ಮಂಡ್ಯ, ಡಿಸೆಂಬರ್ 07: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ (Kannada Sahitya Sammelana) ಈ ಬಾರಿ ಸಕ್ಕರಿನಗರಿ ಮಂಡ್ಯದಲ್ಲಿ ಮೂವತ್ತು ವರ್ಷಗಳ ನಂತರ ಮತ್ತೊಮ್ಮೆ ನಡೆಯುತ್ತಿದೆ. ಈ ನುಡಿಜಾತ್ರೆಯನ್ನ ಸಾಕಷ್ಟು ಅರ್ಥಪೂರ್ಣವಾಗಿ ಹಾಗೂ ಅದ್ದೂರಿಯಾಗಿ ಆಚರಣೆ ಮಾಡಲು ಸರ್ಕಾರ, ಕಸಾಪ ಹಾಗೂ ಮಂಡ್ಯ ಜಿಲ್ಲಾಡಳಿತ ತಯಾರಿ ಮಾಡಿಕೊಂಡಿದೆ. ಈ ನಿಟ್ಟಿನಲ್ಲಿ ಒಂದೆಡೆ ಮನೆ ಮನೆಗೆ ಬಾವುಟ ಕಾರ್ಯಕ್ರಮಕ್ಕೆ ಕೂಡ ಚಾಲನೆ ನೀಡಲಾಗಿದೆ. ಮತ್ತೊಂದು ಕಡೆ ಟಿಪ್ಪು ವಿವಾದ ಕೂಡ ಮುನ್ನೆಲೆಗೆ ಬಂದಿದ್ದು, ಬಿಜೆಪಿ ಹಾಗೂ ಹಿಂದೂ ಸಂಘಟನೆಗಳಿಂದ ವಿರೋಧ ಕೂಡ ವ್ಯಕ್ತವಾಗಿದೆ.
ಹೌದು.. ಈ ಬಾರಿ ಸಕ್ಕರಿನಗರಿ ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಡಿಸೆಂಬರ್ 20, 21 ಮತ್ತು 22 ರಂದು ಮೂರು ದಿನಗಳ ಕಾಲ ನಡೆಯಲಿದೆ. ಅಂದಹಾಗೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಂದ್ರೆ ಅದು ಕನ್ನಡ ಹಬ್ಬ. ಕನ್ನಡ ಐಕ್ಯತೆ, ಸಾಂಸ್ಕೃತಿಕ ಸಾಹಿತ್ಯಕ ಹಬ್ಬ. ಈ ನಾಡು ನುಡಿಯನ್ನ ಬಿಂಬಿಸುವ ಕನ್ನಡದ ಐಕ್ಯತೆ ಸಾರುವ ಹಬ್ಬ ನಮಗೆಲ್ಲ. ಈ ಇಂತಹ ನುಡಿಜಾತ್ರೆ ಈ ಬಾರಿ ಅತೀ ಹೆಚ್ಚು ಕನ್ನಡವನ್ನೇ ಮಾತನಾಡುವ ಸಕ್ಕರಿನಗರಿ ಮಂಡ್ಯದಲ್ಲಿ ಆಯೋಜನೆ ಮಾಡಲಾಗಿದೆ.
ಇದನ್ನೂ ಓದಿ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸಾಹಿತಿ ಗೊ.ರು. ಚೆನ್ನಬಸಪ್ಪ
ಈ ನುಡಿಜಾತ್ರೆಯನ್ನ ಸಾಕಷ್ಟು ಅರ್ಥಪೂರ್ಣವಾಗಿ ನಡೆಸಲು ರಾಜ್ಯ ಸರ್ಕಾರ, ಕನ್ನಡ ಸಾಹಿತ್ಯ ಪರಿಷತ್ ಮತ್ತು ಮಂಡ್ಯ ಜಿಲ್ಲಾಡಳಿತ ಈಗಾಗಲೇ ಎಲ್ಲ ರೀತಿಯ ತಯಾರಿ ಮಾಡಿಕೊಂಡಿದೆ. ಮಂಡ್ಯ ಹೊರವಲಯದ ಶ್ರೀನಿವಾಸ್ ಪುರದ ಬಳಿ ಸುಮಾರು 60 ಎಕರೆ ಪ್ರದೇಶದಲ್ಲಿ ನುಡಿಹಬ್ಬವನ್ನ ಆಚರಣೆ ಮಾಡಲು ತಯಾರಿ ಕೂಡ ನಡೆದಿದೆ. ಅಲ್ಲದೇ ಈಗಾಗಲೇ ಸಮ್ಮೇಳನದ ಗೌರವಾಧ್ಯಕ್ಷರಾಗಿ ಗೊರಾ ಚನ್ನಬಸವ ಅವರನ್ನ ಕೂಡ ಆಯ್ಕೆ ಮಾಡಲಾಗಿದೆ. ಸಮ್ಮೇಳನದ ಅಂಗವಾಗಿ ಮನೆ ಮನೆಗೆ ಬಾವುಟ ಅನ್ನುವ ಕಾರ್ಯಕ್ರಮ ನಡೆಸಲಾಗುತ್ತಿದೆ. ಮಂಡ್ಯ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಪ್ರತಿ ಮನೆಗಳ ಮೇಲೆ ಬಾವುಟ ಹಾರಿಸಲು ಕರೆ ನೀಡಲಾಗಿದೆ. ಈ ಕಾರ್ಯಕ್ರಮಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ ನೀಡಿದ್ದಾರೆ.
ಅಂದಹಾಗೆ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮವನ್ನ ಅರ್ಥಪೂರ್ಣವಾಗಿ ಆಚರಣೆ ಮಾಡಲು ಕಸಾಪ ಹಾಗೂ ಜಿಲ್ಲಾಡಳಿತ ತಯಾರಿ ಮಾಡಿಕೊಳ್ಳುತ್ತಿದ್ದರೇ, ಮತ್ತೊಂದು ಕಡೆ ಸಮ್ಮೇಳನ ಪ್ರಾರಂಭಕ್ಕೂ ಮೊದಲು ಸಾಲು ಸಾಲು ವಿಘ್ನಗಳು ಕೂಡ ಎದುರಾಗುತ್ತಿದೆ. ಸಾಹಿತ್ಯ ಸಮ್ಮೇಳನ ಹತ್ತಿರವಾಗುತ್ತಿದ್ದಂತೆ ಟಿಪ್ಪು ವಿವಾದ ಕೂಡ ಮುನ್ನೆಲೆಗೆ ಬರುತ್ತಿದೆ. ಸಮ್ಮೇಳನದಲ್ಲಿ ಟಿಪ್ಪು ವಿಚಾರಗೋಷ್ಠಿ ಆಯೋಜಿಸದಂತೆ ಬಿಜೆಪಿ ಕಾರ್ಯಕರ್ತರು ಒತ್ತಾಯ ಮಾಡುತ್ತಿದ್ದಾರೆ.
ಇದನ್ನೂ ಓದಿ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಜ್ಜಾದ ಮಂಡ್ಯ: ಭರ್ಜರಿ ತಯಾರಿ
ಟಿಪ್ಪು ವಿಚಾರಗೋಷ್ಠಿಗೆ ಕೆಲವು ಚಿಂತಕರು ಒತ್ತಾಯ ಮಾಡುತ್ತಿದ್ದಾರೆ. ಟಿಪ್ಪು ಸುಲ್ತಾನ್ ಕನ್ನಡ ಭಾಷೆ ವಿರೋಧಿಯಾಗಿದ್ದ. ತನ್ನ ಆಡಳಿತ ಕಾಲದಲ್ಲಿ ಪರ್ಷಿಯನ್ ಭಾಷೆ ಹೇರಿದ್ದ. ಹೀಗಾಗಿ ಆಯೋಜನೆ ಮಾಡಿದ್ರೆ ಸಮ್ಮೇಳನದಲ್ಲಿ ಸಿಎಂ ಗೆ ಕಪ್ಪು ಬಾಟುವ ಪ್ರದರ್ಶನ ಮಾಡುವ ಎಚ್ಚರಿಕೆ ನೀಡಲಾಗಿದೆ. ಒಟ್ಟಾರೆ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಗಣನೆ ಆರಂಭಗೊಂಡಿದ್ದು, ಅರ್ಥಪೂರ್ಣವಾಗಿ ಆಚರಣೆ ಮಾಡಲು ಜಿಲ್ಲಾಡಳಿತ ತಯಾರಿ ಮಾಡಿದೆ. ಮತ್ತೊಂದು ಕಡೆ ವಿವಾದಗಳು ಕೂಡ ಎದ್ದಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.