ಬೆಂಗಳೂರು: ರಾಜ್ಯದಲ್ಲಿ ತೀರ್ವ ಆಂತಕ ಮೂಡಿಸಿದ್ದ, ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ (Mangalore Blast) ಪ್ರಕರಣದ ತನಿಖೆಯನ್ನು ಎನ್‌ಐಎಗೆ (NIA) ವರ್ಗಾಯಿಸಿ, ಕೇಂದ್ರ ಸರ್ಕಾರ (Central Government) ಆದೇಶ ಹೊರಡಿಸಿದೆ. ಮಂಗಳೂರಿನ ಆಟೋದಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಪ್ರಾಥಮಿಕ ತನಿಖೆ ಮಾಡಿದೆ. ಈ ತನಿಖೆಯಲ್ಲಿ ಸಂಗ್ರಹಿಸಲಾದ ಸಾಕ್ಷ್ಯಗಳನ್ನು ಆಧರಿಸಿ, ಸರ್ಕಾರ ಯುಎಪಿಎ ಕಾಯ್ದೆ ಅನ್ವಯ ಎನ್ಐಎ ತನಿಖೆ ನಡೆಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಿತ್ತು. ಈ ಹಿನ್ನೆಲೆ ಕೇಂದ್ರ ಸರ್ಕಾರ ಐಎನ್ಎ ತನಿಖೆಗೆ ಸಮ್ಮತಿಸಿದೆ.
ಘಟನೆ ಹಿನ್ನೆಲೆ
ನವೆಂಬರ್ 20 ರಂದು ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆ ಬಳಿ ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ದಿಢೀರ್ ನಿಗೂಢ ಸ್ಫೋಟ ಸಂಭವಿಸಿತ್ತು. ಬಳಿಕ ವಿಷಯ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತ ಶಶಿಕುಮಾರ್ ಹಾಗೂ ವಿಧಿವಿಜ್ಞಾನ ಇಲಾಖೆಯ ತಜ್ಞರು ಹಾಗೂ ಬಾಂಬ್ ನಿಷ್ಕ್ರಿಯ ದಳ ದೌಡಾಯಿಸಿ ಪರಿಶೀಲನೆ ನಡೆಸಿದ್ದರು.
NIAಗೆ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ
ಪ್ರಕರಣದ ಆರೋಪಿ ಶಂಕಿತ ಉಗ್ರ ಶಾರೀಕ್ ಬಗ್ಗೆ ಆಘಾತಕಾರಿ ಅಂಶಗಳು ಬೆಳಕಿಗೆ ಬರುತ್ತಿವೆ. ಈ ಹಿನ್ನೆಲೆಯಲ್ಲಿ ಇದೀಗ ಈ ಪ್ರಕರಣವನ್ನು ರಾಜ್ಯ ಸರ್ಕಾರ, ಎನ್ಐಎ ತನಿಖೆಗೆ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿತ್ತು. ಶಂಕಿತ ಉಗ್ರ ಶಾರೀಕ್ ವಿರುದ್ಧ ಯುಎಪಿಎ ಕಾಯ್ದೆ ಅನ್ವಯ ಎನ್ಐಎ ತನಿಖೆ ನಡೆಸಲು ರಾಜ್ಯ ಸರ್ಕಾರ ಶಿಫಾರಸು ಮಾಡಿದೆ.
ಇತ್ತೀಚೆಗೆ ಮಂಗಳೂರಿನ ಕಂಕನಾಡಿಯಲ್ಲಿ ಆಟೊದಲ್ಲಿ ಕುಕ್ಕರ್ ಬಾಂಬ್ ಸ್ಫೋಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿರುವ ಶಂಕಿತ ಉಗ್ರ ಶಾರೀಕ್ನನ್ನು ಬೆಂಬಲಿಸಿ ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ (Islamic Resistence Concil – IRC) ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದು, ಮತ್ತೊಂದು ದಾಳಿಯ ಬೆದರಿಕೆ ಹಾಕಿದೆ.
ಒಂದೊಂದೆ ಸ್ಫೋಟಕ ಮಾಹಿತಿ ಬಯಲು
ಮಂಗಳೂರಿನಲ್ಲಿ ನವೆಂಬರ್ 19ರಂದು ಸ್ಫೋಟಗೊಂಡ ಶಾರಿಕ್ನ ಕುಕ್ಕರ್ ಬಾಂಬ್ ಎಲ್ಲೆಡೆ ಭೀತಿ ಹುಟ್ಟಿಸಿದೆ. ಆದ್ರೆ, ವಿಷ್ಯ ಅದಲ್ಲ. ಒಂದು ವೇಳೆ ಆವತ್ತು ಆಟೋದಲ್ಲಿ ಬಾಂಬ್ ಬ್ಲಾಸ್ಟ್ ಆಗದೇ ಇದ್ದಿದ್ರೆ, ಇಡಿ ಮಂಗಳೂರಿಗೆ ಮಂಗಳೂರೇ ಚಿಂದಿ ಚಿಂದಿಯಾಗ್ತಿತ್ತು ಅನ್ನೋ ಭಯಾನಕ ಸಂಗತಿ ಖಾಕಿ ತನಿಖೆಯಲ್ಲಿ ಬಯಲಾಗಿದೆ.
ಮಂಗಳೂರಿನ ಪ್ರಸಿದ್ಧ ದೇಗುಲಗಳು, ಬಸ್ ನಿಲ್ದಾಣ ಹಾಗೂ ಆರ್ಎಸ್ಎಸ್ ಕಚೇರಿ ಶರೀಕ್ನ ಟಾರ್ಗೆಟ್ ಆಗಿತ್ತು ಎನ್ನುವ ಆಘಾತಕಾರಿ ಅಂಶಗಳು ಪೊಲೀಸ್ ತನಿಖೆ ವೇಳೆ ಹೊರಬಂದಿವೆ. ಇದರಿಂದ ಇಡೀ ಮಂಗಳೂರು ಮಾತ್ರವಲ್ಲ ಕರ್ನಾಟಕವೇ ಬೆಚ್ಚಿಬಿದ್ದಿದೆ.
ಆಟೋದಲ್ಲಿ ಕುಕ್ಕರ್ ಬಾಂಬ್ ಸಿಡಿಸಿದ ಶಾರೀಕ್ ಮಂಗಳೂರಿನಲ್ಲಿ ಅದೆಂಥಾ ವಿಧ್ವಂಸಕ ಕೃತ್ಯ ನಡೆಸೋದಕ್ಕೆ ಸ್ಕೆಚ್ ಹಾಕಿದ್ದ ಅನ್ನೋ ಬೆಚ್ಚಿ ಬೀಳಿಸೋ ಸಂಗತಿ ಬಯಲಾಗಿದೆ. ಶಾರಿಕ್ ಬಾಂಬ್ ಬ್ಲಾಸ್ಟ್ಗೂ ಮೊದಲು ಮಾಡಿದ ಪ್ಲ್ಯಾನ್ಗಳು.. ಆತನೇ ಬಿಟ್ಟು ಕೊಟ್ಟ ಹಿಂಟ್ಗಳಿಂದ. ಉಗ್ರನ ಟಾರ್ಗೆಟ್ ಪ್ಲೇಸ್ಗಳು ಯಾವುದೆಲ್ಲ ಆಗಿತ್ತು ಅಂತಾ ಖಾಕಿ ತನಿಖೆಯಲ್ಲಿ ಬಯಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:51 pm, Fri, 25 November 22