ಬೆಳಗಾವಿ ಲೋಕಸಭಾ ಉಪಚುನಾವಣೆ; ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ನಾಮಪತ್ರ ಸಲ್ಲಿಕೆ

|

Updated on: Mar 30, 2021 | 4:21 PM

ಏಪ್ರಿಲ್ 17ರಂದು ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಮಂಗಳಾ ಅಂಗಡಿ ನಾಮಪತ್ರ ಸಲ್ಲಿಸಿದ್ದಾರೆ.

ಬೆಳಗಾವಿ ಲೋಕಸಭಾ ಉಪಚುನಾವಣೆ; ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ನಾಮಪತ್ರ ಸಲ್ಲಿಕೆ
ಬಿಜೆಪಿ ಅಭ್ಯರ್ಥಿಯಾಗಿ ಮಂಗಳಾ ಅಂಗಡಿ ನಾಮಪತ್ರ ಸಲ್ಲಿಸಿದ ದೃಶ್ಯ (ಸಂಗ್ರಹ ಚಿತ್ರ)
Follow us on

ಬೆಳಗಾವಿ: ಏಪ್ರಿಲ್ 17ರಂದು ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಮಂಗಳಾ ಅಂಗಡಿ ಇಂದು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಯ ವೇಳೆ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು, ಸಚಿವ ಜಗದೀಶ್ ಶೆಟ್ಟರ್ ಜೊತೆಯಾಗಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಆಗಮನಿಸಲು ಸ್ವಲ್ಪ ತಡವಾಗಿದ್ದು, ಜಿಲ್ಲಾಧಿಕಾರಿ ಕಚೇರಿಗೆ ತೆರಳಲು 20 ನಿಮಿಷಗಳ ಕಾಲ ನಳೀನ್​ ಕುಮಾರ್​ ಕಟೀಲು ಮತ್ತು ಜಗದೀಶ್​ ಶೆಟ್ಟರ್​ ಕಾದು ಕುಳಿತಿದ್ದರು. ಬಿ.ಎಸ್.ಯಡಿಯೂರಪ್ಪನವರ ಆಗಮನದ ನಂತರ ಬಿಜೆಪಿ ಅಭ್ಯರ್ಥಿಯಾಗಿ ಮಂಗಳಾ ಅಂಗಡಿ ನಾಮಪತ್ರ ಸಲ್ಲಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಯಾಗಿ ಶಾಸಕ ಸತೀಶ್ ಜಾರಕಿಹೊಳಿ‌ ನಾಮಪತ್ರ ಸಲ್ಲಿಕೆ
ಏಪ್ರಿಲ್ 17ರಂದು ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ನಿನ್ನೆ(ಮಾರ್ಚ್ 29) ಶಾಸಕ ಸತೀಶ್ ಜಾರಕಿಹೊಳಿ‌ ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸಿದ್ದಾರೆ. ಅವರಿಗೆ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಹಳಿಯಾಳ ಶಾಸಕ ಆರ್.ವಿ.ದೇಶಪಾಂಡೆ, ಲಕ್ಷ್ಮೀ ಹೆಬ್ಬಾಳ್ಕರ್ ಮುಂತಾದವರು ಸತೀಶ್ ಜಾರಕಿಹೊಳಿ ಅವರಿಗೆ ನಾಮಪತ್ರ ಸಲ್ಲಿಸಲು ಜತೆಯಾಗಿದ್ದಾರೆ.

ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಕೆಯ ನಂತರ ವಿಪಕ್ಷ ನಾಯಕ ಸಿದ್ದರಾಮಯ್ಯ, ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಿಂದ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ತೆರಳಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಮಸ್ಕಿಗೆ ಈ ನಾಯಕರು ತೆರಳಲಿದ್ದಾರೆ.

ಇದನ್ನೂ ಓದಿ: ನಾಮಪತ್ರ ಸಲ್ಲಿಸಿದ ಸತೀಶ್ ಜಾರಕಿಹೊಳಿ, ಮಸ್ಕಿ ಕಡೆಗೆ ಪ್ರಚಾರಕ್ಕೆ ತೆರಳಿದ ಕಾಂಗ್ರೆಸ್ ದಂಡು

Published On - 2:47 pm, Tue, 30 March 21