ಮಂಗಳೂರು ವಿವಿ ಕಾಲೇಜಿನ ಕ್ಲಾಸಿನಲ್ಲಿ ಸಾವರ್ಕರ್​ ಪೋಟೋ ಅಳವಡಿಸಿರುವ ಪ್ರಕರಣ: ಕಾಲೇಜಿಗೆ CFI ಹಾಗೂ NSUI  ಮುತ್ತಿಗೆ ಹಾಕಿ ಪ್ರತಿಭಟನೆ

ಮಂಗಳೂರು ವಿವಿ ಘಟಕ ಕಾಲೇಜಿನ ಕ್ಲಾಸಿನಲ್ಲಿ ಸಾವರ್ಕರ್​ ಪೋಟೋ ಅಳವಡಿಸಿರುವ ವಿಚಾರವಾಗಿ ಕಾಲೇಜಿಗೆ CFI ಹಾಗೂ NSUI  ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ. 

ಮಂಗಳೂರು ವಿವಿ ಕಾಲೇಜಿನ ಕ್ಲಾಸಿನಲ್ಲಿ ಸಾವರ್ಕರ್​ ಪೋಟೋ ಅಳವಡಿಸಿರುವ ಪ್ರಕರಣ: ಕಾಲೇಜಿಗೆ CFI ಹಾಗೂ NSUI  ಮುತ್ತಿಗೆ ಹಾಕಿ ಪ್ರತಿಭಟನೆ
ತರಗತಿಯಲ್ಲಿ ವೀರ್​ ಸಾರ್ವಕರ್​ ಭಾವಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on: Jun 10, 2022 | 8:27 PM

ಮಂಗಳೂರು: ಮಂಗಳೂರು ವಿವಿ (Mangalore University) ಘಟಕ ಕಾಲೇಜಿನ ಕ್ಲಾಸಿನಲ್ಲಿ ಸಾವರ್ಕರ್​ (Savarkar) ಪೋಟೋ ಅಳವಡಿಸಿರುವ ವಿಚಾರವಾಗಿ ಕಾಲೇಜಿಗೆ CFI ಹಾಗೂ NSUI  ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ.   ಈ ಸಂಬಂಧ ಕಾಲೇಜು ಬಳಿ ಪೊಲೀಸ್ ಬಿಗಿ ಭದ್ರತೆ ಇದೆ. CFI ಹಾಗೂ NSUI  ಕಾಲೇಜು ಗೇಟ್ ದಾಟಲು ಬಿಡದ ಪೊಲೀಸರು‌.

ಮಂಗಳೂರಿನ ಹಂಪನಕಟ್ಟೆಯಲ್ಲಿರುವ ವಿವಿ ಘಟಕ ಕಾಲೇಜು 2 ಗುಂಪುಗಳ ಮಧ್ಯೆ ಗಲಾಟೆ ನಡೆದಿದೆ. ಘಟನೆ ಬಳಿಕ ಕಾಲೇಜಿಗೆ ಮುತ್ತಿಗೆ ಹಾಕಲು ಸಿಎಫ್ಐ ನಿರ್ಧಾರ ಮಾಡಿತ್ತು. ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಭೇಟಿ  ನೀಡಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಕಾಲೇಜು ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಇದನ್ನು ಓದಿ: ಮಂಗಳೂರು ವಿವಿ ಕಾಲೇಜಿನ್​  ಕ್ಲಾಸ್​ ರೂಮ್​ನಲ್ಲಿ ಸಾವರ್ಕರ್​ ಫೋಟೋ; ಫೋಟೋ ತೆರವುಗೊಳಿಸಿದ ಪ್ರಾಂಶುಪಾಲ

ಕ್ಲಾಸಿನಲ್ಲಿ ಸಾವರ್ಕರ್​ ಪೋಟೋ ಪ್ರಕರಣ ಏನು?

 ಹಿಜಾಬ್ ವಿವಾದದ ಬೆನ್ನಲ್ಲೇ ಮತ್ತೆ ಮಂಗಳೂರಿನ ಹಂಪನಕಟ್ಟೆ ಬಳಿಯಿರುವ ಮಂಗಳೂರು ವಿವಿ  ಕಾಲೇಜು ಮತ್ತೆ ಸುದ್ದಿಯಾಗಿದೆ. (ಜೂನ್​​8) ವಿವಿಯ ಕಾಲೇಜಿನ್​  ಕ್ಲಾಸ್​ ರೂಮ್​ನಲ್ಲಿ ಸಾವರ್ಕರ್​  ಫೋಟೋ ಅಳವಡಿಸಲಾಗಿತ್ತು. ಈ ವಿಷಯವನ್ನು ವಿದ್ಯಾರ್ಥಿಗಳು ಪ್ರಾಂಶುಪಾಲರ ಗಮನಕ್ಕೆ ತಂದ ನಂತರ ಪ್ರಾಂಶುಪಾಲರು ಸಾವರ್ಕರ್​ ಫೋಟೋವನ್ನು ತೆರವುಗೊಳಿಸಿದ್ದಾರೆ. ಕ್ಲಾಸ್​ ರೂಮ್​ನಲ್ಲಿ ಸಾವರ್ಕರ್​​ ಫೋಟೋ ಇರುವ ವಿಡಿಯೋ ವೈರಲ್​ ಆಗಿದೆ.  ಕಾಲೇಜಿನ ವಾಣಿಜ್ಯ ವಿಭಾಗದ ಕೆಲವು ವಿದ್ಯಾರ್ಥಿಗಳಿಂದ ಈ ಕೃತ್ಯ ಎಸಗಲಾಗಿದೆ.  ಈ ಸಂಬಂಧ ಪ್ರಾಂಶುಪಾಲರಿಗೆ ವಿದ್ಯಾರ್ಥಿಗಳು ತಪ್ಪೊಪ್ಪಿಗೆ ಪತ್ರ ಬರೆದುಕೊಟ್ಟಿದ್ದಾರೆ.

ಮಂಗಳೂರು ವಿವಿಯಲ್ಲಿ ನಡೆದ ಹಿಜಾಬ್​ ವಿವಾದ 

ಮಂಗಳೂರಿನ ಹಂಪನಕಟ್ಟೆ ಬಳಿಯಿರುವ ವಿವಿ ಕಾಲೇಜಿಗೆ (ಮೇ28) ರಂದು ಮುಸ್ಲಿಂ ಸಮುದಾಯದ 12 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದರು. ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲೆ ಡಾ.ಅನುಸೂಯ ರೈ ತರಗತಿಗೆ ಬಾರದಂತೆ ಪ್ರವೇಶ ನಿರಾಕರಿಸಿದ್ದರು. ಬಳಿಕ ವಿದ್ಯಾರ್ಥಿನಿಯರು ಕಾಲೇಜು ಗ್ರಂಥಾಲಯದತ್ತ ತೆರಳಿದ್ದರು. ಅಲ್ಲೂ ವಿದ್ಯಾರ್ಥಿನಿಯರನ್ನು ತಡೆದು ಪ್ರಾಂಶುಪಾಲೆ ಬುದ್ಧಿ ಹೇಳಿದ್ದರು.

ಇದನ್ನು ಓದಿ: ಮಂಗಳೂರು: ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದ ವಿದ್ಯಾರ್ಥಿನಿ ಅಮಾನತು

ಇಷ್ಟಾದರು ಮಾತು ಕೇಳದ ವಿದ್ಯಾರ್ಥಿನಿಯರು (ಜೂನ್​ 4) ರಂದು ಮತ್ತೆ ಹಿಜಾಬ್ ಧರಿಸಿ ಬಂದಿದ್ದರು. ಹೀಗಾಗಿ ಕಾಲೇಜಿನ ಪ್ರಾಂಶುಪಾಲೆ ಡಾ.ಅನುಸೂಯ ರೈ ವಿದ್ಯಾರ್ಥಿನಿಯರಿಗೆ ನೋಟಿಸ್ ಜಾರಿ ಮಾಡಿದ್ದರು. ಕಾಲೇಜಿನ ಶಿಸ್ತು ಉಲ್ಲಂಘಿಸಿ, ಘನತೆಗೆ ಧಕ್ಕೆ ಹಿನ್ನೆಲೆ ನೋಟಿಸ್ ಜಾರಿ ಮಾಡಲಾಗಿದೆ. ಗೌಸಿಯಾ ಸೇರಿದಂತೆ ಕೆಲ ವಿದ್ಯಾರ್ಥಿನಿಯರಿಗೆ ಪ್ರಾಂಶುಪಾಲರು ನೋಟಿಸ್ ಜಾರಿ ಮಾಡಿದ್ದಾರೆ. ನೋಟಿಸ್ ಬಳಿಕವೂ ನಿಯಮ ಮೀರಿದರೆ ಅಮಾನತು ಮಾಡುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದ್ದರು. ಇದಾದ ನಂತರ ವಿದ್ಯಾರ್ಥಿನಿಯರಿಗೆ (ಜೂನ್​ 8) ಇಂದಿನವರೆಗು ಅಮಾನತು ಮಾಡಲಾಗಿತ್ತು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!
ಜನಪ್ರತಿನಿಧಿಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ನ್ಯೂಸ್ ವೀಕ್ಷಿಸುವುದಿಲ್ಲವೇ?
ಜನಪ್ರತಿನಿಧಿಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ನ್ಯೂಸ್ ವೀಕ್ಷಿಸುವುದಿಲ್ಲವೇ?