AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈತ್ರಿ ಟಿಕೆಟ್ ಕೈ ತಪ್ಪಿದರೆ ಕಾಂಗ್ರೆಸ್​ ಸೇರುತ್ತಾರಾ ಸಿಪಿ ಯೋಗೇಶ್ವರ್​? ಅಡ್ಡ ಗೋಡೆ ಮೇಲೆ ದೀಪ ಇಟ್ಟ ಮಾಜಿ MLC

ಮಂಡ್ಯದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮಾಜಿ ಎಮ್​ಎಲ್​ಸಿ ಸಿಪಿ ಯೋಗೇಶ್ವರ್‌, ‘ ಚುನಾವಣೆ ಮುಂದಿನ ತಿಂಗಳು 10 ರಂದು ಘೋಷಣೆ ಆಗಬಹುದು. ಎರಡೂ ಪಕ್ಷದ ತೀರ್ಮಾನಕ್ಕೆ ಬದ್ದರಾಗಿರಬೇಕಿರುತ್ತದೆ. ಬಿಜೆಪಿ , ಜೆಡಿಎಸ್ ರಾಷ್ಟ್ರ ಮಟ್ಟದಲ್ಲಿ ಹೊಂದಾಣಿಕೆ ಮಾಡಿಕೊಂಡಿದ್ದೇವೆ. ನಮ್ಮ ವರಿಷ್ಠರ ತೀರ್ಮಾನ ಕಾದು ನೋಡೋಣ ಎಂದರು.

ಮೈತ್ರಿ ಟಿಕೆಟ್ ಕೈ ತಪ್ಪಿದರೆ ಕಾಂಗ್ರೆಸ್​ ಸೇರುತ್ತಾರಾ ಸಿಪಿ ಯೋಗೇಶ್ವರ್​? ಅಡ್ಡ ಗೋಡೆ ಮೇಲೆ ದೀಪ ಇಟ್ಟ ಮಾಜಿ MLC
ಸಿಪಿ ಯೋಗೇಶ್ವರ್‌
ಪ್ರಶಾಂತ್​ ಬಿ.
| Edited By: |

Updated on: Sep 29, 2024 | 6:23 PM

Share

ಮಂಡ್ಯ, ಸೆ.29: ಮೈತ್ರಿ ಟಿಕೆಟ್ ಕೈ ತಪ್ಪಿದರೆ ಕಾಂಗ್ರೆಸ್ ಪಕ್ಷ ಸೇರುವ ವಿಚಾರವಾಗಿ ಅಡ್ಡ ಗೋಡೆಮೇಲೆ ದೀಪ ಇಟ್ಟ ರೀತಿಯಲ್ಲಿ ಮಾಜಿ ಎಮ್​ಎಲ್​ಸಿ ಸಿಪಿ ಯೋಗೇಶ್ವರ್‌(CP Yogeshwara) ಪ್ರತಿಕ್ರಿಯೆ ನೀಡಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ಆ ಬಗ್ಗೆ ನಾನು ಯೋಚನೆ ಮಾಡಿಲ್ಲ. ಈ ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು. ಪರೋಕ್ಷವಾಗಿ ಬಿಜೆಪಿ ಹೈಕಮಾಂಡ್​ಗೆ ಎಚ್ಚರಿಕೆ ಕೊಟ್ಟಿದ್ದಾರೆ. ಇನ್ನು ಕಾಂಗ್ರೆಸ್​ನಿಂದ ಯಾರು ನನ್ನನ್ನು ಭೇಟಿ ಮಾಡಿಲ್ಲ. ಸ್ಪರ್ಧೆ ಮಾಡುವಂತೆ ಒತ್ತಡವಿದೆ, ಮುಂದೆ ನೋಡ್ತಿನಿ. ರಾಜಕಾರಣದಲ್ಲಿ ನಾವು ನೀವು ಯಾರು ಊಹೇ ಮಾಡದ ಘಟನೆಗಳು ನಡೆಯುತ್ತಿವೆ. ಪಕ್ಷಾಂತರ ಮಾಡುವ ಯಾವುದೇ ಆಲೋಚನೆ ಇಲ್ಲ ಎಂದು ತಿಳಿಸಿದರು.

ಬಳಿಕ ಚನ್ನಪಟ್ಟಣ ಉಪಚುನಾವಣಾ ಸ್ಪರ್ಧೆ ವಿಚಾರವಾಗಿ ಮಾತನಾಡಿ, ಚುನಾವಣೆ ಮುಂದಿನ ತಿಂಗಳು 10 ರಂದು ಘೋಷಣೆ ಆಗಬಹುದು. ಎರಡೂ ಪಕ್ಷದ ತೀರ್ಮಾನಕ್ಕೆ ಬದ್ದರಾಗಿರಬೇಕಿರುತ್ತದೆ. ಬಿಜೆಪಿ , ಜೆಡಿಎಸ್ ರಾಷ್ಟ್ರ ಮಟ್ಟದಲ್ಲಿ ಹೊಂದಾಣಿಕೆ ಮಾಡಿಕೊಂಡಿದ್ದೇವೆ. ನಮ್ಮ ವರಿಷ್ಠರ ತೀರ್ಮಾನ ಕಾದು ನೋಡೋಣ. ಚುನಾವಣೆ ಸ್ಪರ್ಧೆಗೆ ಜನರ ಒತ್ತಾಯ ಇದೆ. ನಾನು ಪಕ್ಷದ ಕಾರ್ಯಕರ್ತನಾಗಿ ಪಕ್ಷದ ಮಾತನ್ನು ಕೇಳಬೇಕು ಎಂದರು.

ಇದನ್ನೂ ಓದಿ:ಯೋಗೇಶ್ವರ್​ಗೆ ಕೇಂದ್ರ ಮಟ್ಟದಲ್ಲಿ ಸ್ಥಾನಮಾನ? ಚನ್ನಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಸಲು ಹೆಚ್​ಡಿಕೆ ಮತ್ತೊಂದು ತಂತ್ರ!

ಇನ್ನು ಚನ್ನಪಟ್ಟಣಕ್ಕೆ ಡಿಸಿಎಂ ಡಿಕೆಶಿ ಪದೇ ಪದೇ ಭೇಟಿ ಕುರಿತು ಪ್ರತಿಕ್ರಿಯೆ ನೀಡಿ, ಉಪ ಚುನಾವಣೆಗಳು ಬಂದ ಸಂದರ್ಭದಲ್ಲಿ ಭೇಟಿ ನೀಡೋದು ಸಹಜ‌. ಉಪಚುನಾವಣೆ ಬಂದಾಗ ಘೋಷಣೆ ಮಾಡುವುದು ಸಾಮಾನ್ಯ. ಬಜೆಟ್​ಗೂ ಉಪ ಚುನಾವಣೆ ಘೋಷಣೆಗೂ ವ್ಯತ್ಯಾಸ ಇದೆ. ಇಂತಹ ಕಾರ್ಯಕ್ರಮಗಳಿಗೆ ಅಷ್ಟೊಂದು ಮಹತ್ವ ಇಲ್ಲ ಎಂದು ತಿರುಗೇಟು ನೀಡಿದರು.

ಇದೇ ವೇಳೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಆಗ್ರಹ ವಿಚಾರವಾಗಿ ಮಾತನಾಡಿ, ಕಾನೂನು ಪ್ರಕ್ರಿಯೆ ಪ್ರಾರಂಭವಾಗಿದೆ. ಕಾನೂನು ಹೋರಾಟ ಮಾಡ್ತಿದ್ದಾರೆ. ನನಗೆ ಸ್ಪಷ್ಟ ಚಿತ್ರಣ ಇಲ್ಲ. ಮುಖ್ಯಮಂತ್ರಿಗಳು ಬಹಳ ಸೂಕ್ಷ್ಮಮತಿಯಿಂದ ಇದ್ದಾರೆ ನೋಡೋಣ ಎಂದರು. ಚುನಾವಣಾ ಬಾಂಡ್ ಪ್ರಕರಣ ಕೇಂದ್ರ ಸಚಿವರ ಮೇಲೆ FIR ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ, ನಾನು ನೋಡಿಲ್ಲ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ