ಮತ್ತೆ ಗದ್ದೆಗಿಳಿದು ಭತ್ತ ನಾಟಿ ಮಾಡಲಿರುವ ಕೇಂದ್ರ ಸಚಿವ ಕುಮಾರಸ್ವಾಮಿ, ಎಲ್ಲಿ? ಯಾವಾಗ?

2018ರಲ್ಲಿ ಮುಖ್ಯಮಂತ್ರಿ ಆಗಿದ್ದಾಗ ಖುದ್ದು ಕುಮಾರಸ್ವಾಮಿ ಅವರೇ ಗದ್ದೆಗಿಳಿದು ನಾಟಿ ಮಾಡಿದ್ದರು. ಇದೀಗ ಕೇಂದ್ರ ಸಚಿವರಾದ ನಂತರ ಮತ್ತೆ ಗದ್ದೆಗೆ ಇಳಿದು ಭತ್ತ ನಾಟಿ ಮಾಡಲು ನಿರ್ಧಾರ ಮಾಡಿದ್ದಾರೆ. ಈ ಹಿನ್ನಲೆ ಮುಂಚಿತವಾಗಿಯೇ ಹೆಚ್‌ಡಿಕೆ ನಾಟಿ ಮಾಡುವ ಜಮೀನನ್ನು ಪುತ್ರ ನಿಖಿಲ್ ಕುಮಾರಸ್ವಾಮಿ ವೀಕ್ಷಿಸಿದ್ದಾರೆ. ಎಲ್ಲಿ? ಯಾವಾಗ ಅಂತೀರಾ? ಈ ಸ್ಟೋರಿ ಓದಿ.

ಮತ್ತೆ ಗದ್ದೆಗಿಳಿದು ಭತ್ತ ನಾಟಿ ಮಾಡಲಿರುವ ಕೇಂದ್ರ ಸಚಿವ ಕುಮಾರಸ್ವಾಮಿ, ಎಲ್ಲಿ? ಯಾವಾಗ?
ಭತ್ತ ನಾಟಿ ಮಾಡಲಿರುವ ಕೇಂದ್ರ ಸಚಿವ ಕುಮಾರಸ್ವಾಮಿ
Follow us
ಪ್ರಶಾಂತ್​ ಬಿ.
| Updated By: ಕಿರಣ್ ಹನುಮಂತ್​ ಮಾದಾರ್

Updated on:Aug 01, 2024 | 5:52 PM

ಮಂಡ್ಯ, ಆ.01: ರೈತ ನಾಯಕ, ಮಣ್ಣಿನ ಮಗ, ಕೇಂದ್ರ ಸಚಿವರಾಗಿರುವ ಹೆಚ್​​.ಡಿ ಕುಮಾರಸ್ವಾಮಿ(H. D. Kumaraswamy) ಅವರು ಇದೇ ಆಗಸ್ಟ್​. 11ರಂದು ಮಂಡ್ಯ ಜಿಲ್ಲೆಯ ಪಾಂಡವಪುರ (Pandavapura) ತಾಲೂಕಿನ ಸೀತಾಪುರದ ಜಮೀನೊಂದರಲ್ಲಿ ಭತ್ತ ನಾಟಿ ಮಾಡಲಿದ್ದಾರೆ. ಈ ಹಿನ್ನಲೆ 10 ದಿನ ಮುಂಚೆಯೇ ಹೆಚ್‌ಡಿಕೆ ನಾಟಿ ಮಾಡುವ ಜಮೀನನ್ನು ಪುತ್ರ ನಿಖಿಲ್ ಕುಮಾರಸ್ವಾಮಿ ವೀಕ್ಷಿಸಿದ್ದಾರೆ.

ಕಾವೇರಿ ನದಿಗೆ ಮೊದಲು ಪೂಜೆ

ಆಗಸ್ಟ್ 11ರಂದು ಭತ್ತ ನಾಟಿ ಮಾಡುವ ಮೊದಲು ಪಕ್ಕದಲ್ಲೇ ಇರುವ ಕಾವೇರಿ ನದಿಗೆ ಪೂಜೆ ಸಲ್ಲಿಸಲಿದ್ದಾರೆ. ಕಾವೇರಿ ಪೂಜೆ ಬಳಿಕ ಭತ್ತದ ನಾಟಿ ಕಾರ್ಯದಲ್ಲಿ ಪಾಲ್ಗೊಂಡು, ಭತ್ತವನ್ನು ನಾಟಿ ಮಾಡಲಿದ್ದಾರೆ. ಇನ್ನು ಭತ್ತ ನಾಟಿ ಮಾಡುವ ಜಾಗವನ್ನು ವೀಕ್ಷಿಸುತ್ತಿರುವ ನಿಖಿಲ್​ಗೆ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಸಾಥ್ ಕೊಟ್ಟಿದ್ದಾರೆ.

ಇದನ್ನೂ ಓದಿ:ಕರ್ನಾಟಕ ಬಿಜೆಪಿ ವಿರುದ್ಧ ಹೆಚ್​ಡಿ ಕುಮಾರಸ್ವಾಮಿ ಮುನಿಸಿಗೆ ಇವೆ ಹಲವು ಕಾರಣ!

2018ರಲ್ಲಿ ಸಿಎಂ ಆಗಿದ್ದಾಗಲೂ ಗದ್ದೆಗಿಳಿದು ನಾಟಿ ಮಾಡಿದ್ದ ಹೆಚ್‌ಡಿಕೆ

ಈ ಹಿಂದೆ 2018ರಲ್ಲಿ ಮುಖ್ಯಮಂತ್ರಿ ಆಗಿದ್ದಾಗಲೂ ಕುಮಾರಸ್ವಾಮಿ ಅವರು ಗದ್ದೆಗಿಳಿದು ನಾಟಿ ಮಾಡಿದ್ದರು. ಕೇಂದ್ರ ಸಚಿವರಾದ ನಂತರ ಮತ್ತೆ ಗದ್ದೆಗೆ ಇಳಿದು ನಾಟಿ ಮಾಡಲು ನಿರ್ಧಾರ ಮಾಡಿದ್ದಾರೆ. ಇನ್ನು 2018 ರಲ್ಲಿ ಹೆಚ್​ಡಿಕೆ ಸಿಎಂ ಆಗಿದ್ದ  3 ವರ್ಷಗಳ ಹಿಂದೆ ಉತ್ತಮ ಮಳೆಯಾಗಿರಲಿಲ್ಲ. ವರುಣನ ಅವಕೃಪೆಯಿಂದ ಭೀಕರ ಬರಗಾಲ ಎದುರಾಗಿತ್ತು. ಹೀಗಾಗಿ ರೈತರು ಭತ್ತ ನಾಟಿ ಮಾಡಲು ಸಾಧ್ಯವಾಗಿರಲಿಲ್ಲ. ಕೆಲ ರೈತರು ಆತ್ಮಹತ್ಯೆಯ ಹಾದಿ ಹಿಡಿದಿದ್ದರು. ಆದರೆ, ಕುಮಾರಸ್ವಾಮಿ ಮುಖ್ಯಮಂತ್ರಿ ಆದ ವರ್ಷ ರಾಜ್ಯದಲ್ಲಿ ಉತ್ತಮ ಮಳೆಯಾಗಿ. ಭತ್ತ ನಾಟಿ ಮಾಡುವ ಕಾರ್ಯಕ್ರಮಗಳಲ್ಲಿ ಖುದ್ದು ಭಾಗಿಯಾಗಿದ್ದರು. ಇದೀಗ ಕೇಂದ್ರ ಸಚಿವರಾದ ಮೇಲೂ ಮತ್ತೆ ಭತ್ತ ನಾಟಿ ಮಾಡಲು ಮುಂದಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:48 pm, Thu, 1 August 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ