AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಸಾಹಿತ್ಯ ಸಮ್ಮೇಳನ ಆರಂಭಕ್ಕೂ ಮುನ್ನ ಸಾಲು ಸಾಲು ವಿಘ್ನ: ಟಿಪ್ಪು ವಿವಾದ ಮತ್ತೆ ಮುನ್ನೆಲೆಗೆ

ಮಂಡ್ಯದಲ್ಲಿ ಡಿಸೆಂಬರ್ 20-22ರಂದು ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ಕಾರ, ಕಸಾಪ ಮತ್ತು ಜಿಲ್ಲಾಡಳಿತ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ. ಮನೆ ಮನೆಗೆ ಬಾವುಟ ಕಾರ್ಯಕ್ರಮವೂ ಆರಂಭವಾಗಿದೆ. ಆದರೆ, ಟಿಪ್ಪು ವಿವಾದ ಸಮ್ಮೇಳನದ ಮೇಲೆ ನೆರಳು ಬೀರಿದ್ದು, ಬಿಜೆಪಿ ಮತ್ತು ಹಿಂದೂ ಸಂಘಟನೆಗಳ ವಿರೋಧ ವ್ಯಕ್ತವಾಗಿದೆ.

ಕನ್ನಡ ಸಾಹಿತ್ಯ ಸಮ್ಮೇಳನ ಆರಂಭಕ್ಕೂ ಮುನ್ನ ಸಾಲು ಸಾಲು ವಿಘ್ನ: ಟಿಪ್ಪು ವಿವಾದ ಮತ್ತೆ ಮುನ್ನೆಲೆಗೆ
ಕನ್ನಡ ಸಾಹಿತ್ಯ ಸಮ್ಮೇಳನ ಆರಂಭಕ್ಕೂ ಮುನ್ನ ಸಾಲು ಸಾಲು ವಿಘ್ನ: ಟಿಪ್ಪು ವಿವಾದ ಮತ್ತೆ ಮುನ್ನೆಲೆಗೆ
ಪ್ರಶಾಂತ್​ ಬಿ.
| Updated By: ಗಂಗಾಧರ​ ಬ. ಸಾಬೋಜಿ|

Updated on: Dec 07, 2024 | 5:10 PM

Share

ಮಂಡ್ಯ,  ಡಿಸೆಂಬರ್​ 07: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ (Kannada Sahitya Sammelana) ಈ ಬಾರಿ ಸಕ್ಕರಿನಗರಿ ಮಂಡ್ಯದಲ್ಲಿ ಮೂವತ್ತು ವರ್ಷಗಳ ನಂತರ ಮತ್ತೊಮ್ಮೆ ನಡೆಯುತ್ತಿದೆ. ಈ ನುಡಿಜಾತ್ರೆಯನ್ನ ಸಾಕಷ್ಟು ಅರ್ಥಪೂರ್ಣವಾಗಿ ಹಾಗೂ ಅದ್ದೂರಿಯಾಗಿ ಆಚರಣೆ ಮಾಡಲು ಸರ್ಕಾರ, ಕಸಾಪ ಹಾಗೂ ಮಂಡ್ಯ ಜಿಲ್ಲಾಡಳಿತ ತಯಾರಿ ಮಾಡಿಕೊಂಡಿದೆ. ಈ ನಿಟ್ಟಿನಲ್ಲಿ ಒಂದೆಡೆ ಮನೆ ಮನೆಗೆ ಬಾವುಟ ಕಾರ್ಯಕ್ರಮಕ್ಕೆ ಕೂಡ ಚಾಲನೆ ನೀಡಲಾಗಿದೆ. ಮತ್ತೊಂದು ಕಡೆ ಟಿಪ್ಪು ವಿವಾದ ಕೂಡ ಮುನ್ನೆಲೆಗೆ ಬಂದಿದ್ದು, ಬಿಜೆಪಿ ಹಾಗೂ ಹಿಂದೂ ಸಂಘಟನೆಗಳಿಂದ ವಿರೋಧ ಕೂಡ ವ್ಯಕ್ತವಾಗಿದೆ.

ಹೌದು.. ಈ ಬಾರಿ ಸಕ್ಕರಿನಗರಿ ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಡಿಸೆಂಬರ್ 20, 21 ಮತ್ತು 22 ರಂದು ಮೂರು ದಿನಗಳ ಕಾಲ ನಡೆಯಲಿದೆ. ಅಂದಹಾಗೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಂದ್ರೆ ಅದು ಕನ್ನಡ ಹಬ್ಬ. ಕನ್ನಡ ಐಕ್ಯತೆ, ಸಾಂಸ್ಕೃತಿಕ ಸಾಹಿತ್ಯಕ ಹಬ್ಬ. ಈ ನಾಡು ನುಡಿಯನ್ನ ಬಿಂಬಿಸುವ ಕನ್ನಡದ ಐಕ್ಯತೆ ಸಾರುವ ಹಬ್ಬ ನಮಗೆಲ್ಲ. ಈ ಇಂತಹ ನುಡಿಜಾತ್ರೆ ಈ ಬಾರಿ ಅತೀ ಹೆಚ್ಚು ಕನ್ನಡವನ್ನೇ ಮಾತನಾಡುವ ಸಕ್ಕರಿನಗರಿ ಮಂಡ್ಯದಲ್ಲಿ ಆಯೋಜನೆ ಮಾಡಲಾಗಿದೆ.

ಇದನ್ನೂ ಓದಿ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸಾಹಿತಿ ಗೊ.ರು. ಚೆನ್ನಬಸಪ್ಪ

ಈ ನುಡಿಜಾತ್ರೆಯನ್ನ ಸಾಕಷ್ಟು ಅರ್ಥಪೂರ್ಣವಾಗಿ ನಡೆಸಲು ರಾಜ್ಯ ಸರ್ಕಾರ, ಕನ್ನಡ ಸಾಹಿತ್ಯ ಪರಿಷತ್ ಮತ್ತು ಮಂಡ್ಯ ಜಿಲ್ಲಾಡಳಿತ ಈಗಾಗಲೇ ಎಲ್ಲ ರೀತಿಯ ತಯಾರಿ ಮಾಡಿಕೊಂಡಿದೆ. ಮಂಡ್ಯ ಹೊರವಲಯದ ಶ್ರೀನಿವಾಸ್ ಪುರದ ಬಳಿ ಸುಮಾರು 60 ಎಕರೆ ಪ್ರದೇಶದಲ್ಲಿ ನುಡಿಹಬ್ಬವನ್ನ ಆಚರಣೆ ಮಾಡಲು ತಯಾರಿ ಕೂಡ ನಡೆದಿದೆ. ಅಲ್ಲದೇ ಈಗಾಗಲೇ ಸಮ್ಮೇಳನದ ಗೌರವಾಧ್ಯಕ್ಷರಾಗಿ ಗೊರಾ ಚನ್ನಬಸವ ಅವರನ್ನ ಕೂಡ ಆಯ್ಕೆ ಮಾಡಲಾಗಿದೆ. ಸಮ್ಮೇಳನದ ಅಂಗವಾಗಿ ‌ಮನೆ ಮನೆಗೆ ಬಾವುಟ ಅನ್ನುವ ಕಾರ್ಯಕ್ರಮ ನಡೆಸಲಾಗುತ್ತಿದೆ. ಮಂಡ್ಯ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಪ್ರತಿ ಮನೆಗಳ ಮೇಲೆ ಬಾವುಟ ಹಾರಿಸಲು ಕರೆ ನೀಡಲಾಗಿದೆ. ಈ ಕಾರ್ಯಕ್ರಮಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ ನೀಡಿದ್ದಾರೆ.

ಸಾಲು ಸಾಲು ವಿಘ್ನ

ಅಂದಹಾಗೆ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮವನ್ನ ಅರ್ಥಪೂರ್ಣವಾಗಿ ಆಚರಣೆ ಮಾಡಲು ಕಸಾಪ ಹಾಗೂ ಜಿಲ್ಲಾಡಳಿತ ತಯಾರಿ ಮಾಡಿಕೊಳ್ಳುತ್ತಿದ್ದರೇ, ‌ಮತ್ತೊಂದು ಕಡೆ ಸಮ್ಮೇಳನ ಪ್ರಾರಂಭಕ್ಕೂ ಮೊದಲು ಸಾಲು ಸಾಲು ವಿಘ್ನಗಳು ಕೂಡ ಎದುರಾಗುತ್ತಿದೆ. ಸಾಹಿತ್ಯ ಸಮ್ಮೇಳನ ಹತ್ತಿರವಾಗುತ್ತಿದ್ದಂತೆ ಟಿಪ್ಪು ವಿವಾದ ಕೂಡ ಮುನ್ನೆಲೆಗೆ ಬರುತ್ತಿದೆ. ಸಮ್ಮೇಳನದಲ್ಲಿ ಟಿಪ್ಪು ವಿಚಾರಗೋಷ್ಠಿ ಆಯೋಜಿಸದಂತೆ ಬಿಜೆಪಿ ಕಾರ್ಯಕರ್ತರು ಒತ್ತಾಯ ಮಾಡುತ್ತಿದ್ದಾರೆ.

ಇದನ್ನೂ ಓದಿ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಜ್ಜಾದ ಮಂಡ್ಯ: ಭರ್ಜರಿ ತಯಾರಿ

ಟಿಪ್ಪು ವಿಚಾರಗೋಷ್ಠಿಗೆ ಕೆಲವು ಚಿಂತಕರು ಒತ್ತಾಯ ಮಾಡುತ್ತಿದ್ದಾರೆ. ಟಿಪ್ಪು ಸುಲ್ತಾನ್ ಕನ್ನಡ ಭಾಷೆ ವಿರೋಧಿಯಾಗಿದ್ದ. ತನ್ನ ಆಡಳಿತ ಕಾಲದಲ್ಲಿ ಪರ್ಷಿಯನ್ ಭಾಷೆ ಹೇರಿದ್ದ. ಹೀಗಾಗಿ ಆಯೋಜನೆ ‌ಮಾಡಿದ್ರೆ ಸಮ್ಮೇಳನದಲ್ಲಿ ಸಿಎಂ ಗೆ ಕಪ್ಪು ಬಾಟುವ ಪ್ರದರ್ಶನ ‌ಮಾಡುವ ಎಚ್ಚರಿಕೆ ನೀಡಲಾಗಿದೆ. ಒಟ್ಟಾರೆ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಗಣನೆ ಆರಂಭಗೊಂಡಿದ್ದು, ಅರ್ಥಪೂರ್ಣವಾಗಿ ಆಚರಣೆ ಮಾಡಲು ಜಿಲ್ಲಾಡಳಿತ ತಯಾರಿ ಮಾಡಿದೆ. ಮತ್ತೊಂದು ಕಡೆ ವಿವಾದಗಳು ಕೂಡ ಎದ್ದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ