ಅಯೋಧ್ಯೆ ಬಾಲರಾಮ ಪ್ರಾಣ ಪ್ರತಿಷ್ಠಾಪನೆ ನೆನಪಿಗಾಗಿ ಹಾರಿಸಲಾದ ಹನುಮ ಧ್ವಜ ತೆರವಿಗೆ ಗ್ರಾಮಸ್ಥರ ವಿರೋಧ, ಲಾಠಿ ಚಾರ್ಜ್​​​​

ಜನವರಿ 22 ರಂದು ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಬಾಲರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನೆರವೇರಿತು. ಇದರ ನೆನಪಾಗಿ ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿ ಗ್ರಾಮಸ್ಥರು ಗ್ರಾಮದಲ್ಲಿ 108 ಅಡಿ ಧ್ವಜಸ್ತಂಭದಲ್ಲಿ ಹನುಮ ಧ್ವಜವನ್ನು ಹಾರಿಸಿದ್ದರು. ಇದನ್ನು ತೆರವುಗೊಳಿಸಲು ಮುಂದಾದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಪ್ರತಿಭಟನೆ ಮಾಡಿದರು.

ಅಯೋಧ್ಯೆ ಬಾಲರಾಮ ಪ್ರಾಣ ಪ್ರತಿಷ್ಠಾಪನೆ ನೆನಪಿಗಾಗಿ ಹಾರಿಸಲಾದ ಹನುಮ ಧ್ವಜ ತೆರವಿಗೆ ಗ್ರಾಮಸ್ಥರ ವಿರೋಧ, ಲಾಠಿ ಚಾರ್ಜ್​​​​
ಹನುಮ ಧ್ವಜ ತೆರವಿಗೆ ವಿರೋಧ
Follow us
ಪ್ರಶಾಂತ್​ ಬಿ.
| Updated By: ವಿವೇಕ ಬಿರಾದಾರ

Updated on:Jan 28, 2024 | 1:34 PM

ಮಂಡ್ಯ, ಜನವರಿ 28: ಮಂಡ್ಯ (Mandya) ತಾಲೂಕಿನ ಕೆರಗೋಡು ಗ್ರಾಮದಲ್ಲಿ ಹಾರಿಸಲಾಗಿರುವ ಹನುಮ ಧ್ವಜವನ್ನು (Hanuma Flag) ತೆರವುಗೊಳಿಸಲು ಬಂದಿದ್ದ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವಿರುದ್ಧ  ಗ್ರಾಮಸ್ಥರು ಮತ್ತು ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇನ್ನು ವಿಚಾರ ತಿಳಿಯುತ್ತಿದ್ದಂತೆ ಗ್ರಾಮಕ್ಕೆ ಆಗಮಿಸಿದ ಪೊಲೀಸರು, ಧ್ವಜವನ್ನು ತೆರವುಗೊಳಿಸಲು ಮುಂದಾಗಿದ್ದಾರೆ. ಇದಕ್ಕೆ ಗ್ರಾಮಸ್ಥರು ಮತ್ತು ಹಿಂದೂ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, 144 ಸೆಕ್ಷನ್​ ಜಾರಿಯಾಗಿದೆ. ಆದರೂ ಕೂಡ ಪ್ರತಿಭಟನೆ ಮುಂದುವರೆಸಿದ  ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.

ಅಯೋಧ್ಯೆಯ ಶ್ರೀರಾಮ ಮಂದಿರ ಉದ್ಘಾಟನೆ ನೆನಪಿಗೆ ಹಾರಿಸಲಾದ ಧ್ವಜ

ಜನವರಿ 22 ರಂದು ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಬಾಲರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನೆರವೇರಿತು. ಇದರ ನೆನೆಪಾಗಿ ಗ್ರಾಮಸ್ಥರು ಗ್ರಾಮದಲ್ಲಿ 108 ಅಡಿ ಧ್ವಜಸ್ತಂಭದಲ್ಲಿ ಹನುಮ ಧ್ವಜವನ್ನು ಹಾರಿಸಿದ್ದರು. ಇದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಧ್ವಜ ಹಾರಾಟದ ಬಗ್ಗೆ ಗ್ರಾಮ ಪಂಚಾಯತ್​ ಸಾಮಾನ್ಯ ಸಭೆಯಲ್ಲಿ ಚರ್ಚೆ ನಡೆಯಿತು. 22 ಸದಸ್ಯ ಬಲದ ಗ್ರಾಮ ಪಂಚಾಯಿತಿಯಲ್ಲಿ ಹನುಮ ಧ್ವಜ ಹಾರಾಟಕ್ಕೆ 20 ಸದಸ್ಯರು ಬೆಂಬಲ ವ್ಯಕ್ತಪಡಿಸಿದರು. ಬಳಿಕ ಗ್ರಾಮ ಪಂಚಾಯತ್​ ಸದಸ್ಯರು ನಡಾವಳಿ ರಚಿಸಿ, ವಿವಾದ ಇತ್ಯರ್ಥ ಪಡಿಸಿದ್ದರು.

ಆದರೆ ಸರ್ಕಾರಿ ಜಾಗದಲ್ಲಿ ಹನುಮ ಧ್ವಜ ಹಾರಿಸಲಾಗಿದೆ ಎಂಬ ಕಾರಣ ನೀಡಿ ಕೆಲ ದಿನಗಳ ನಂತರ ಮೇಲಾಧಿಕಾರಿಗಳು ಧ್ವಜ ತೆರವುಗೊಳಿಸುವಂತೆ ತಾಲೂಕು ಪಂಚಾಯಿತಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹಿರಿಯ ಅಧಿಕಾರಗಳ ಮೌಖಿಕ ಆದೇಶದಂತೆ ಹನುಮ ಧ್ವಜ ತೆರವು ಮಾಡಲು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೀಣಾ ಗ್ರಾಮಕ್ಕೆ ಆಗಮಿಸಿದ್ದರು.

ಈ ವೇಳೆ ಭಜರಂಗದಳ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಜೈ ಶ್ರೀರಾಮ್, ಜೈ ಹನುಮಾನ್ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರಾಣ ಬಿಟ್ಟರು ಧ್ವಜ ಇಳಿಸಲ್ಲ ಎಂದು ಪಟ್ಟು ಹಿಡಿದರು. ಅಲ್ಲದೇ ಇದರ ಹಿಂದೆ ಕಾಂಗ್ರೆಸ್ ಶಾಸಕ, ಸಚಿವರ ಷಡ್ಯಂತ್ರ ಇದೆ ಎಂದು ಆರೋಪ ಮಾಡಿದರು. ರಾಮ ಮಂದಿರ ಉದ್ಘಾಟನೆ ಬಳಿಕ ಕಾಂಗ್ರೆಸ್ಸಿಗರಿಗೆ ಕೇಸರಿ ಕಂಡರೆ ಆಗುತ್ತಿಲ್ಲ. ಅಧಿಕಾರಿಗಳನ್ನು ದುರುಪಯೋಗ ಪಡಿಸಿಕೊಂಡು ಹನುಮ ಧ್ವಜ ಇಳಿಸಲು ಮುಂದಾಗಿದ್ದಾರೆ ಎಂದು ಕಿಡಿಕಾರಿದರು.

ಇದನ್ನೂ ಓದಿ: ಅಯೋಧ್ಯೆ ಬಾಲರಾಮನ ಮೂರ್ತಿ ರಚನೆಗೆ ಪ್ರೇರಣೆ ಆಯ್ತೇ ಉಡುಪಿಯಲ್ಲಿನ ವಿಷ್ಣು ವಿಗ್ರಹ?

ಗ್ರಾಮಸ್ಥರ ಪ್ರತಿಭಟನೆಯಿಂದ ತೆರಳಿದ್ದ ಅಧಿಕಾರಿಗಳು ರಾತ್ರೋರಾತ್ರಿ ಹನುಮ ಧ್ವಜ ತೆರವಿಗೆ ಗ್ರಾಮಕ್ಕೆ ಬಂದಿದ್ದಾರೆ. ನಸುಕಿನ ಜಾವ 3 ಗಂಟೆಗೆ ಗ್ರಾಮಕ್ಕೆ ಮಂಡ್ಯ ಎಸಿ ಶಿವಮೂರ್ತಿ, ತಹಸಿಲ್ದಾರ್ ಶಿವಕುಮಾರ್ ಬಿರಾದರ್ ಆಗಮಿಸಿ ಧ್ವಜ‌ ತೆರವುಗೊಳಿಸುವ ಯತ್ನಿಸಿದ್ದಾರೆ. ಅಲ್ಲದೆ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಸ್ಥಳದಲ್ಲಿ ಜಮಾಯಿಸಿದ್ದಾರೆ.

ಬಳಿಕ ಜೈ ಶ್ರೀರಾಮ್, ಜೈ ಹನುಮ ಘೋಷಣೆ‌ ಕೂಗುತ್ತಾ ಮಹಿಳೆಯರು ಹಾಗೂ ಯುವಕರು ಅಧಿಕಾರಿಗಳ ವಿರುದ್ಧ ಪ್ರತಿಭಟಿಸುತ್ತಾ ಧ್ವಜ ಕಂಬದ ಬಳಿ ಕುಳಿತಿದ್ದಾರೆ. ಕೆರೆಗೋಡು ಗ್ರಾಮಸ್ಥರಿಗೆ ಸಾಥ್ ನೀಡಲು ಹಲವೆಡೆಯಿಂದ‌ ಹಿಂದೂ ಕಾರ್ಯಕರ್ತರು ಗ್ರಾಮಕ್ಕೆ ಆಗಮಿಸುತ್ತಿದ್ದಾರೆ. ಸದ್ಯ ಕೆರೆಗೋಡು ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಗ್ರಾಮದಲ್ಲಿ ಬಿಗಿ‌ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಗ್ರಾಮದಲ್ಲಿ144 ಸೆಕ್ಷನ್ ಜಾರಿ ಜಾರಿಯಲ್ಲಿದೆ. ಐದಕ್ಕೂ ಹೆಚ್ಚು ಜನ ಸೇರುವಂತಿಲ್ಲ, ದಯವಿಟ್ಟು ಹೊರಡಿ ಎಂದು ಪೊಲೀಸರು ಮನವಿ ಮಾಡುತ್ತಿದ್ದಾರೆ. ಪೊಲೀಸರ ಹೇಳಿಕೆಗೆ ಗ್ರಾಮಸ್ಥರ ಕಿಡಿ ಕಾರಿದ್ದು, ಜಿಲ್ಲಾಡಳಿತ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:38 am, Sun, 28 January 24

ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್