ನಕಲಿ ಪತ್ರಕರ್ತರೆಂದು ಅಸಲಿ ಪತ್ರಕರ್ತರ ಬಂಧನ, ಬಿಡುಗಡೆ

ಮಂಗಳೂರು: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಕರ್ಫ್ಯೂ ಹಿನ್ನೆಲೆ ಕೇರಳದಿಂದ ಮಂಗಳೂರಿಗೆ ಬಂದಿದ್ದ ಪತ್ರಕರ್ತರನ್ನು ಬಂಧಿಸಲಾಗಿದೆ. ಪತ್ರಕರ್ತರ ಸೋಗಿನಲ್ಲಿ ಆಗಮಿಸಿದ್ದ 50 ಜನರ ತಂಡ ವೆನ್ಲಾಕ್‌ ಆಸ್ಪತ್ರೆಗೆ ತೆರಳಿದ್ದರು. ಕ್ಯಾಮರಾ ಜೊತೆ ಮಾರಕಾಸ್ತ್ರಗಳನ್ನು ಹೊಂದಿದ್ದ ಇವರು ಆಸ್ಪತ್ರೆಗೆ ನುಗ್ಗಲು ಯತ್ನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಅನುಮಾನ ಬಂದು ಪೊಲೀಸರು 50 ಜನರ ತಂಡವನ್ನು ಬಂಧಿಸಿದ್ದಾರೆ ಎಂದು ಟಿವಿ9ಗೆ ಮಂಗಳೂರು ಪೊಲೀಸ್ ಆಯುಕ್ತ ಪಿ.ಎಸ್.ಹರ್ಷ ತಿಳಿಸಿದ್ದಾರೆ. ಪೊಲೀಸರ ವಶದಲ್ಲಿದ್ದ ಪತ್ರಕರ್ತರ ಬಿಡುಗಡ: ನಕಲಿ ಪತ್ರಕರ್ತರೆಂದು ಬಂಧಿಸಿದ್ದವರನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. […]

ನಕಲಿ ಪತ್ರಕರ್ತರೆಂದು ಅಸಲಿ ಪತ್ರಕರ್ತರ ಬಂಧನ, ಬಿಡುಗಡೆ
ಸಾಧು ಶ್ರೀನಾಥ್​

Updated on: Dec 20, 2019 | 12:07 PM

ಮಂಗಳೂರು: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಕರ್ಫ್ಯೂ ಹಿನ್ನೆಲೆ ಕೇರಳದಿಂದ ಮಂಗಳೂರಿಗೆ ಬಂದಿದ್ದ ಪತ್ರಕರ್ತರನ್ನು ಬಂಧಿಸಲಾಗಿದೆ. ಪತ್ರಕರ್ತರ ಸೋಗಿನಲ್ಲಿ ಆಗಮಿಸಿದ್ದ 50 ಜನರ ತಂಡ ವೆನ್ಲಾಕ್‌ ಆಸ್ಪತ್ರೆಗೆ ತೆರಳಿದ್ದರು. ಕ್ಯಾಮರಾ ಜೊತೆ ಮಾರಕಾಸ್ತ್ರಗಳನ್ನು ಹೊಂದಿದ್ದ ಇವರು ಆಸ್ಪತ್ರೆಗೆ ನುಗ್ಗಲು ಯತ್ನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಅನುಮಾನ ಬಂದು ಪೊಲೀಸರು 50 ಜನರ ತಂಡವನ್ನು ಬಂಧಿಸಿದ್ದಾರೆ ಎಂದು ಟಿವಿ9ಗೆ ಮಂಗಳೂರು ಪೊಲೀಸ್ ಆಯುಕ್ತ ಪಿ.ಎಸ್.ಹರ್ಷ ತಿಳಿಸಿದ್ದಾರೆ.

ಪೊಲೀಸರ ವಶದಲ್ಲಿದ್ದ ಪತ್ರಕರ್ತರ ಬಿಡುಗಡ:
ನಕಲಿ ಪತ್ರಕರ್ತರೆಂದು ಬಂಧಿಸಿದ್ದವರನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. 50 ಪತ್ರಕರ್ತರ ತಂಡ ಕೇರಳದಿಂದ ಮಂಗಳೂರಿಗೆ ಬಂದಿತ್ತು. ನಿನ್ನೆ ನಡೆದ ಪ್ರತಿಭಟನೆಯ ವರದಿಗಾಗಿ ಆಗಮಿಸಿದ್ದಾರೆ ಎಂದು ತನಿಖೆಯಲ್ಲಿ ತಿಳಿದಿದೆ. ಮಂಗಳೂರಿನ ವೆನ್ಲಾಕ್ ಆಸ್ಪತ್ರೆ ಬಳಿ ನಿಂತಿದ್ದಾಗ ಸರಿಯಾದ ದಾಖಲೆ ತೋರಿಸದ ಕಾರಣ ಇವರನ್ನು ಬಂಧಿಸಿಲಾಗಿತ್ತು. ಈಗ ಬಂಧಿತರು ಅಸಲಿ ಪತ್ರಕರ್ತರು ಎಂದು ತಿಳಿದ ಮೇಲೆ ಪತ್ರಕರ್ತರನ್ನು ವರದಿ ಮಾಡಲು ಅವಕಾಶ ನೀಡದೆ ಬಿಡುಗಡೆ ಮಾಡಿ ಮತ್ತೆ ಕೇರಳಕ್ಕೆ ಕಳುಹಿಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us