AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀರಂಗಪಟ್ಟಣ: 50ಕ್ಕೂ ಹೆಚ್ಚು ರೈತರ ಜಮೀನಿನ ಪಹಣಿಯಲ್ಲಿ ವಕ್ಫ್​ ಹೆಸರು, ಅನ್ನದಾತರ ಅರೆಬೆತ್ತಲೆ ಧರಣಿ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಅನೇಕ ಗ್ರಾಮಗಳಲ್ಲಿನ ರೈತರ ಜಮೀನ ಪಹಣಿಯಲ್ಲಿ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಹೆಸರು ನಮೂದಾಗಿದೆ. ಶ್ರೀರಂಗಪಟ್ಟಣ ತಾಲೂಕು ಒಂದರಲ್ಲೇ ಒಟ್ಟು 70ಕ್ಕೂ ಹೆಚ್ಚು ಭೂಮಿಗಳ ಪಹಣಿಯಲ್ಲಿ ವಕ್ಫ್ ಮಂಡಳಿಯ ಹೆಸರು ಇದೆ. ಇದರಿಂದ ರೈತರು ಆತಂಕಕ್ಕೀಡಾಗಿದ್ದು, ಸಾಲ ಪಡೆಯಲು, ಜಮೀನು ಮಾರಾಟ ಮತ್ತು ಖರೀದಿಗೆ ತೊಂದರೆಯಾಗಿದೆ.

ಶ್ರೀರಂಗಪಟ್ಟಣ: 50ಕ್ಕೂ ಹೆಚ್ಚು ರೈತರ ಜಮೀನಿನ ಪಹಣಿಯಲ್ಲಿ ವಕ್ಫ್​ ಹೆಸರು, ಅನ್ನದಾತರ ಅರೆಬೆತ್ತಲೆ ಧರಣಿ
ಪಹಣಿಯಲ್ಲಿ ವಕ್ಫ್​ ಹೆಸರು
ಪ್ರಶಾಂತ್​ ಬಿ.
| Edited By: |

Updated on:Jan 12, 2025 | 8:24 AM

Share

ಮಂಡ್ಯ, ಜನವರಿ 12: ಕರ್ನಾಟಕದಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದ, ರಾಜಕೀಯ ವಾಗ್ಯುದ್ಧಕ್ಕೂ ಕಾರಣವಾಗಿದ್ದ ಕರ್ನಾಟಕ ರಾಜ್ಯ ವಕ್ಫ್​​ ಮಂಡಳಿ (Karnataka State Waqf Board) ​ವಿವಾದ ಮತ್ತೆ ಮುನ್ನಲೆಗೆ ಬಂದಿದೆ. ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ (Srirangapatna) ತಾಲೂಕಿನ ಪುರಾತನ ಮಂಟಪಗಳು, ಸ್ಮಾರಕಗಳು ಹಾಗೂ ಪುರಾತತ್ವ ಇಲಾಖೆಯ ಆಸ್ತಿ ಮತ್ತು ರೈತರ ಜಮೀನೂ ಸೇರಿದಂತೆ 70ಕ್ಕೂ ಹೆಚ್ಚು ಭೂಮಿ ಪಹಣಿಯಲ್ಲಿ “ಕರ್ನಾಟಕ ರಾಜ್ಯ ವಕ್ಫ್​ ಮಂಡಳಿ” ಎಂದು ನಮೂದು ಆಗಿದೆ.

ಕಿರಂಗೂರ, ಕೆ.ಶೆಟ್ಟಹಳ್ಳಿ, ಬಾಬಾರಾಯನಕೊಪ್ಪಲು, ದರಸಕುಪ್ಪೆ ಗ್ರಾಮಗಳ 50ಕ್ಕೂ ಹೆಚ್ಚು ರೈತರ ಜಮೀನಿನ ಪಹಣಿಯಲ್ಲಿ ವಕ್ಫ್​ ಮಂಡಳಿ ಅಂತ ನಮೂದಾಗಿದೆ. ರಾಜ್ಯ ಸರ್ಕಾರದ ಈ ಯಡವಟ್ಟಿಗೆ ಅನ್ನದಾತರು ಕಂಗಾಲಾಗಿದ್ದಾರೆ.

ಪಹಣಿಯಲ್ಲಿನ ಸ್ವಾಧೀನದಾರರ ಕಾಲಂನಲ್ಲಿ ರೈತರ ಹೆಸರಿದ್ದರೂ, ಋಣ ಕಲಂ ಅಂದರೆ ಕಲಂ 11ರಲ್ಲಿ ನಲ್ಲಿ ವಕ್ಫ್‌ ಮಂಡಳಿ ಹೆಸರು ಇದೆ. ಸಾಮಾನ್ಯವಾಗಿ ಜಮೀನಿನ ಮೇಲೆ ಸಾಲ ತೆಗೆದುಕೊಂಡರೆ ಅಥವಾ ನಂಬಿಕೆ ಕ್ರಯ ಮಾಡಿಸಿದರೆ ಮಾತ್ರ ಋಣ ಕಾಲಂನಲ್ಲಿ ಆ ಬ್ಯಾಂಕ್ ಅಥವಾ ವ್ಯಕ್ತಿಯ ಹೆಸರು ನಮೂದಿಸಲಾಗುತ್ತದೆ‌. ವಕ್ಫ್‌ ಮಂಡಳಿ ಹೆಸರು ನಮೂದಾಗಿರುವುದರಿಂದ ರೈತರು ಆತಂಕಕ್ಕೆ ಒಳಗಾಗಿದ್ದು, ಎಲ್ಲೂ ಸಾಲ ಸಿಗದೆ, ಜಮೀನು ಮಾರಾಟ ಮತ್ತು ಕೊಂಡುಕೊಳ್ಳಲೂ ಆಗದೆ ಪರದಾಡುತ್ತಿದ್ದಾರೆ.

ಇದನ್ನೂ ಓದಿ: ಬಾಗಲಕೋಟೆಗೆ ಕಾಲಿಟ್ಟ ವಕ್ಫ್​​: ಮನೆ, ಸರ್ಕಾರಿ ಕಟ್ಟಡಗಳಿಗೆ ನೋಟಿಸ್, ಕಾನೂನು ಹೋರಾಟಕ್ಕೆ ಗ್ರಾಮಸ್ಥರು ಸಿದ್ಧ

ಜಮೀನಿನ ಪಹಣಿಯಲ್ಲಿ ವಕ್ಫ್​​ ​ಹೆಸರು ನಮೂದುಗೊಂಡಿದ್ದಕ್ಕೆ ಆಕ್ರೋಶ ಗೊಂಡಿರುವ ರೈತರು ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದಾರೆ. ಹೀಗಾಗಿ, ರೈತರ ಪರವಾಗಿ ವಿಶ್ವ ಹಿಂದೂ ಪರಿಷತ್, ಭಜರಂಗ ದಳ, ರೈತಸಂಘ, ಮಂಡ್ಯ ರಕ್ಷಣಾ ವೇದಿಕೆ ಸೇರಿದಂತೆ‌ ವಿವಿಧ ಸಂಘಟನೆಗಳು ಬೃಹತ್ ಹೋರಾಟಕ್ಕೆ ಸಜ್ಜಾಗಿದ್ದು, ಜನವರಿ 20ರಂದು ಶ್ರೀರಂಗಪಟ್ಟಣ ಸ್ವಯಂ ಪ್ರೇರಿತ ಬಂದ್​ಗೆ ಕರೆ ನೀಡಿವೆ. ಅನ್ನದಾತರು ಜಾನುವಾರುಗಳೊಂದಿಗೆ ಬೀದಿಗಿಳಿಯಲಿದ್ದಾರೆ.

ಸರ್ಕಾರಿ ಶಾಲೆ ಮೇಲೂ ವಕ್ಫ್​ ದೃಷ್ಟಿ

ಶ್ರೀರಂಗಪಟ್ಟಣ ತಾಲೂಕಿನ ಚಂದಗಾಲು ಗ್ರಾಮದಲ್ಲಿನ ಸರ್ಕಾರ ಶಾಲೆಯ ಸರ್ವೆ ನಂ 215ರ 30 ಗುಂಟೆ ಜಮೀನಲ್ಲಿ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದು ಆಗಿತ್ತು. ವಕ್ಫ್ ಆಸ್ತಿ ಅಂತ 2015ರಲ್ಲೇ ಆಗಿದ್ದು, ಪಹಣಿ ಪರಿಶೀಲಿಸಿದಾಗ ತಿಳಿದುಬಂದಿತ್ತು. ವಕ್ಫ್​ ಮಂಡಳಿ ಶಾಲೆ ಜಾಗ ಕಬಳಿಕೆಗೆ ಮುಂದಾಗಿದೆ ಎಂದು ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದರು. ವಕ್ಫ ಆಸ್ತಿ ಅಂತ ನಮೂದು ಆಗಿದ್ದನ್ನು ಬದಲಾಯಿಸುವಂತೆ ಒತ್ತಾಯಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:17 am, Sun, 12 January 25

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​