AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ನಿಷೇಧಿತ ಉಗ್ರ ಸಂಘಟನೆ ಪಿಎಫ್ಐ ಬಗ್ಗೆ ಪ್ರಚಾರ ಮಾಡಿದ ಮುಸ್ಲಿಂ ಧರ್ಮಗುರು ಬಂಧನ

ನಿಷೇಧಿತ ಉಗ್ರ ಸಂಘಟನೆಯಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಪರವಾಗಿ ಪ್ರಚಾರ ಮಾಡಿದ್ದ ಕಡಬ ಮೂಲದ ಮುಸ್ಲಿಂ ಧರ್ಮಗುರು ಸೈಯ್ಯದ್ ಇಬ್ರಾಹಿಂ ತಂಙಳ್ವನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಭೂಗತರಾಗಿರುವ PFI ಸದಸ್ಯರನ್ನು ಸಂಪರ್ಕಿಸಿದ್ದ ಸೈಯ್ಯದ್ ಇಬ್ರಾಹಿಂ ತಂಙಳ್, ಮತ್ತೆ ಚಟುವಟಿಕೆ ಆರಂಭಿಸಲು ಪ್ರಚೋದನೆ ನೀಡುತ್ತಿದ್ದ. ನಗರದ ಉರ್ವ ಸ್ಟೋರ್ ಬಳಿಯಿಂದ ಆತನನ್ನು ಬಂಧಿಸಿರುವ ಪೊಲೀಸರು, ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ.

ಮಂಗಳೂರಿನಲ್ಲಿ ನಿಷೇಧಿತ  ಉಗ್ರ ಸಂಘಟನೆ ಪಿಎಫ್ಐ ಬಗ್ಗೆ ಪ್ರಚಾರ ಮಾಡಿದ ಮುಸ್ಲಿಂ ಧರ್ಮಗುರು ಬಂಧನ
PFI ಪರ ಪ್ರಚಾರ ಮಾಡಿದ ಮಂಗಳೂರಿನ ಮುಸ್ಲಿಂ ಧರ್ಮಗುರು ಬಂಧನ
ಭಾವನಾ ಹೆಗಡೆ
|

Updated on:Oct 11, 2025 | 1:20 PM

Share

ಮಂಗಳೂರು, ಅಕ್ಟೋಬರ್ 11: ನಿಷೇಧಿತ ಉಗ್ರ ಸಂಘಟನೆಯಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಪರವಾಗಿ ಪ್ರಚಾರ ಮಾಡಿದ್ದ ಕಡಬ ಮೂಲದ ಮುಸ್ಲಿಂ ಧರ್ಮಗುರುವನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಸಂಘಟನೆಯ ಭೂಗತ ಸದಸ್ಯರನ್ನೂ ಸಂಪರ್ಕಿಸಿದ ಧರ್ಮಗುರು ಸೈಯ್ಯದ್ ಇಬ್ರಾಹಿಂ ತಂಙಳ್, ಸಾಮಾಜಿಕ ಜಾಲತಾಣದಲ್ಲಿ ಸಂಘಟನೆ ಕುರಿತು ಪ್ರಚಾರ ಮಾಡುತ್ತಿದ್ದ. ಈಗ ಆತ ನ್ಯಾಯಾಂಗದ ವಶದಲ್ಲಿದ್ದಾನೆ.

ಭೂಗತ ಉಗ್ರರನ್ನು ಸಂಪರ್ಕಿಸಿ ಮತ್ತೆ ಚಟುವಟಿಕೆ ಶುರು ಮಾಡಲು ಪ್ರಚೋದಿಸಿದ ಧರ್ಮಗುರು

ಈ ಧರ್ಮಗುರು PFI ಪರವಾಗಿ, ಸಂಘಟನೆಯ ಪುನರ್ ರಚನೆಯ ಬಗ್ಗೆ ಪ್ರಚಾರ ಮಾಡುವುದಷ್ಟೇ ಅಲ್ಲದೇ ವಾಟ್ಸಾಪ್​ನಲ್ಲಿ ಸಲಮಾನ್ ಸಲಮಾ (SALAMAN SALAMA) ಎಂಬ ಗ್ರೂಪ್ ರಚನೆ ಮಾಡಿದ್ದ. ಈ ಗ್ರೂಪ್ ಮೂಲಕ ಭೂಗತರಾಗಿರುವ PFI ಸದಸ್ಯರನ್ನು ಸಂಪರ್ಕಿಸಿದ್ದ ಸೈಯ್ಯದ್ ಇಬ್ರಾಹಿಂ ತಂಙಳ್, ಮತ್ತೆ ಚಟುವಟಿಕೆ ಆರಂಭಿಸಲು ಪ್ರಚೋದನೆ ನೀಡುತ್ತಿದ್ದ. ನಗರದ ಉರ್ವ ಸ್ಟೋರ್ ಬಳಿಯಿಂದ ಈತನನ್ನು ವಶಕ್ಕೆ ಪಡೆದಿದ್ದ ಪೊಲೀಸರು,  ಈತನಿಂದ ಮೊಬೈಲ್ ಫೋನ್​ನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರು NIA ಪ್ರಕರಣಗಳ ವಿಶೇಷ ನ್ಯಾಯಾಲಯಕ್ಕೆ ಸೈಯ್ಯದ್ ಇಬ್ರಾಹಿಂನನ್ನು ಹಾಜರು ಪಡಿಸಿದ್ದಾರೆ. ದಿನಾಂಕ 24-10-2025 ವರೆಗೆ ಆತನನ್ನು ನ್ಯಾಯಾಂಗ ವಶಕ್ಕೆ ನೀಡಲಾಗಿದೆ.

PFI ಎಂದರೇನು?

ಪಿಎಫ್‌ಐ ಎಂದರೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಎಂಬ ಒಂದು ಇಸ್ಲಾಮಿಸ್ಟ್ ರಾಜಕೀಯ ಸಂಘಟನೆ. ಮುಸ್ಲಿಮ್ ಅಲ್ಪಸಂಖ್ಯಾತರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಅಭಿವೃದ್ಧಿಗಾಗಿ 2006ರಲ್ಲಿ ಇದು ಭಾರತದಲ್ಲಿ ಸ್ಥಾಪನೆಯಾಗಿತ್ತು. PFI ತನ್ನ ಕಾರ್ಯಕ್ರಮಗಳಲ್ಲಿ ಅಲ್ಪಸಂಖ್ಯಾತರ ಹಕ್ಕುಗಳಿಗಾಗಿ ಪ್ರತಿಭಟನೆಗಳು, ಸಾಮಾಜಿಕ ಸೇವೆಗಳು ಮತ್ತು ಶಿಕ್ಷಣ ಕಾರ್ಯಕ್ರಮಗಳನ್ನು ನಡೆಸುತ್ತದೆ. ಆದರೆ, ಇದನ್ನು ಭಾರತ ಸರ್ಕಾರವು ರಾಷ್ಟ್ರ ವಿರೋಧಿ ಚಟುವಟಿಕೆಗಳಿಗೆ ಸಂಬಂಧಿಸಿದ್ದೆಂದು ಆರೋಪಿಸಿ 2022 ರಲ್ಲಿ ನಿಷೇಧಿಸಿದೆ.

ಜುಲೈ 26, 2022 ರಂದು ಇದೇ ಸಂಘಟನೆಯ ಸದಸ್ಯರು ಬಿಜೆಪಿಯ ಯುವ ಮೋರ್ಚಾ ಅಧ್ಯಕ್ಷ ಪ್ರವೀಣ್ ನೆಟ್ಟಾರು ಅವರನ್ನು ಹರಿತವಾದ ಆಯುಧಗಳಿಂದ ಕೊಚ್ಚಿ ಕೊಲೆ ಮಾಡಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:19 pm, Sat, 11 October 25