ಅನ್ಯಕೋಮಿನ ಯುವಕರೊಂದಿಗೆ ಹಿಂದೂ ಯುವತಿ ಸುತ್ತಾಟ ಆರೋಪ: ಸ್ಥಳೀಯರ ಕೈಗೆ ಸಿಕ್ಕಿಬಿದ್ದ ವಿದ್ಯಾರ್ಥಿಗಳು
ಮಂಗಳೂರು ಹೊರವಲಯದ ಮುಕ್ಕ ಎಂಬಲ್ಲಿ ಅನ್ಯಕೋಮಿನ ಇಬ್ಬರು ವಿದ್ಯಾರ್ಥಿಗಳ ಜೊತೆ ಹಿಂದೂ ಯುವತಿ ಸುತ್ತಾಟ ಆರೋಪ ಕೇಳಿಬಂದಿದೆ. ಮಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಎನ್ನಲಾಗಿದೆ. ಕಾರು ಅಪಘಾತದ ವೇಳೆ ಸಾರ್ವಜನಿಕರು ಅನ್ಯಕೋಮಿನ ಜೋಡಿ ಎಂಬುದು ಬೆಳಕಿಗೆ ಬಂದಿದೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು, ಜೂನ್ 12: ಅನ್ಯಕೋಮಿನ ಇಬ್ಬರು ವಿದ್ಯಾರ್ಥಿಗಳ (Students) ಜೊತೆ ಹಿಂದೂ ಯುವತಿ ಸುತ್ತಾಟ ಆರೋಪ ಮಾಡಲಾಗಿದ್ದು, ಕಾರಿನಲ್ಲಿದ್ದ ತಂಡವನ್ನು ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿರುವಂತಹ ಘಟನೆ ಮಂಗಳೂರು (Mangaluru) ಹೊರವಲಯದ ಮುಕ್ಕ ಎಂಬಲ್ಲಿ ನಡೆದಿದೆ. ಮುಕ್ಕ ಸಮೀಪ ಕಾರಿನಲ್ಲಿ ಇಬ್ಬರು ಅನ್ಯಕೋಮಿನ ಯುವಕರೊಂದಿಗೆ ಹಿಂದೂ ಯುವತಿ ಇದ್ದಳು ಎನ್ನಲಾಗಿದೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಯುವತಿಯೊಂದಿಗೆ ಬಿಎಂಡಬ್ಲ್ಯು ಕಾರಿನಲ್ಲಿ ಹೊಗುತ್ತಿರಬೇಕಾದರೆ, ಸ್ಕೂಲ್ ಬಸ್ಗೆ ಡಿಕ್ಕಿ ಹೊಡೆದಿದ್ದಾರೆ. ಹೀಗಾಗಿ ಬಸ್ ಚಾಲಕನ ಜೊತೆ ತಂಡ ಜಗಳವಾಡುತ್ತಿದ್ದರು. ಜನ ಸೇರುತ್ತಿದ್ದಂತೆ ಸ್ಥಳದಿಂದ ಎಸ್ಕೇಪ್ ಆಗಲು ಯತ್ನಿಸಿದ್ದಾರೆ, ಆದರೆ ಕಾರು ಕೈಕೊಟ್ಟಿದೆ. ಬಳಿಕ ಜನರು ಇವರನ್ನು ಗಮನಿಸಿದ್ದು ಇದು ಅನ್ಯಕೋಮಿನ ಜೋಡಿ ಎಂಬುದು ಬೆಳಕಿಗೆ ಬಂದಿದೆ.
ಇದನ್ನೂ ಓದಿ: ಗಡಿನಾಡು ಕಾಸರಗೋಡಿನಲ್ಲಿ ಮತ್ತೆ ಲವ್ ಜಿಹಾದ್ ಸದ್ದು; ಮುಸ್ಲಿಂ ಯುವಕನ ಜತೆ ಮದುವೆಯಾಗಿ ಠಾಣೆಗೆ ಬಂದ ಯುವತಿ
BMW ಕಾರಿಗೆ ಫುಲ್ ಟಿಂಟ್ ಅಳವಡಿಸಿದ್ದು, ಹಲವು ಅನುಮಾನಕ್ಕೂ ಎಡೆಮಾಡಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದುಕೊಂಡಿದ್ದು, ಬಳಿಕ ಠಾಣೆಗೆ ಯುವತಿ ಪೋಷಕರನ್ನು ಕರೆಸಿ ಬಿಟ್ಟು ಕಳುಹಿಸಲಾಗಿದೆ.
ಇದನ್ನೂ ಓದಿ: ಲವ್ ಜಿಹಾದ್ ತಡೆಗೆ ಶ್ರೀರಾಮಸೇನೆಯಿಂದ ರಾಜ್ಯದ 6 ಕಡೆ ಸಹಾಯವಾಣಿ ಆರಂಭಿಸಲು ನಿರ್ಧಾರ
ಇನ್ನು ಇತ್ತೀಚೆಗೆ ಜಿಲ್ಲೆಯ ಕಾಸರಗೋಡಿನಲ್ಲಿ ಮತ್ತೆ ಲವ್ ಜಿಹಾದ್ ಸದ್ದು ಮಾಡಿತ್ತು. ಬದಿಯಡ್ಕದಲ್ಲಿ ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿತ್ತು. ಮುಸ್ಲಿಂ ಲೀಗ್ ನಾಯಕರೊಬ್ಬರು ಲವ್ ಜಿಹಾದ್ಗೆ ಬೆಂಬಲ ನೀಡುತ್ತಿದ್ದಾರೆ ಎಂದು ಕಾಸರಗೋಡಿನ ವಿಎಚ್ಪಿ ಸೇರಿ ಹಿಂದೂ ಪರ ಸಂಘಟನೆಗಳು ಆರೋಪಿಸಿದ್ದವು.
ಘಟನೆ ಹಿನ್ನೆಲೆ
ಮೇ 23ರಂದು ಮನೆಯಿಂದ ಹೋಗಿದ್ದ ಯುವತಿ ದಿಢೀರ್ ನಾಪತ್ತೆಯಾಗಿದ್ದರು. ಆ ಬಳಿಕ ಬದಿಯಡ್ಕ ರಿಜಿಸ್ಟ್ರಾರ್ ಕಚೇರಿ ಬೋರ್ಡ್‌ನಲ್ಲಿ ಅನ್ಯಕೋಮಿನ ಯುವನೊಂದಿಗೆ ಭಾವಚಿತ್ರಗಳ ಸಹಿತ ನೋಟೀಸ್ ಪತ್ತೆಯಾಗಿತ್ತು. ರಿಜಿಸ್ಟರ್ ಕಚೇರಿಯಲ್ಲಿ ಯುವತಿ ಮತ್ತು ಮಿರ್ಶಾದ್ ಮದುವೆಯಾಗಿರುವುದು ತಿಳಿದುಬಂದಿತ್ತು. ಮದುವೆಯಾದ ನಂತರ ಮೇ 27ರಂದು ಬದಿಯಡ್ಕ ಠಾಣೆಗೆ ಜೋಡಿ ಹಾಜರಾಗಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.