ಮೊಯಿದ್ದೀನ್ ಬಾವಾ ಸೋದರ ಮುಮ್ತಾಜ್ ಆತ್ಮಹತ್ಯೆ ಕೇಸ್​: ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಮಂಗಳೂರು ಕಮಿಷನರ್​

ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸೋದರ ಮುಮ್ತಾಜ್ ಅವರ ಮೃತದೇಹ ಕಳೆದ 28 ಗಂಟೆಗಳ ಕಾರ್ಯಾಚರಣೆ ಬಳಿಕ ಮಂಗಳೂರಿನ(Mangalore) ಕೂಳೂರಿನ ಸೇತುವೆ ಬಳಿ ಪತ್ತೆಯಾಗಿದೆ. ಈ ಪ್ರಕರಣಕ್ಕೆ ಸಂಬಧಿಸಿದಂತೆ ಮಾತನಾಡಿದ  ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ. ಈ ಕುರಿತು ಒಂದು ವರದಿ ಇಲ್ಲಿದೆ.

ಮೊಯಿದ್ದೀನ್ ಬಾವಾ ಸೋದರ ಮುಮ್ತಾಜ್ ಆತ್ಮಹತ್ಯೆ ಕೇಸ್​: ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಮಂಗಳೂರು ಕಮಿಷನರ್​
ಮೊಯಿದ್ದೀನ್ ಬಾವಾ ಸೋದರ ಮುಮ್ತಾಜ್ ಆತ್ಮಹತ್ಯೆ ಕೇಸ್​: ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಮಂಗಳೂರು ಕಮಿಷನರ್​
Edited By: ಕಿರಣ್ ಹನುಮಂತ್​ ಮಾದಾರ್

Updated on: Oct 07, 2024 | 4:51 PM

ದಕ್ಷಿಣ ಕನ್ನಡ, ಅ.07: ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರ ಸೋದರ ಮುಮ್ತಾಜ್ ಅವರ ಮೃತದೇಹ ಕಳೆದ 28 ಗಂಟೆಗಳ ಕಾರ್ಯಾಚರಣೆ ಬಳಿಕ ಮಂಗಳೂರಿನ(Mangalore) ಕೂಳೂರಿನ ಸೇತುವೆ ಬಳಿ ಪತ್ತೆಯಾಗಿದೆ. ಈ ಪ್ರಕರಣಕ್ಕೆ ಸಂಬಧಿಸಿದಂತೆ ಮಾತನಾಡಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್, ‘ಸೆಕ್ಸ್ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್​ಮೇಲ್ ಎಂದು ದೂರು ಬಂದಿದೆ. ಆರೋಪಿಗಳು ದೇಶ ಬಿಟ್ಟು ಹೋಗದಂತೆ ಎಲ್​ಒಸಿ ಜಾರಿ ಮಾಡಿದ್ದೇವೆ. ನಿನ್ನೆ(ಅ.06) ಮುಂಜಾನೆ ಮುಮ್ತಾಜ್ ಅಲಿ ನದಿಗೆ ಹಾರಿರುವ ಮಾಹಿತಿ ಬಂದಿತ್ತು. ಇಂದು ಬೆಳಗ್ಗೆ ಹತ್ತು ಗಂಟೆಗೆ ಮುಮ್ತಾಜ್ ಅಲಿ ಮೃತದೇಹ ಪತ್ತೆಯಾಗಿದೆ. ಮುಮ್ತಾಜ್ ಅಲಿ ಸಹೋದರ ಮೊಯಿದ್ದೀನ್ ಬಾವಾ ಅವರು ಹನಿಟ್ರ್ಯಾಪ್ ಮಾಡಿದ್ದಾರೆಂದು ಕಾವೂರು ಠಾಣೆಗೆ ದೂರು ನೀಡಿದ್ದಾರೆ ಎಂದರು.

ಕಾವೂರು ಠಾಣೆಯಲ್ಲಿ 6 ಜನರ ಮೇಲೆ ಎಫ್​ಐಆರ್

ಈ ಹಿನ್ನೆಲೆಯಲ್ಲಿ ಕಾವೂರು ಠಾಣೆಯಲ್ಲಿ 6 ಜನರ ಮೇಲೆ ಎಫ್​ಐಆರ್ ದಾಖಲಾಗಿದ್ದು, ದೂರಿನಲ್ಲಿ 3 ತಿಂಗಳಿನಿಂದ ಖಿನ್ನತೆಯಲ್ಲಿ ಇದ್ದ ಬಗ್ಗೆ ಹಾಗೂ ಸೆಕ್ಸ್ ವಿಡಿಯೋ ಆಧಾರದಲ್ಲಿ ಹಣಕ್ಕಾಗಿ ಬೆದರಿಕೆ ಹಾಕಿರುವ ಕುರಿತು ಉಲ್ಲೇಖಿಸಲಾಗಿದೆ. ಈ ಬಗ್ಗೆ ತಂಡ ರಚಿಸಿ ಆರೋಪಿಗಳಿಗೆ ಹುಡುಕಾಟ ಮಾಡುತ್ತಿದ್ದೇವೆ. ವಾಯ್ಸ್ ನೋಟ್​​ನಲ್ಲಿ ಸತ್ತಾರ್ ಎಂಬಾತನ ಬಗ್ಗೆ ಮುಮ್ತಾಜ್ ಹೇಳಿದ್ದಾರೆ. ಆರೋಪಿ ರೆಹಮತ್​ಗಾಗಿ ಪೊಲೀಸ್ ತಂಡ ಹುಡುಕಾಟ ನಡೆಸುತ್ತಿದೆ. ಆತ್ಮಹತ್ಯೆಗೂ ಮುನ್ನ ಬಸ್​ಗೆ ಮುಮ್ತಾಜ್​ ಅಲಿ ಕಾರು ಡಿಕ್ಕಿಯಾಗಿದೆ. ಬಸ್​ನವರ ಹೇಳಿಕೆಯನ್ನೂ ಪಡೆದಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ:ಸತತ 28ಗಂಟೆಗಳ ಕಾರ್ಯಾಚರಣೆ ಬಳಿಕ ಮೊಯಿದ್ದೀನ್ ಬಾವಾ ಸೋದರ ಮುಮ್ತಾಜ್ ಅಲಿ ಮೃತದೇಹ ಪತ್ತೆ

ಘಟನೆ ವಿವರ

ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ಮೊಯಿದ್ದೀನ್ ಬಾವ ಮತ್ತು ಮಾಜಿ MLC ಆಗಿರುವ ಬಿ.ಎಮ್.ಫಾರೂಕ್ ಅವರ ತಮ್ಮ ಆಗಿರುವ ಮೃತ ಮುಮ್ತಾಜ್ ಅಲಿ ಅವರು, ಭಾನುವಾರ ಬೆಳ್ಳಂಬೆಳಗ್ಗೆ ಮಂಗಳೂರಿನ ಕೂಳೂರು ಸೇತುವೆ ಮೇಲೆ ತಮ್ಮ ಐಷಾರಾಮಿ BMW ಕಾರು ನಿಲ್ಲಿಸಿ ನಿಗೂಢವಾಗಿ ನಾಪತ್ತೆಯಾಗಿದ್ದರು. ಹೀಗಾಗಿ ಸೇತುವೆಯಿಂದ ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿತ್ತು. ಕೋಸ್ಟ್ ಗಾರ್ಡ್, ಎಫ್,ಎಸ್ ಡಿಆರ್ ಎಫ್, ಅಗ್ನಿಶಾಮಕ ದಳ, ಈಶ್ವರ್ ಮಲ್ಪೆ ಸೇರಿದಂತೆ ಮುಳುಗು ತಜ್ಞರು ಶೋಧ ಕಾರ್ಯ ನಡೆಸಿದ್ದರು. ಸದ್ಯ ಈಗ ಮೃತದೇಹ ಪತ್ತೆಯಾಗಿದೆ. ಸಹೋದರನನ್ನ ನೆನೆದು ಮಾಜಿ ಶಾಸಕ ಮೊಯಿದ್ದೀನ್ ಬಾವ ಕಣ್ಣೀರು‌ ಹಾಕಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:50 pm, Mon, 7 October 24

ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
Loading...
Unable to load recommendations.
Follow Us