AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಮಂಗಳೂರು ವಿವಿ ಪ್ರೊ. ಅರಬಿ ವಜಾ, ವರದಿ ಮುಚ್ಚಿಟ್ಟ ಖಾನ್ ವಿರುದ್ಧ ದೂರು

ಮಂಗಳೂರು: ಸಂಶೋಧನಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇರೆಗೆ ಅರ್ಥಶಾಸ್ತ್ರ ಪ್ರಾಧ್ಯಾಪಕ ಪ್ರೊ. ಅರಬಿ ಅವರನ್ನು ಸೇವೆಯಿಂದ ವಜಾ ಮಾಡಲಾಗಿದೆ. ಈ ಬಗ್ಗೆ ಮಂಗಳೂರು ವಿವಿ ಸಿಂಡಿಕೇಟ್ ಸಭೆಯಲ್ಲಿ ತೀರ್ಮಾನಿಸಲಾಗಿದೆ. 2018ರಲ್ಲಿ ಮಹಿಳಾ ಆಯೋಗಕ್ಕೆ ಸಂಶೋಧನಾ ವಿದ್ಯಾರ್ಥಿನಿ ಸಾಕ್ಷ್ಯ ಸಮೇತ ದೂರು ನೀಡಿದ್ದರು. ಆಯೋಗ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಸಮಿತಿಯಿಂದ ತನಿಖೆ ಶುರುವಾಗಿತ್ತು. ಬಳಿಕ 2018ರ ಡಿಸೆಂಬರ್​ನಲ್ಲೇ  ಆಡಳಿತ ಸಮಿತಿ ವರದಿಯನ್ನು ಸಲ್ಲಿಸಿತ್ತು. ಆದರೆ ವಿವಿ ಕುಲಸಚಿವ ಎಂ.ಎಂ. ಖಾನ್ ವರದಿ ತೆರೆಯದೇ ಮುಚ್ಚಿಟ್ಟಿದ್ದರು. ಆದರೆ […]

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಮಂಗಳೂರು ವಿವಿ ಪ್ರೊ. ಅರಬಿ ವಜಾ, ವರದಿ ಮುಚ್ಚಿಟ್ಟ ಖಾನ್ ವಿರುದ್ಧ ದೂರು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 29, 2020 | 1:48 PM

Share

ಮಂಗಳೂರು: ಸಂಶೋಧನಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇರೆಗೆ ಅರ್ಥಶಾಸ್ತ್ರ ಪ್ರಾಧ್ಯಾಪಕ ಪ್ರೊ. ಅರಬಿ ಅವರನ್ನು ಸೇವೆಯಿಂದ ವಜಾ ಮಾಡಲಾಗಿದೆ. ಈ ಬಗ್ಗೆ ಮಂಗಳೂರು ವಿವಿ ಸಿಂಡಿಕೇಟ್ ಸಭೆಯಲ್ಲಿ ತೀರ್ಮಾನಿಸಲಾಗಿದೆ.

2018ರಲ್ಲಿ ಮಹಿಳಾ ಆಯೋಗಕ್ಕೆ ಸಂಶೋಧನಾ ವಿದ್ಯಾರ್ಥಿನಿ ಸಾಕ್ಷ್ಯ ಸಮೇತ ದೂರು ನೀಡಿದ್ದರು. ಆಯೋಗ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಸಮಿತಿಯಿಂದ ತನಿಖೆ ಶುರುವಾಗಿತ್ತು. ಬಳಿಕ 2018ರ ಡಿಸೆಂಬರ್​ನಲ್ಲೇ  ಆಡಳಿತ ಸಮಿತಿ ವರದಿಯನ್ನು ಸಲ್ಲಿಸಿತ್ತು. ಆದರೆ ವಿವಿ ಕುಲಸಚಿವ ಎಂ.ಎಂ. ಖಾನ್ ವರದಿ ತೆರೆಯದೇ ಮುಚ್ಚಿಟ್ಟಿದ್ದರು.

ಆದರೆ ಇತ್ತೀಚೆಗೆ ಮಹಿಳಾ ಆಯೋಗ ಈ ವರದಿ ಬಗ್ಗೆ ಕೇಳಿತ್ತು. ಹೀಗಾಗಿ ಸಿಂಡಿಕೇಟ್ ಎದುರು ಈ ವರದಿ ಬಗ್ಗೆ ಪ್ರಸ್ತಾಪ ಮಾಡಲಾಯಿತು. ವರದಿಯಲ್ಲಿ ಪ್ರೊ. ಅರಬಿ ತಪ್ಪಿತಸ್ಥ ಎಂಬುವುದು ಸಾಬೀತಾದ ಹಿನ್ನೆಲೆಯಲ್ಲಿ ಅವರನ್ನ ಸೇವೆಯಿಂದ ವಜಾ ಮಾಡಲಾಗಿದೆ. ಜೊತೆಗೆ ವರದಿ ಮುಚ್ಚಿಟ್ಟಿದ್ದಕ್ಕೆ ಎಂ.ಎಂ. ಖಾನ್ ವಿರುದ್ಧವೂ ಸರ್ಕಾರಕ್ಕೆ ದೂರು ನೀಡಲು ನಿರ್ಧರಿಸಲಾಗಿದೆ.

Published On - 1:48 pm, Thu, 29 October 20

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು