ಮಂಡ್ಯದಲ್ಲಿ ಮಹಿಳೆಯರ ಜೊತೆ ನಾಟಿ ಮಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಮಂತ್ರಿ ಜವಾಬ್ದಾರಿ ಬಳಿಕ ಮೊದಲು ಮಂಡ್ಯಕ್ಕೆ ಬಂದಿದ್ದೇನೆ. ಪ.ಜಾ, ಪ.ಪಂ ಮಹಿಳೆಯರು ಸೇರಿದಂತೆ ಎಲ್ಲಾ ಜಾತಿ, ವರ್ಗಗಳಿಗೆ ಸಚಿವ ಸ್ಥಾನ ನೀಡಲಾಗಿದೆ. ರೈತರ ಆದಾಯ ದ್ವಿಗುಣಗೊಳಿಸುವುದು ಪ್ರಧಾನಿಗಳ ಆಶಯ.

ಮಂಡ್ಯದಲ್ಲಿ ಮಹಿಳೆಯರ ಜೊತೆ ನಾಟಿ ಮಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ನಾಟಿ ಮಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Follow us
TV9 Web
| Updated By: sandhya thejappa

Updated on:Aug 16, 2021 | 2:45 PM

ಮಂಡ್ಯ: ಜನಾಶೀರ್ವಾದ ಯಾತ್ರೆ ಹಿನ್ನೆಲೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಇಂದು (ಆಗಸ್ಟ್ 16) ಮಂಡ್ಯಕ್ಕೆ (Mandya) ಆಗಮಿಸಿದರು. ಮೊದಲು ಜಿಲ್ಲೆಯ ಮದ್ದೂರು ತಾಲೂಕಿನ ರುದ್ರಾಕ್ಷಿಪುರ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪಡಿತರ ಪರಿಶೀಲನೆ ಮಾಡಿದರು. ನಂತರ ಹೊನಗನಹಳ್ಳಿಯ ಗದ್ದೆಯಲ್ಲಿ ಮಹಿಳೆಯರ ಭತ್ತ ನಾಟಿ ಮಾಡಿದರು. ಇದೇ ವೇಳೆ ಸಚಿವ ನಾರಾಯಣಗೌಡ ನಾಟಿ ಯಂತ್ರಕ್ಕೆ ಚಾಲನೆ ನೀಡಿದರು. ಇನ್ನು ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿದ ಶೋಭಾ ಕರಂದ್ಲಾಜೆ, ರೈತ ಮಹಿಳೆಗೆ ದೇಶದ ಕೃಷಿ ಮಂತ್ರಿಯಾಗುವ ಅವಕಾಶ ಸಿಕ್ಕಿದೆ. ಅವಕಾಶ ಕೊಟ್ಟ ನರೇಂದ್ರ ಮೋದಿ ಅವರಿಗೆ ಧನ್ಯವಾದ ಎಂದು ಹೇಳಿದರು.

ಮಂತ್ರಿ ಜವಾಬ್ದಾರಿ ಬಳಿಕ ಮೊದಲು ಮಂಡ್ಯಕ್ಕೆ ಬಂದಿದ್ದೇನೆ. ಪ.ಜಾ, ಪ.ಪಂ ಮಹಿಳೆಯರು ಸೇರಿದಂತೆ ಎಲ್ಲಾ ಜಾತಿ, ವರ್ಗಗಳಿಗೆ ಸಚಿವ ಸ್ಥಾನ ನೀಡಲಾಗಿದೆ. ರೈತರ ಆದಾಯ ದ್ವಿಗುಣಗೊಳಿಸುವುದು ಪ್ರಧಾನಿಗಳ ಆಶಯ. ಚಿಕ್ಕ-ಚಿಕ್ಕ ರೈತರನ್ನ ಒಟ್ಟಗೂಡಿಸಿ ಕೃಷಿಗೆ ಉತ್ತೇಜನ ನೀಡಬೇಕು. ಕೃಷಿ ಮೂಲಭೂತ ಸೌಕರ್ಯ ನಿಧಿಯಲ್ಲಿ 1 ಲಕ್ಷ ಕೋಟಿ ಮೀಸಲಿಡಲಾಗಿದೆ. ಸಬ್ಸಿಡಿ, ಸಾಲ, ಕೃಷಿ ಉತ್ಪನ್ನಗಳನ್ನ ಒದಗಿಸಿ ಕೃಷಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಆತ್ಮನಿರ್ಭರ ಯೋಜನೆಯಡಿ ಸಾವಯವ ಬೆಲ್ಲ ಹೆಚ್ಚು ರಫ್ತಾಗಬೇಕು ಎಂದು ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟರು.

ಆಧುನಿಕರಣದತ್ತ ರೈತರನ್ನ ಕರೆದೊಯ್ಯಬೇಕು. ಕೊರೊನಾ ಸಂಕಷ್ಟದ ವೇಳೆ ದೇಶದಲ್ಲಿ ಯಾವುದೇ ಆಹಾರ ಕೊರತೆ ಆಗಿಲ್ಲ. ಆ ಶ್ರೇಯಸ್ಸು ನಮ್ಮ ರೈತರಿಗೆ ಸಲ್ಲಬೇಕು. ಇದು ಆರಂಭಿಕ ಪ್ರವಾಸ. ಮುಂಬರುವ ದಿನಗಳಲ್ಲಿ ಅಧಿಕಾರಿಗಳ ಜೊತೆ ಬಂದು ಸಮಸ್ಯೆಗಳ ಕುರಿತು ಚರ್ಚೆ ಮಾಡುತ್ತೀನಿ ಎಂದು ಕೇಂದ್ರ ಸಚಿವೆ ತಿಳಿಸಿದರು.

ಸ್ವಪಕ್ಷೀಯರಿಂದಲೇ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಪ್ರತಿಭಟನೆ ಖಾಸಗಿ ಸಮೂದಾಯ ಭವನದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಗೆ ಬಿಜೆಪಿ ಮುಖಂಡ ಚಂದಗಾಲು ಶಿವಣ್ಣರನ್ನು ಆಹ್ವಾನಿಸಿಲ್ಲ ಅಂತ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಕಾರ್ಯಕರ್ತರು ಸಭೆಯ ಮಧ್ಯ ಎದ್ದು ಕಿರುಚಾಡಿದರು. ಈ ವೇಳೆ ಶೋಭಾ ಕರಂದ್ಲಾಜೆ ಕಾರ್ಯಕರ್ತರನ್ನು ಸಮಾಧಾನ ಮಾಡಲು‌ ಮುಂದಾದರು. ಆದರೆ ಸಚಿವೆ ಮಾತಿಗೂ ತಲೆ ಕಡೆಸಿಕೊಳ್ಳದೇ ಪ್ರತಿಭಟನೆ ನಡೆಸುತ್ತಿದ್ದಾರೆ.

ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ಬೊಮ್ಮಾಯಿ ಸರ್ಕಾರ ಹೆಚ್ಚು ದಿನ ಉಳಿಯಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ತಿರುಗೇಟು ನೀಡಿದ್ದಾರೆ. ಕೈಗೆ ಸಿಗದ ದ್ರಾಕ್ಷಿ ಹುಳಿ ಅಂತಾರೆ ಹಾಗಿದೆ ಇವರ ಹೇಳಿಕೆ. ಸಿದ್ದರಾಮಯ್ಯಗೆ ಅಧಿಕಾರ ಇಲ್ಲ, ಹೀಗಾಗಿ ಮಾತಾಡುತ್ತಾರೆ. ನಮ್ಮ ಸರ್ಕಾರವೇ ಇರುತ್ತೆ, ಒಳ್ಳೆಯ ಕೆಲಸ ಮಾಡುತ್ತೆ ಅಂತ ಶೋಭಾ ಕರಂದ್ಲಾಜೆ ಹೇಳಿದರು. ಇನ್ನು ಮೇಕೆದಾಟು ಯೋಜನೆಗೆ ತಮಿಳುನಾಡು ಕ್ಯಾತೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಮ್ಮ ಹಾಗೂ ನಮ್ಮ ರಾಜ್ಯದ ನಿಲುವು ಬಹಳ ಸ್ಪಷ್ಟವಿದೆ. ಮೇಕೆದಾಟು ಯೋಜನೆಯಿಂದ ನಮಗೂ ಅನುಕೂಲವಾಗುತ್ತೆ. ತಮಿಳುನಾಡಿಗೂ ಅನುಕೂಲವಾಗುತ್ತೆ. ಈ ಯೋಜನೆಯಿಂದ ತಮಿಳುನಾಡಿಗೆ ಯಾವುದೇ ತೊಂದರೆ ಇಲ್ಲ. ತಮಿಳುನಾಡಿಗೆ ಬಿಡಬೇಕಾಗಿರುವ ನೀರು ಬಿಡಲಾಗುವುದು ಎಂದು ಹೇಳಿದರು.

ಇದನ್ನೂ ಓದಿ

ರಾಯಚೂರು: ಕೊವಿಡ್ ಲಸಿಕೆ ನಿರಾಕರಿಸಿದವರಿಗೆ ಪಡಿತರ ಕಟ್!

ಭಾರತದಿಂದ ಸಂಕಷ್ಟದಲ್ಲಿರುವ ಶ್ರೀಲಂಕಾ ಕ್ರಿಕೆಟ್​ಗೆ 107 ಕೋಟಿ ಆದಾಯ: ದ್ರಾವಿಡ್​ಗೆ ಧನ್ಯವಾದ ಎಂದ ಮಂಡಳಿ

(Union Minister Shobha Karandlaje worked with women in paddy ground at Mandya)

Published On - 12:55 pm, Mon, 16 August 21

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್