ಬಸ್​​ನಲ್ಲೇ ರಣ ಚಂಡಿ ಅವತಾರ: ಕೀಟಲೆ ಕೊಟ್ಟ ಯುವಕನ ಗ್ರಹಚಾರ ಬಿಡಿಸಿದ ಯುವತಿ

ತನ್ನ ಮೇಲೆ ಕೈ ಹಾಕಿದ ಯುವಕನಿಗೆ ಯುವತಿ ಧರ್ಮದೇಟು ನೀಡಿರುವ ಘಟನೆ ಮಂಡ್ಯದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.

ಬಸ್​​ನಲ್ಲೇ ರಣ ಚಂಡಿ ಅವತಾರ: ಕೀಟಲೆ ಕೊಟ್ಟ ಯುವಕನ ಗ್ರಹಚಾರ ಬಿಡಿಸಿದ ಯುವತಿ
ಯುವಕನಿಗೆ ಥಳಿಸಿದ ಯುವತಿ
Follow us
ವಿವೇಕ ಬಿರಾದಾರ
|

Updated on:Jun 05, 2023 | 10:32 AM

ಮಂಡ್ಯ: ಬಸ್​ಗಳಲ್ಲಿ​ ಕೆಲ ಕಿಡಿಗೇಡಿಗಳು ಮಹಿಳೆಯರಿಗೆ ತೊಂದರೆ ಕೊಡುತ್ತಿರುತ್ತಾರೆ. ಇದರಿಂದ ಕೆಲವು ಮಹಿಳೆಯರು ಸಿಟ್ಟಿಗೆದ್ದು ಸರಿಯಾಗಿ ಬಾರಿಸಿರುತ್ತಾರೆ. ಇನ್ನು ಕೆಲವರು ಅಸಹಾಯಕರಾಗಿ ಸುಮ್ಮನಾಗಿ ಬಿಡುತ್ತಾರೆ. ಆದರೆ ಇಲ್ಲಿ ಓರ್ವ ಯುವತಿ ಕಚೇಷ್ಟೆ ನೀಡಿದ ವ್ಯಕ್ತಿಗೆ ತಕ್ಕ ಶಾಸ್ತಿ ಮಾಡಿದ್ದಾಳೆ. ಹೌದು ತನ್ನ ಮೇಲೆ ಕೈ ಹಾಕಿದ ಯುವಕನಿಗೆ (Teen Boy) ಯುವತಿ (Teen Girl) ಧರ್ಮದೇಟು ನೀಡಿರುವ ಘಟನೆ ಮಂಡ್ಯದ (Mandya) ಕೆಎಸ್‌ಆರ್‌ಟಿಸಿ (KSRTC) ಬಸ್ ನಿಲ್ದಾಣದಲ್ಲಿ ನಡೆದಿದೆ.

ಮಂಡ್ಯದಿಂದ ಪಾಂಡವಪುರಕ್ಕೆ (Pandavapura) ತೆರಳುವ ಬಸ್​ನಲ್ಲಿ ಯುವತಿ ಒಬ್ಬಳೆ ಕುಳಿತಿದ್ದಳು. ಯುವತಿ ಕುಳಿತಿದ್ದನ್ನು ಗಮನಿಸಿ ಹಿಂದಿನ ಸೀಟಿನಲ್ಲಿ ಬಂದು ಕುಳಿತ ಯುವಕ, ಮುಂದಿನ ಸೀಟಿನಲ್ಲಿ ಕುಳಿತಿದ್ದ ಯುವತಿಗೆ ಹಿಂದಿನಿಂದ ಕೀಟಲೆ ಕೊಡಲು ಶುರು ಮಾಡಿದ್ದಾನೆ. ಯುವತಿಗೆ ಕದ್ದು ಮುಚ್ಚಿ ಮುಟ್ಟುತ್ತ ಕುಚೇಷ್ಟೆ ಮಾಡಿದ್ದಾನೆ.

ಇದನ್ನೂ ಓದಿ: Viral Video: ರಾಮ್ತಾ ಜೋಗಿ ಹಾಡಿಗೆ ಸಕತ್ ಆಗಿ ಸ್ಟೆಪ್ಸ್ ಹಾಕಿದ ಕಾಲೇಜು ಯುವತಿಯರು

ಯುವಕನ ಕುಚೇಷ್ಟೆಗೆ ರೊಚ್ಚಿಗೆದ್ದ ಯುವತಿ ಬಸ್​ನಲ್ಲಿ ಎಲ್ಲರೆದುರು ಮುಖಕ್ಕೆ ಪಂಚ್ ಮಾಡಿದ್ದಾಳೆ. ನಂತರ ಯುವಕನ ಟೀ ಶರ್ಟ್ ಹಿಡಿದು ಹಿಗ್ಗಾ ಮುಗ್ಗ ಕೆನ್ನೆಗೆ ಬಾರಿಸಿದ್ದಾಳೆ. ಇನ್ನು ಯುವತಿ ನೀಡಿದ ಧರ್ಮಧೇಟು ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಯುವತಿ ಕೈಯಲ್ಲಿ ಏಟು ತಿಂದ ಯುವಕ ಬಸ್​​​ನಿಂದ ಪರಾರಿಯಾಗಿದ್ದಾನೆ.

ಮಹಿಳೆಯ ಜಡೆಗೆ ಕೈ ಹಾಕಿದ ಅನ್ಯಕೋಮಿನ ವ್ಯಕ್ತಿ; ವಿಡಿಯೋ ವೈರಲ್​

ಮಂಗಳೂರು: ಅನ್ಯಕೋಮಿನ ವ್ಯಕ್ತಿ ಮಹಿಳೆಯ ಜಡೆಗೆ ಕೈ ಹಾಕಿರುವ ಘಟನೆ ಮಂಗಳೂರು-ಧರ್ಮಸ್ಥಳ ಮಾರ್ಗವಾಗಿ ಸಂಚರಿಸುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್​​​​​ನಲ್ಲಿ ನಡೆದಿತ್ತು. ಅನ್ಯಕೋಮಿನ ವ್ಯಕ್ತಿ ಮಹಿಳೆಯ ಜಡೆಯನ್ನು ಸವರಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಘಟನೆ ಬಗ್ಗೆ ಹಿಂದೂ ಜಾಗರಣ ವೇದಿಕೆ ಜಿಲ್ಲಾಧ್ಯಕ್ಷ ಬಂಟ್ವಾಳ ನಗರ ಪೊಲೀಸ್​ ಠಾಣೆಗೆ ದೂರು ನೀಡಿದ್ದರು. ಇನ್ನು ಜಡೆ ಸವರಿದ ಬಂಟ್ವಾಳ ತಾಲೂಕಿನ ನಾವೂರ ಗ್ರಾಮದ ಆರೋಪಿ ಹಮೀದ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:03 pm, Sat, 3 June 23

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ