ಕೆಆರ್​ಎಸ್​ನಿಂದ ಯಾವುದೇ ಕ್ಷಣದಲ್ಲಾದರೂ ನೀರು ಹೊರಕ್ಕೆ: ನದಿ ಪಾತ್ರದ ಜನರಿಗೆ ಎಚ್ಚರಿಕೆ ಸಂದೇಶ ರವಾನೆ

|

Updated on: Jul 19, 2024 | 5:16 PM

ಭಾರಿ ಮಳೆಗೆ ಕೃಷ್ಣರಾಜ ಸಾಗರ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, 10 ಸಾವಿರ ದಿಂದ 25 ಸಾವಿರ ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಬಿಡಲು ತೀರ್ಮಾನಿಸಲಾಗಿದೆ. ಆದ್ದರಿಂದ ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿರುವ ಮತ್ತು ನದಿಯ ಎರಡು ದಂಡೆಗಳಲ್ಲಿನ ಸಾರ್ವಜನಿಕರು ಸ್ಥಳಾಂತರಗೊಳ್ಳಲು ಕಾವೇರಿ ನೀರಾವರಿ ನಿಗಮ ಮನವಿ ಮಾಡಿದೆ.

ಕೆಆರ್​ಎಸ್​ನಿಂದ ಯಾವುದೇ ಕ್ಷಣದಲ್ಲಾದರೂ ನೀರು ಹೊರಕ್ಕೆ: ನದಿ ಪಾತ್ರದ ಜನರಿಗೆ ಎಚ್ಚರಿಕೆ ಸಂದೇಶ ರವಾನೆ
ಕೆಆರ್​ಎಸ್​ ಜಲಾಶಯ
Follow us on

ಮಂಡ್ಯ, ಜು.19: ಕಾವೇರಿ ನದಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜಸಾಗರ ಜಲಾಶಯ(KRS Dam) ಕ್ಕೆ ಹೆಚ್ಚಿನ ಒಳಹರಿವು ಬರುತ್ತಿದ್ದು, ಕೆಆರ್​ಎಸ್​ ಜಲಾಶಯದಿಂದ ಹೆಚ್ಚುವರಿ ನೀರನ್ನು ಯಾವುದೇ ಸಂದರ್ಭದಲ್ಲಾದರೂ ಕಾವೇರಿ ನದಿಗೆ ಬಿಡಲಾಗುವುದು. ಆದ್ದರಿಂದ ಕಾವೇರಿ ನದಿ ಪಾತ್ರದ ತಗ್ಗು ಪ್ರದೇಶದಲ್ಲಿರುವ ಮತ್ತು ನದಿಯ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು ತಮ್ಮ ಆಸ್ತಿ,ಪಾಸ್ತಿ ಹಾಗೂ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ, ಸೂಕ್ತ ಮುಂಜಾಗ್ರತೆ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚಿಸಲಾಗಿದೆ.

ಭಾರಿ ಮಳೆಗೆ ಕೃಷ್ಣರಾಜ ಸಾಗರ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, 10 ಸಾವಿರ ದಿಂದ 25 ಸಾವಿರ ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಬಿಡಲು ತೀರ್ಮಾನಿಸಲಾಗಿದೆ. ಒಳಹರಿವು ಹೆಚ್ಚಳವಾದ್ರೆ ಹೊರಹರಿವು ಹೆಚ್ಚಿಸಲು ನಿರ್ಧರಿಸಿ, ಮುಂಜಾಗ್ರತಾ ಕ್ರಮವಾಗಿ ನದಿಗೆ ನೀರು ಬಿಡುಗಡೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆದ್ದರಿಂದ ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿರುವ ಮತ್ತು ನದಿಯ ಎರಡು ದಂಡೆಗಳಲ್ಲಿನ ಸಾರ್ವಜನಿಕರು ಸ್ಥಳಾಂತರಗೊಳ್ಳಲು ಕಾವೇರಿ ನೀರಾವರಿ ನಿಗಮ ಮನವಿ ಮಾಡಿದೆ.

ಇದನ್ನೂ ಓದಿ:ಕಾವೇರಿ ನದಿಗೆ ಜೀವಕಳೆ: ಒಂದೇ ದಿನದಲ್ಲಿ ಹರಿದು ಬಂತು 2 ಟಿಎಂಸಿ ನೀರು, ಒಳಹರಿವಿನಲ್ಲಿ ಭಾರಿ ಹೆಚ್ಚಳ

ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್​ಎಸ್​ ಜಲಾಶಯ 124.80 ಅಡಿ ನೀರು ಸಂಗ್ರಹ ಹೊಂದಿದ್ದು, ಸದ್ಯ ಜಲಾಶಯದಲ್ಲಿ 107.60 ಅಡಿ ನೀರು ಸಂಗ್ರಹವಾಗಿದೆ. ಕೆಲವೇ ದಿನಗಳ ಕೆಳಗೆ ಜಲಾಶಯದ ಹಿನ್ನೀರು ಪ್ರದೇಶ ಸಂಪೂರ್ಣವಾಗಿ ಖಾಲಿ ಖಾಲಿಯಾಗಿತ್ತು. ಇದೀಗ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಜಲಾಶಯ ಭರ್ತಿಯಾಗಿದ್ದು, ಯಾವುದೇ ಸಮಯದಲ್ಲಾದರೂ ನೀರು ಬಿಡುಗಡೆ ಸಾಧ್ಯತೆಯಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:05 pm, Fri, 19 July 24