ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ತಿಂದೇಬಿಟ್ರು, ಮುಂದೇನಾಯ್ತು..?

ಮಂಡ್ಯದಲ್ಲಿ ನಡೆದ 87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ವಿತರಣೆಯಿಂದಾಗಿ ಜಟಾಪಟಿಗೆ ಕಾರಣವಾಗಿದೆ. ಪ್ರಗತಿಪರರು ಮಾಂಸಾಹಾರವನ್ನು ವಿತರಿಸಿದ್ದು, ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಘಟನೆಯಿಂದ ಸಮ್ಮೇಳನದಲ್ಲಿ ಪೊಲೀಸರು ಮತ್ತು ಪ್ರಗತಿಪರರ ಮಧ್ಯೆ ವಾಗ್ದಾದ ಉಂಟಾಗಿದೆ. ಇನ್ನು ಪ್ರತ್ಯೇಕ ಸಸ್ಯಹಾರ ಊಟದ ವ್ಯವಸ್ಥೆ ಕೂಡ ಇತ್ತು.

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ತಿಂದೇಬಿಟ್ರು, ಮುಂದೇನಾಯ್ತು..?
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ತಿಂದೇಬಿಟ್ರು, ಮುಂದೇನಾಯ್ತು..?
Follow us
ದಿಲೀಪ್​, ಚೌಡಹಳ್ಳಿ
| Updated By: ಗಂಗಾಧರ​ ಬ. ಸಾಬೋಜಿ

Updated on: Dec 22, 2024 | 3:42 PM

ಮಂಡ್ಯ, ಡಿಸೆಂಬರ್​ 22: ಸಕ್ಕರೆನಾಡು ಮಂಡ್ಯದಲ್ಲಿ ಎರಡು ದಿನದಿಂದ 87ನೇ ಕನ್ನಡ ಸಾಹಿತ್ಯ ಸಮ್ಮೇಳನ (Kannada Sahitya Sammelana) ಅದ್ದೂರಿಯಾಗಿ ನಡೆಯುತ್ತಿದೆ. ಈ ಬಾರೀಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ನೀಡಬೇಕು ಎಂದು ಪ್ರಗತಿಪರರು ಧ್ವನಿ ಎತ್ತಿದ್ದರು. ಪ್ರತಿವರ್ಷದಂತೆ ಈ ಬಾರಿ ಕೂಡ ಸಸ್ಯಹಾರವನ್ನು ನೀಡಲಾಗುತ್ತಿತ್ತು. ಆದರೆ ಕೊನೆಯ ದಿನವಾದ ಇಂದು ಮ್ಮೇಳನದಲ್ಲಿ ಬಾಡೂಟ ಹಂಚಿಕೆ ಮಾಡಲಾಗಿದ್ದು, ಪೊಲೀಸ್ ಸಿಬ್ಬಂದಿ ಕೊನೆಗೂ ಮಾಂಸಾಹಾರ ವಶಪಡೆದುಕೊಂಡಿದ್ದಾರೆ.

87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಹಂಚಿಕೆಗಾಗಿ ಜಟಾಪಟಿ ಉಂಟಾಗಿದೆ. ಪ್ರಗತಿಪರರು ಮೊಟ್ಟೆ, ಚಿಕನ್, ಕಬಾಬ್, ಕೋಳಿ ಸಾಂಬಾರ್, ರಾಗಿ ಮುದ್ದೆ ಹಂಚಿಕೆ ಮಾಡಿದ್ದಾರೆ. ಈ ಮಧ್ಯೆ ಪೊಲೀಸರು ಮತ್ತು ಪ್ರಗತಿಪರರ ನಡುವೆ ವಾಗ್ವಾದ ಉಂಟಾಗಿದೆ.

ಇದನ್ನೂ ಓದಿ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ: ಹಲವು ವಿಶೇಷತೆಗಳಿಂದ ಕೂಡಿದ ನುಡಿ ಹಬ್ಬ

ವಾಗ್ವಾದದ ಬಳಿಕ ಕಡೆಗೂ ಪ್ರಗತಿಪರರು ಸಮ್ಮೇಳದ ಊಟದ ಕೌಂಟರ್​ನಲ್ಲೇ ಮಾಂಸಾಹಾರ ವಿತರಣೆ ಮಾಡಿದ್ದಾರೆ. ಒಬ್ಬರ ಮೇಲೊಬ್ಬರು ಬಿದ್ದು ಜನರು ಮಾಂಸದೂಟಕ್ಕೆ ಮುಗಿಬಿದ್ದಿದ್ದರು. ಈ ವೇಳೆ ಸಾರ್ವಜನಿಕರಿಂದ ಪೊಲೀಸರು ಮಾಂಸದೂಟವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಇನ್ನು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಸ್ಯಹಾರದ ಜೊತೆಗೆ ಮಾಂಸಾಹಾರವನ್ನೂ ನೀಡಬೇಕು ಎಂದು ಆಗ್ರಹಿಸುತ್ತಿದ್ದ ಪ್ರಗತಿಪರರು ನಿನ್ನೆ ಸಮ್ಮೇಳನದಲ್ಲಿ ಬಾಡೂಟ ಸವಿದಿದ್ದಾರೆ ಎನ್ನಲಾಗಿದೆ. ಇನ್ನೂ ಕೆಲವರು ಇದು ಆಹಾರ ಅಸಮಾನತೆ ಎತ್ತಿ ಹಿಡಿದ ಸಮ್ಮೇಳನವೆಂದು ಕಿಡಿಕಾರಿದ್ದಾರೆ.

ಬಾಡೂಟ ಹಂಚಿದ್ದಕ್ಕೆ ಸಾಹಿತ್ಯಾಸಕ್ತರು ಬೇಸರ

ಬಾಡೂಟ ಹಂಚಿದ ವಿಚಾರಕ್ಕೆ ಸಾಹಿತ್ಯಾಸಕ್ತರು ಬೇಸರ ವ್ಯಕ್ತಪಡಿಸಿದ್ದಾರೆ. ಇದು ಬಾಡೂಟಕ್ಕಾಗಿ ಹೋರಾಟ ಮಾಡುವ ಸ್ಥಳವಲ್ಲ‌. ಇಲ್ಲಿ ಸಾಹಿತ್ಯ, ಭಾಷೆ ಬಗ್ಗೆ ಚರ್ಚೆ ಮಾಡಬೇಕು. ಮಂಡ್ಯ ಬಾಡೂಟ ಫೇಮಸ್ ಅಂತ ಈ ಸ್ಥಳದಲ್ಲಿ ಬಾಡೂಟ ಹಂಚಿದ್ದು ಸರಿಯಲ್ಲ‌. ಸಸ್ಯಹಾರ ಊಟ ಮಾಡಲು ಸಾಕಷ್ಟು ಜನರು ಬರುತ್ತಿದ್ದಾರೆ. ಮಾಂಸದೂಟ ಮಾಡಿಸಿದ್ದರೆ ಅದನ್ನ ನಿರ್ವಹಣೆ ಮಾಡುವುದು ಕಷ್ಟವಾಗುತಿತ್ತು ಎಂದಿದ್ದಾರೆ.

ಇದನ್ನೂ ಓದಿ: ಸಾಹಿತ್ಯ ಸಮ್ಮೇಳನಕ್ಕೆ ಈಗ ಕೋಟಿ ಕೋಟಿ ಹಂಚಿಕೆ; 1945ರಲ್ಲಿ ಮದರಾಸಿನಲ್ಲಿ ನಡೆದ 29ನೇ ಕನ್ನಡ ಸಾಹಿತ್ಯ ಸಮ್ಮೇಳನ ಖರ್ಚು ಎಷ್ಟು ಗೊತ್ತಾ?

ಇನ್ನು ಬಾಡೂಟ ಜಟಾಪಟಿ ಮಧ್ಯೆ ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತ್ಯಾಸಕ್ತರಿಗೆ ವಿಶೇಷ ಊಟದ ವ್ಯವಸ್ಥೆ ಮಾಡಲಾಗಿತ್ತು. ಇಂದು ಮುದ್ದೆ, ಸೊಪ್ಪಿನ ಸಾಂಬಾರ್, ಅನ್ನ-ರಸಂ, ಮಜ್ಜಿಗೆ, ಸಂಡಿಗೆ ಹಾಗೂ ಬಾದುಷಾವನ್ನು ಬಾಣಸಿಗರು‌ ಸಿದ್ಧಪಡಿಸಿದ್ದರು. ಸಮ್ಮೇಳನದಲ್ಲಿ ಭಾಗಿಯಾಗುವ ಪ್ರತಿಯೊಬ್ಬರಿಗೂ ಊಟದ ವ್ಯವಸ್ಥೆ ಮಾಡಲಾಗಿತ್ತು. ಭಾನುವಾರ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಸಾಹಿತ್ಯಾಸಕ್ತರು ಆಗಮಿಸಿದ್ದರು.

ಕರ್ನಾಟಕದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.