಿಗೆ ಆತ್ಮಸೈರ್ಯ ತುಂಬಲು ಈ ರೀತಿ ಕೆಲಸ ಮಾಡಬೇಕು ಎಂದರು.

ಇದನ್ನೂ ಓದಿ: ತುಂಗಭದ್ರಾ ಡ್ಯಾಂ ಗೇಟ್ ಕಟ್​ಗೆ ಸ್ಫೋಟಕ ಕಾರಣ ಕೊಟ್ಟ ಎಚ್​​ಡಿಕೆ, ಜತೆಗೊಂದು ಸಲಹೆ

2018ರಲ್ಲಿ ನಾಟಿ ಮಾಡಿದಾಗ ಉತ್ತಮ ಉಳುವರಿ ಬಂದಿತ್ತು. ನಾಟಿಯ ಜೊತೆಗೆ ಬೆಳೆ ಕೈಗೆ ಬಂದಾಗ ಪೂಜೆಯನ್ನು ಸಹ ಮಾಡಿದ್ದೆ. ರೈತರ ಬದುಕಿನ ಕಷ್ಟಗಳನ್ನು ನೋಡಿ ಅನುಭವಿಸಿದ್ದೇವೆ. ಎಷ್ಟೇ ಕಷ್ಟ ಬಂದರೂ ರೈತರು ಬೆಳೆ ಬೆಳೆಯುತ್ತಾರೆ. ಈ ದೇಶ ಉಳಿಯಲು ರೈತರು ಉಳಿಯಬೇಕು ಎಂದು ಹೇಳಿದರು.

ಕೆಂಗಲ್ ಹನುಮಂತಯ್ಯ ಅವರು ಕಟ್ಟಿದ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಕುರ್ಚಿ ಭದ್ರವಾಗಿರುತ್ತೆ. ಆದರೆ ಸಿಎಂ ಕುರ್ಚಿ ಮೇಲೆ ಕುಳಿತವರ ಸ್ಥಾನ ಭದ್ರವಿರುವುದಿಲ್ಲ. ಮುಡಾ ಹಗರಣದ ವಿರುದ್ಧ ಮೈಸೂರಿನವರೆಗೆ ಪಾದಯಾತ್ರೆ ಮಾಡಿದ್ವಿ. ಜನರ ಪರವಾಗಿ ಬಿಜೆಪಿ-ಜೆಡಿಎಸ್ ಪಾದಯಾತ್ರೆ ನಡೆಸಿದ್ದೇವೆ. ಸರ್ಕಾರದ ಅಕ್ರಮಗಳ ವಿರುದ್ಧ ನಮ್ಮ ಹೋರಾಟ ನಿರಂತರವಾಗಿ ನಡೆಯುತ್ತದೆ. ಮುಂದೆ ಕಾನೂನು ಹೋರಾಟವು ಸಹ ನಡೆಯುತ್ತೆ ಎಂದು ತಿಳಿಸಿದರು.

ನಮ್ಮ ಕರ್ನಾಟಕದ ಖಜಾನೆ ಸದಾ ಸಂಪತ್ತು ಭರಿತವಾದ ಖಜಾನೆ. ಇಂತಹ ಖಜಾನೆಯನ್ನು ಕಾಂಗ್ರೆಸ್ ಸರ್ಕಾರ ಲೂಟಿ ಮಾಡುತ್ತಿದೆ. ಅಭಿವೃದ್ಧಿ ಕೆಲಸಗಳನ್ನು ಈ ಸರ್ಕಾರ ಮಾಡುತ್ತಿಲ್ಲ ಎಂದು ವಾಗ್ದಾಳಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?