ಮಣ್ಣು ಕುಸಿತ ದುರಂತದಿಂದ ಎಚ್ಚೆತ್ತ ಮಂಗಳೂರು ಪಾಲಿಕೆ: ಮಳೆಗಾಲ ಮುಗಿಯುವವೆಗೂ ಕಟ್ಟಡ ಕಾಮಗಾರಿಗೆ ಬ್ರೇಕ್

ಮಂಗಳೂರಿನ ಬಲ್ಮಠ ರೋಡ್ ಸಮೀಪ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿರುವ ವೇಳೆ ಭೂಕುಸಿತವಾಗಿ ಇಬ್ಬರು ಕಾರ್ಮಿಕರ ಪೈಕಿ ಓರ್ವ ಸಾವನ್ನಪ್ಪಿದ್ದರು, ಮತ್ತೊಬ್ಬ ಪಾರಾಗಿದ್ದಾರೆ. ಸದ್ಯ ದುರಂತದಿಂದ ಎಚ್ಚೆತ್ತಿರುವ ಮಂಗಳೂರು ಮಹಾನಗರ ಪಾಲಿಕೆ ಮಳೆಗಾಲ ಮುಕ್ತಾಯದವರೆಗೆ ‌ಯಾವುದೇ ಕಟ್ಟಡ ಕಾಮಗಾರಿ ನಡೆಸದಂತೆ ಆಯುಕ್ತ ಆನಂದ್ ಸಿ.ಎಲ್ ಆದೇಶಿಸಿದ್ದಾರೆ.

ಮಣ್ಣು ಕುಸಿತ ದುರಂತದಿಂದ ಎಚ್ಚೆತ್ತ ಮಂಗಳೂರು ಪಾಲಿಕೆ: ಮಳೆಗಾಲ ಮುಗಿಯುವವೆಗೂ ಕಟ್ಟಡ ಕಾಮಗಾರಿಗೆ ಬ್ರೇಕ್
ಮಣ್ಣು ಕುಸಿತ ದುರಂತದಿಂದ ಎಚ್ಚೆತ್ತ ಮಂಗಳೂರು ಪಾಲಿಕೆ: ಮಳೆಗಾಲ ಮುಗಿಯುವವೆಗೂ ಕಟ್ಟಡ ಕಾಮಗಾರಿಗೆ ಬ್ರೇಕ್
Follow us
ಅಶೋಕ್​ ಪೂಜಾರಿ, ಮಂಗಳೂರು
| Updated By: ಗಂಗಾಧರ​ ಬ. ಸಾಬೋಜಿ

Updated on: Jul 03, 2024 | 9:30 PM

ಮಂಗಳೂರು, ಜುಲೈ 03: ನಗರದ ಬಲ್ಮಠ ರೋಡ್ ಸಮೀಪ ನಿರ್ಮಾಣ ಹಂತದ ಕಟ್ಟಡದ ಬಳಿ ಮಣ್ಣು ಕುಸಿದು (Landslide) ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾರೆ. ಹೀಗಾಗಿ ಮಂಗಳೂರು ಪಾಲಿಕೆ (Mangalore City Corporation) ವ್ಯಾಪ್ತಿಯಲ್ಲಿ ಮಳೆಗಾಲ ಮುಕ್ತಾಯದವರೆಗೆ ‌ಯಾವುದೇ ಕಟ್ಟಡ ಕಾಮಗಾರಿ ನಡೆಸದಂತೆ ಮಂಗಳೂರು ಪಾಲಿಕೆ ಆಯುಕ್ತ ಸಿ.ಎಲ್.ಆನಂದ್ ಆದೇಶ ಹೊರಡಿಸಿದ್ದಾರೆ. ಆ ಮೂಲಕ ಕಟ್ಟಡ ನಿರ್ಮಾಣ ಸಂಸ್ಥೆಗಳಿಗೆ ಪಾಲಿಕೆ ಆಯುಕ್ತರಿದಂದ ಎಚ್ಚರಿಕೆ ನೀಡಲಾಗಿದೆ.

ಅವೈಜ್ಞಾನಿಕವಾಗಿ ಭೂ ಅಗೆತ‌ ಮತ್ತು ಕಟ್ಟಡ ನಿರ್ಮಾಣ ಕಾಮಗಾರಿ ಮಾಡಲಾಗುತ್ತಿದೆ. ಭೂ ಕುಸಿತ ಉಂಟಾಗಿ ಜೀವ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಉಂಟಾಗಿದೆ. ಹೀಗಾಗಿ ಮಳೆಗಾಲ ಮುಕ್ತಾಯದವರೆಗೆ ಯಾವುದೇ ಕಟ್ಟಡ ನಿರ್ಮಾಣ ಕಾಮಗಾರಿ ಮಾಡಬಾರದು.

ಇದನ್ನೂ ಓದಿ: ಮಂಗಳೂರಿನಲ್ಲಿ ಮಣ್ಣು ಕುಸಿತ ದುರಂತ: ಓರ್ವ ಸಾವು, ಮತ್ತೋರ್ವ ಪವಾಡಸದೃಶ್ಯ ರೀತಿ ಪಾರು

ಈಗಾಗಲೇ ಪ್ರಾರಂಭಿಸಿರುವ ಕಟ್ಟಡ ನಿರ್ಮಾಣ ಕಾಮಗಾರಿಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಕಾಮಗಾರಿ ನಿಲ್ಲಿಸಬೇಕು. ಇದನ್ನು ಉಲ್ಲಂಘಿಸಿದ್ದಲ್ಲಿ ವಿಪತ್ತು ನಿರ್ವಹಣೆ ಕಾಯ್ದೆಯಡಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಪ್ರಸ್ತುತ ಮುಂಗಾರಿಗೆ ಅತ್ಯಧಿಕ ಮಳೆಯಾಗುವ ಸಾಧ್ಯತೆಗಳೊಂದಿಗೆ ರೆಡ್, ಆರೆಂಜ್, ಎಲ್ಲೊ ಅಲರ್ಟ್ ಬಗ್ಗೆ ಹವಮಾನ ಇಲಾಖೆಯಿಂದ ನಿರಂತರವಾಗಿ ಮುನ್ಸೂಚನೆ ನೀಡುತ್ತಿದ್ದು, ಈ ಹಿನ್ನಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಯಾವುದೇ ಕಟ್ಟಡದ ಕಾಮಗಾರಿಯನ್ನು ಮಳೆಗಾಲ ಮುಕ್ತಾಯವಾಗುವವರೆಗೆ ನಡೆಸದಂತೆ ತಿಳಿಸಲಾಗಿದೆ.

ಇದನ್ನೂ ಓದಿ: ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗ ಮಾರ್ಗದಿಂದಲೇ ಚಿಕಿತ್ಸೆ

ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಭೂಕುಸಿತ ಸಂಭವಿಸಿದೆ. ಮಣ್ಣಿನಡಿ ಸಿಲುಕಿದ್ದ ಇಬ್ಬರು ಕಾರ್ಮಿಕರ ಪೈಕಿ ಒಬ್ಬನನ್ನ ರಕ್ಷಿಸಲಾಗಿದ್ದು, ಮತ್ತೊಬ್ಬ ಸಾವನ್ನಪ್ಪಿದ್ದಾರೆ. ಸುಮಾರು 40 ಅಡಿಯಷ್ಟು ಗುಂಡಿ‌ ತೋಡಿದ್ದು, ಸುತ್ತಲೂ ಕಾಂಕ್ರೀಟ್ ತಡೆಗೋಡೆ ನಿರ್ಮಾಣವಾಗಿದೆ. ಮಧ್ಯಾಹ್ನ 12.30ರ ಸುಮಾರು. ಇದೇ ತಡೆಗೋಡೆಗೆ ಬಿಹಾರ ಮೂಲದ ರಾಜ್​ಕುಮಾರ್, ಉತ್ತರ ಪ್ರದೇಶ ಮೂಲದ ಚಂದನ್ ವಾಟರ್ ಪ್ರೂಫ್‌ ಕೆಮಿಕಲ್ ಬಳೀತಿದ್ರು. ಈ ವೇಳೆ ಏಕಾಏಕಿ ಕಾರ್ಮಿಕರ ಮೇಲೆ ಮಣ್ಣು ಕುಸಿದಿತ್ತು. 4-5 ದಿನದಿಂದ ಸುರಿಯುತ್ತಿರುವ ಮಳೆಯಿಂದ ಮಣ್ಣು ಸಡಿಲಗೊಂಡು ದುರಂತ ಸಂಭವಿಸಿತ್ತು.

ಎನ್​ಡಿಆರ್​ಎಫ್​, ಎಸ್​ಡಿಆರ್​​ಎಫ್​, ಅಗ್ನಿಶಾಮಕ ಸಿಬ್ಬಂದಿ ಸತತ 2 ಗಂಟೆಗಳ ಕಾಲ ಹರಸಾಹಸ ಪಟ್ಟು ಓರ್ವ ಕಾರ್ಮಿಕರ ಜೀವ ಉಳಿಸಿದ್ದರು. ಅರೆ ಪ್ರಜ್ಞೆಯಲ್ಲಿದ್ದ ಬಿಹಾರ ಮೂಲದ ಕಾರ್ಮಿಕ ರಾಜಕುಮಾರ್​ನ ರಕ್ಷಣೆ ಮಾಡಿ, ಆಸ್ಪತ್ರೆಗೆ ಶಿಫ್ಟ್ ಮಾಡಿದ್ದರು. ಆದರೆ ಸತತ ಆರು ಗಂಟೆ ಕಾರ್ಯಚರಣೆ ಮಾಡಿದರೂ ಚಂದನ್​ನನ್ನು ರಕ್ಷಣೆ ಮಾಡಲಾಗಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ
ಕ್ಲಾಸ್​ ನಡೆಯುವಾಗಲೇ 3ನೇ ಮಹಡಿಯಿಂದ ಹಾರಿದ ಕಾಲೇಜು ವಿದ್ಯಾರ್ಥಿ
ಕ್ಲಾಸ್​ ನಡೆಯುವಾಗಲೇ 3ನೇ ಮಹಡಿಯಿಂದ ಹಾರಿದ ಕಾಲೇಜು ವಿದ್ಯಾರ್ಥಿ
ಶ್ರೀರಾಮುಲು ಕಾಂಗ್ರೆಸ್ ಸೇರ್ತಾರಾ? ರಾಜಕೀಯ ಗುಟ್ಟು ಬಿಚ್ಚಿಟ್ಟ ಹಳೇ ಕುಚಿಕು
ಶ್ರೀರಾಮುಲು ಕಾಂಗ್ರೆಸ್ ಸೇರ್ತಾರಾ? ರಾಜಕೀಯ ಗುಟ್ಟು ಬಿಚ್ಚಿಟ್ಟ ಹಳೇ ಕುಚಿಕು
ವ್ಯಕ್ತಿತ್ವದಲ್ಲಿ ಉತ್ತಮ ಈ ತ್ರಿವಿಕ್ರಮ: ಗೆಲುವಿನ ಸೂಚನೆ ಕೊಟ್ಟ ಬಿಗ್ ಬಾಸ್
ವ್ಯಕ್ತಿತ್ವದಲ್ಲಿ ಉತ್ತಮ ಈ ತ್ರಿವಿಕ್ರಮ: ಗೆಲುವಿನ ಸೂಚನೆ ಕೊಟ್ಟ ಬಿಗ್ ಬಾಸ್
ಶ್ರೀರಾಮುಲು ಕಾಂಗ್ರೆಸ್​ಗೆ ಕಳುಹಿಸಲು ಅವರೇ ಪ್ರಯತ್ನಿಸ್ತಿರಬಹುದು: ಡಿಕೆಶಿ
ಶ್ರೀರಾಮುಲು ಕಾಂಗ್ರೆಸ್​ಗೆ ಕಳುಹಿಸಲು ಅವರೇ ಪ್ರಯತ್ನಿಸ್ತಿರಬಹುದು: ಡಿಕೆಶಿ
9 ವಿಕೆಟ್ ಕಬಳಿಸಿ ದಾಖಲೆ ಬರೆದ ಸಿದ್ಧಾರ್ಥ್ ದೇಸಾಯಿ
9 ವಿಕೆಟ್ ಕಬಳಿಸಿ ದಾಖಲೆ ಬರೆದ ಸಿದ್ಧಾರ್ಥ್ ದೇಸಾಯಿ
ಮುಡಾ ಹಗರಣದಲ್ಲಿ ಕ್ಲೀನ್​ಚಿಟ್; ಸಿಎಂ ರಿಯಾಕ್ಷನ್ ಇದು
ಮುಡಾ ಹಗರಣದಲ್ಲಿ ಕ್ಲೀನ್​ಚಿಟ್; ಸಿಎಂ ರಿಯಾಕ್ಷನ್ ಇದು
ರಥೋತ್ಸವದ ವೇಳೆ ವಿಟ್ಲದಲ್ಲಿ ದೇವರ ಮೂರ್ತಿ, ಅರ್ಚಕರಿಗೆ ಬಡಿದ ಡ್ರೋನ್​
ರಥೋತ್ಸವದ ವೇಳೆ ವಿಟ್ಲದಲ್ಲಿ ದೇವರ ಮೂರ್ತಿ, ಅರ್ಚಕರಿಗೆ ಬಡಿದ ಡ್ರೋನ್​
ಜಿಂಕೆಯ ವೇಗ, ಹದ್ದಿನ ಕಣ್ಣು... ನಿತೀಶ್ ಕುಮಾರ್ ರೆಡ್ಡಿ ಸೂಪರ್ ಕ್ಯಾಚ್
ಜಿಂಕೆಯ ವೇಗ, ಹದ್ದಿನ ಕಣ್ಣು... ನಿತೀಶ್ ಕುಮಾರ್ ರೆಡ್ಡಿ ಸೂಪರ್ ಕ್ಯಾಚ್
ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು
ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು