ವಿಧಾನ ಪರಿಷತ್ ಚುನಾವಣೆ: ಯಾವ ಪಕ್ಷಕ್ಕೆ ಸಿಗಲಿದೆ ಸಂಸದೆ ಸುಮಲತಾ ಅಂಬರೀಶ್ ಬೆಂಬಲ?

ಡಿಸೆಂಬರ್ 10 ರಂದು ನಡೆಯಲಿರುವ ಎಂಎಲ್ಸಿ ಚುನಾವಣೆಯಲ್ಲಿ ಸಂಸದೆ ಸುಮಲತಾ ಬೆಂಬಲ ಯಾರಿಗೆ ಸಿಗಲಿದೆ. ಚುನಾವಣೆ ಫಲಿತಾಂಶ ಏನಾಗಲಿದೆ ಎಂಬುದರ ಕುರಿತು ನಿರೀಕ್ಷೆ ಹೆಚ್ಚಿಸಿದೆ.

ವಿಧಾನ ಪರಿಷತ್ ಚುನಾವಣೆ: ಯಾವ ಪಕ್ಷಕ್ಕೆ ಸಿಗಲಿದೆ ಸಂಸದೆ ಸುಮಲತಾ ಅಂಬರೀಶ್ ಬೆಂಬಲ?
ಜೆಡಿಎಸ್ ಅಪ್ಪಾಜಿ ಗೌಡ, ಕಾಂಗ್ರೆಸ್ ದಿನೇಶ್ ಗೂಳಿಗೌಡ ಮತ್ತು ಬಿಜೆಪಿ ಮಂಜುನಾಥ್
Follow us
TV9 Web
| Updated By: ಆಯೇಷಾ ಬಾನು

Updated on: Nov 24, 2021 | 12:56 PM

ಮಂಡ್ಯ: ಸಕ್ಕರೆ ನಾಡಲ್ಲಿ ವಿಧಾನ ಪರಿಷತ್ ಚುನಾವಣಾ ಕಣ ರಂಗೇರಿದೆ. ಮೂರು ಪಕ್ಷಗಳ ಅಭ್ಯರ್ಥಿಗಳು ತಮ್ಮ ತಮ್ಮ ಗೆಲುವಿಗೆ ಕಸರತ್ತು ಆರಂಭಿಸಿದ್ದು ಗೆಲುವಿಗಾಗಿ ತಮ್ಮದೇ ಕಾರ್ಯತಂತ್ರದಲ್ಲಿ ತೊಡಗಿದ್ದಾರೆ. ಈ ನಡುವೆ ಮಂಡ್ಯದಲ್ಲಿ ನಡೆಯುತ್ತಿರೊ ಚುನಾವಣೆಯಲ್ಲಿ ಸಂಸದೆ ಸುಮಲತಾ ಅಂಬರೀಶ್ ಅವರ ಬೆಂಬಲ ಯಾರಿಗೆ ಸಿಗಲಿದೆ ಅನ್ನೋದೆ ಕುತೂಹಲಕರವಾಗಿದೆ.

ಮಂಡ್ಯ ಜಿಲ್ಲೆ ರಾಜಕೀಯ ಕ್ಷೇತ್ರದಲ್ಲಿ ತನ್ನದೇ ಮಹತ್ವ ಪಡೆದುಕೊಂಡಿದೆ. ಇಲ್ಲಿ ಯಾವುದೇ ಬೆಳವಣಿಗೆ ನಡೆದರೂ ಅದು ರಾಜ್ಯ ರಾಜಕೀಯದಲ್ಲಿ ಮಹತ್ವ ಪಡೆದುಕೊಳ್ಳುತ್ತದೆ. ಈಗ ಡಿಸೆಂಬರ್ 10 ರಂದು ನಡೆಯಲಿರುವ ಎಂಎಲ್ಸಿ ಚುನಾವಣೆಯಲ್ಲೂ ಅದು ಮರುಕಳಿಸೊ ಸಾಧ್ಯತೆ ಇದೆ. ಈ ಚುನಾವಣೆಯಲ್ಲಿ ಸಂಸದೆ ಸುಮಲತಾ ಬೆಂಬಲ ಯಾರಿಗೆ ಸಿಗಲಿದೆ. ಚುನಾವಣೆ ಫಲಿತಾಂಶ ಏನಾಗಲಿದೆ ಎಂಬುದರ ಕುರಿತು ನಿರೀಕ್ಷೆ ಹೆಚ್ಚಿಸಿದೆ. ಸದ್ಯ ಎಂಎಲ್ಸಿ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸಚಿವ ಸೋಮ ಶೇಖರ್ ಕಾರ್ಯದರ್ಶಿಯಾಗಿದ್ದ ದಿನೇಶ್ ಗೂಳಿಗೌಡ ಅಭ್ಯರ್ಥಿಯಾಗಿದ್ದಾರೆ. ಬಿಜೆಪಿಯಿಂದ ಬೂಕಹಳ್ಳಿ ಮಂಜುನಾಥ್ ಅಭ್ಯರ್ಥಿಯಾಗಿದ್ದಾರೆ. ಜೆಡಿಎಸ್ನಿಂದ ಅಪ್ಪಾಜಿ ಗೌಡ ಎರಡನೇ ಬಾರಿಗೆ ಅಭ್ಯರ್ಥಿಯಾಗಿದ್ದಾರೆ. ಇಲ್ಲಿ ಜೆಡಿಎಸ್ ಹೊರತು ಪಡಿಸಿ ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳು ತಮ್ಮ ತಮ್ಮ ಗೆಲುವಿಗಾಗಿ ಸುಮಲತಾ ಬೆಂಬಲಕ್ಕಾಗಿ ಪೈಪೋಟಿ ಶುರು ಮಾಡಿದ್ದಾರೆ.

ಈ ಸಂಬಂಧ ನಿನ್ನೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ ನಾವು ಸುಮಲತಾರ ಚುನಾವಣೆಯಲ್ಲಿ ಕೆಲಸ ಮಾಡಿದ್ದೀವಿ ಅವರು ನಮ್ಮ ಪರವಾಗಿ ಕೆಲಸ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು. ಆದ್ರೆ ಕಾಂಗ್ರೆಸ್ ಎಲ್ಲೂ ಸುಮಲತಾ ನಮಗೆ ಬೆಂಬಲ ನೀಡ್ತಾರೆ ನಾವು ಅವರಿಗೆ ಬೆಂಬಲ ನೀಡಿದ್ದೀವಿ ಎಂಬ ಬಗೆಗೆ ಎಲ್ಲೂ ಮಾತನಾಡಿಲ್ಲ. ಆದ್ರೆ ಅವರ ಬೆಂಬಲದ ನಿರೀಕ್ಷೆಯಲ್ಲಂತೂ ಇದ್ದಾರೆ.

ಸುಮಲತಾ ರಾಜಕೀಯಕ್ಕೆ ಬಂದದ್ದೆ ರೋಚಕ ಕತೆ 2018 ರ ನವಂಬರ್ ತಿಂಗಳಲ್ಲಿ ಮಂಡ್ಯದ ಗಂಡು ಅಂಬರೀಶ್ ನಮ್ಮನ್ನೆಲ್ಲಾ ಬಿಟ್ಟು ಅಗಲಿದ್ದರು. ಅಂಬರೀಶ್ ಇಹಲೋಕ ತ್ಯೆಜಿಸಿದ ಐದಾರು ತಿಂಗಳಲ್ಲೇ 2019 ರ ಸಾರ್ವತ್ರಿಕ ಲೋಕಸಭೆ ಚುನಾವಣೆ ಎದುರಾಯ್ತು. ಆಗ ರಾಜ್ಯದಲ್ಲಿ ಹೆಚ್ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಇತ್ತು. ಆಗ ಕಾಂಗ್ರೆಸ್ ಜೆಡಿಎಸ್ ಪಕ್ಷಗಳು ಒಪ್ಪಂದ ಮಾಡಿಕೊಂಡು ಮಂಡ್ಯ ಕ್ಷೇತ್ರವನ್ನ ಕಾಂಗ್ರೆಸ್ ಜೆಡಿಎಸ್ ಗೆ ಬಿಟ್ಟುಕೊಟ್ಟಿತ್ತು. ಜೆಡಿಎಸ್ ನಿಂದ ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿಯಾಗಿದ್ದರೆ ಕಾಂಗ್ರೆಸ್ ನಿಖಿಲ್ಗೆ ಬೆಂಬಲ ಸೂಚಿಸಿ ಎರಡೂ ಪಕ್ಷಗಳು ಒಟ್ಟಿಗೆ ಚುನಾವಣೆ ಎದುರಿಸಲು ಸಿದ್ದರಾಗಿದ್ದರು. ಈ ವೇಳೆ ಸ್ವಾಭಿಮಾನದ ಹೆಸರಿನಲ್ಲಿ ಮಂಡ್ಯ ರಾಜಕೀಯಕ್ಕೆ ಎಂಟ್ರಿ ಕೊಟ್ಟ ರೆಬಲ್ ಲೇಡಿ ಸುಮಲತಾ ಅಂಬರೀಶ್ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಇಳಿದರು.

ಜೆಡಿಎಸ್ ಭದ್ರಕೋಟೆಯಾಗಿದ್ದ ಮಂಡ್ಯದಲ್ಲಿ ಸುಮಲತಾ ಹೋರಾಡಿ ಗೆದ್ದಿದ್ದು ಈಗ ಇತಿಹಾಸ. 2018 ರ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿನ ಏಳೂ ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲುವು ಪಡೆದು ಇತಿಹಾಸ ನಿರ್ಮಿಸಿತ್ತು. ಮೊದಲೇ ಸೋಲಿನಿಂದ ಕಂಗೆಟ್ಟಿದ್ದ ಕಾಂಗ್ರೆಸ್ ನಾಯಕರು ಕುಮಾರಸ್ವಾಮಿ ವಿರುದ್ದ ಸೇಡು ತೀರಿಸಿಕೊಳ್ಳಲು ಸಮಯಕ್ಕಾಗಿ ಕಾಯುತ್ತಿದ್ದರು ಈ ವೇಳೆಗಾಗಲೇ ಎದುರಾದ ಲೋಕಸಭೆ ಚುನಾವಣೆಯಲ್ಲಿ ಸುಮಲತಾ ಪಕ್ಷೇತರ ಅಭ್ಯರ್ಥಿಯಾಗಿದ್ದರೂ ಕಾಂಗ್ರೆಸ್ ನಲ್ಲಿ ಸೋತಿದ್ದ ನಾಯಕರೆಲ್ಲರೂ ಒಟ್ಟಿಗೆ ಸೇರಿ ತಮ್ಮ ಪಕ್ಷದ ಸೂಚನೆಯನ್ನೂ ಧಿಕ್ಕರಿಸಿ ಸುಮಲತಾರಿಗೆ ಬೆಂಬಲ ನೀಡಿ ಗೆಲ್ಲಿಸಲು ನೆರವಾಗಿದ್ದರು. ಬಿಜೆಪಿ ತಮ್ಮ ಅಭ್ಯರ್ಥಿಯನ್ನ ಚುನಾವಣೆಗೆ ನಿಲ್ಲಿಸದೆ ಸುಮಲತಾರಿಗೆ ಬೆಂಬಲ ನೀಡಿ ಚುನಾವಣೆ ಎದುರಿಸಿತ್ತು.

ಎರಡೂ ಪಕ್ಷಗಳ ಬೆಂಬಲದಿಂದಾಗಿ ಸುಮಲತಾ ಅವರು ನಿಖಿಲ್ ವಿರುದ್ದ ಅನಾಯಾಸವಾಗಿ ಗೆಲುವು ಸಾಧಿಸಿದ್ದರು. ಸುಮಲತಾ ಅಂಬರೀಶ್ ಸಂಸದೆಯಾದ ನಂತರ ಎದುರಾಗಿರೊ ಎರಡನೇ ಚುನಾವಣೆ ಇದಾಗಿದೆ. 2019 ಏಪ್ರಿಲ್, ಮೇ ನಲ್ಲಿ ಸಂಸದೆಯಾಗಿ ಆಯ್ಕೆಯಾದ ನಂತರ ಇದೇ ವರ್ಷದಲ್ಲಿ ಕೆಆರ್ ಪೇಟೆ ಕ್ಷೇತ್ರದ ಉಪ ಚುನಾವಣೆ ನಡೆಯಿತು. ಆಗಲೂ ಎರಡೂ ಪಕ್ಷಗಳ ಅಭ್ಯರ್ಥಿಗಳು ಸುಮಲತಾರ ಬೆಂಬಲ ನಿರೀಕ್ಷೆ ಮಾಡಿದ್ದರು. ಆಗ ಯಾರಿಗೂ ಬಹಿರಂಗವಾಗಿ ಬೆಂಬಲ ಸೂಚಿಸದ ಸಂಸದೆ ಸುಮಲತಾ ಅವರು ತಟಸ್ಥವಾಗಿದ್ದರು.

ಇದಾದ ಕೆಲವು ತಿಂಗಳಲ್ಲಿ ಗ್ರಾಮ ಪಂಚಾಯ್ತಿಗಳ ಚುನಾವಣೆ ನಡೆಯಿತು ಆಗಲೂ ಗ್ರಾ. ಪಂ ಚುನಾವಣೆ ಪಕ್ಷಗಳ ಹೆಸರಿನಲ್ಲಿ ನಡೆಯುವುದಿಲ್ಲ ಎಂದು ಹೇಳಿ ಸುಮ್ಮನಾಗಿದ್ದರು. ಈಗ ಎಮ್ಎಲ್ಸಿ ಚುನಾವಣೆ ಪಕ್ಷಗಳ ಹೆಸರಿನಲ್ಲೇ ನಡೆಯುತ್ತಿದ್ದು ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಪಕ್ಷಗಳ ಬೆಂಬಲ ಪಡೆದುಕೊಂಡು ಸಂಸದರಾಗಿರೊ ಸುಮಲತಾ ಈಗ ಯಾರಿಗೆ ಬೆಂಬಲ ಕೊಡ್ತಾರೆ ಕಾದುನೋಡಬೇಕಿದೆ.

ವರದಿ: ರವಿ ಲಾಲಿಪಾಳ್ಯ, ಟಿವಿ9 ಮಂಡ್ಯ

ಇದನ್ನೂ ಓದಿ: Karnataka Congress: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್​ ಅಭ್ಯರ್ಥಿಗಳ ಪಟ್ಟಿ ಪ್ರಕಟ

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ