ಬಿಜೆಪಿ ವಿಜಯೋತ್ಸವ ವೇಳೆ ಇಬ್ಬರಿಗೆ ಚೂರಿ ಇರಿತ ಕೇಸ್​: ಮತ್ತೆ 7 ಆರೋಪಿಗಳ ಬಂಧನ

ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸುತ್ತಿದ್ದ ಹಿನ್ನಲೆಯಲ್ಲಿ ದೇಶಾದ್ಯಂತ ಬಿಜೆಪಿ ಕಾರ್ಯಕರ್ತರ ಸಂತೋಷ ಮುಗಿಲುಮುಟ್ಟಿತ್ತು. ಆದರೆ ಇದೇ ಸಂತೋಷ ಕಡಲನಗರಿ ಮಂಗಳೂರಿನಲ್ಲಿ ಬೆಚ್ಚಿಬೀಳಿಸುವ ಘಟನೆಗೆ ಸಾಕ್ಷಿಯಾಗಿತ್ತು. ಮೆರವಣಿಗೆಯಲ್ಲಿ ಭಾಗವಹಿಸಿದ ಇಬ್ಬರು ಬಿಜೆಪಿ ಕಾರ್ಯಕರ್ತರು ಚೂರಿ ಇರಿತಕ್ಕೆ ಒಳಗಾಗಿದ್ದರು. ಸದ್ಯ ಈ ಕೇಸ್​ಗೆ ಸಂಬಂಧ ಇದೀಗ ಮತ್ತೆ 7 ಆರೋಪಿಗಳನ್ನು ಬಂಧಿಸಲಾಗಿದೆ.

ಬಿಜೆಪಿ ವಿಜಯೋತ್ಸವ ವೇಳೆ ಇಬ್ಬರಿಗೆ ಚೂರಿ ಇರಿತ ಕೇಸ್​: ಮತ್ತೆ 7 ಆರೋಪಿಗಳ ಬಂಧನ
ಬಿಜೆಪಿ ವಿಜಯೋತ್ಸವ ವೇಳೆ ಇಬ್ಬರಿಗೆ ಚೂರಿ ಇರಿತ ಕೇಸ್​: ಮತ್ತೆ 7 ಆರೋಪಿಗಳ ಬಂಧನ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Jun 12, 2024 | 10:10 PM

ಮಂಗಳೂರು, ಜೂನ್​ 12: ಬಿಜೆಪಿ (BJP) ವಿಜಯೋತ್ಸವ ವೇಳೆ ಇಬ್ಬರಿಗೆ ಚೂರಿ ಇರಿತ ಪ್ರಕರಣಕ್ಕೆ (stabbing case) ಸಂಬಂಧಿಸಿದಂತೆ ಮತ್ತೆ 7 ಆರೋಪಿಗಳನ್ನು ಕೊಣಾಜೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇಮ್ರಾನ್, ಇರ್ಷಾದ್, ಶರ್ವಾನ್, ತಾಜುದ್ದೀನ್, ಮುಬಾರಕ್, ಅಶ್ರಫ್, ತಲ್ಲತ್ ಬಂಧಿತರು. ಆ ಮೂಲಕ ಚೂರಿ ಇರಿತ ಪ್ರಕರಣದಲ್ಲಿ ಇದುವರೆಗೆ 13 ಆರೋಪಿಗಳನ್ನು ಬಂಧಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಿಯಾರ್ ಪ್ರದೇಶದಲ್ಲಿ ಜೂನ್ 9ರಂದು ಘೋಷಣೆ ವಿಚಾರವಾಗಿ ಇಬ್ಬರಿಗೆ ಚೂರಿ ಇರಿತವಾಗಿತ್ತು.

ಮೊನ್ನೆ ದೇಶಾದ್ಯಂತ ಬಿಜೆಪಿ ಕಾರ್ಯಕರ್ತರ ಸಂಭ್ರಮ ಜೋರಾಗಿತ್ತು. ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆ ಸಂಭ್ರಮಾಚರಣೆ ನಡೆದಿತ್ತು. ಅದೇ ರೀತಿ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಿಯಾರ್‌ನಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವದ ಮೆರವಣಿಗೆ ನಡೆಸಿದ್ದರು. ಆದ್ರೆ ಇದೇ ಮೆರವಣಿಗೆಯಲ್ಲಿ ಭಾಗವಹಿಸಿದ ಇಬ್ಬರು ಬಿಜೆಪಿ ಕಾರ್ಯಕರ್ತರು ಚೂರಿ ಇರಿತಕ್ಕೆ ಒಳಗಾಗಿದ್ರು.

ಇದನ್ನೂ ಓದಿ: ಮಂಗಳೂರಿನಲ್ಲಿ ಬಿಜೆಪಿ ವಿಜಯೋತ್ಸವ ಮೆರವಣಿಗೆ ಬಳಿಕ ಇಬ್ಬರಿಗೆ ಚೂರಿ ಇರಿತ ಪ್ರಕರಣ; ಆರು ಮಂದಿ ಬಂಧನ, 20 ಜನ ವಶಕ್ಕೆ

ಅಷ್ಟಕ್ಕೂ ಆಗಿದ್ದೇನೆಂದ್ರೆ, ಬಿಜೆಪಿ ಮೆರವಣಿಗೆ ಬೋಳಿಯಾರ್ ಮಸೀದಿ ಮುಂದೆ ಸಾಗಿ ಬರುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತಾ ಸಾಗಿದ್ದರು. ಇದೇ ಸಂದರ್ಭ ಮಸೀದಿ ಮುಂದೆ ಇದ್ದ ಯುವಕರ ಗುಂಪೊಂದು ಘೋಷಣೆ ಕೂಗುವುದಕ್ಕೆ ವಿರೋಧ ವ್ಯಕ್ತಪಡಿಸಿತ್ತು. ಬಳಿಕ ಮೆರವಣಿಗೆ ಮುಂದೆ ಸಾಗಿತ್ತು. ವಿಜಯೋತ್ಸವ ಮುಗಿಸಿ ಮಸೀದಿ ಬಳಿ ಹೋಂಡಾ ಆ್ಯಕ್ಟೀವಾದಲ್ಲಿ ಬಂದ ಮೂವರು ಬಿಜೆಪಿ ಕಾರ್ಯಕರ್ತರಾದ ಹರೀಶ್, ನಂದಕುಮಾರ್, ಕೃಷ್ಣಕುಮಾರ್ ಬೋಲೋ ಭಾರತ್ ಮಾತಾ ಕೀ ಜೈ ಎಂಬ ಘೋಷಣೆ ಕೂಗಿದ್ದರು.

ಇದನ್ನೂ ಓದಿ: ಮಂಗಳೂರಿನಲ್ಲಿ ಬಿಜೆಪಿ ವಿಜಯೋತ್ಸವ ಮೆರವಣಿಗೆ ಬಳಿಕ ಚೂರಿ ಇರಿತ ಕೇಸ್​: ಐವರ ಬಂಧನ

ಈ ಸಂದರ್ಭ ಮಸೀದಿ ಮುಂದೆ ಮೊದಲೇ ಗುಂಪು ಸೇರಿದ್ದ ಸುಮಾರು 25ಕ್ಕೂ ಹೆಚ್ಚು ಯುವಕರ ಗುಂಪು ಈ ಮೂವರನ್ನು ಅಟ್ಟಾಡಿಸಿಕೊಂಡು ಹೋಗಿದ್ದರು. ಬೋಳಿಯಾರ್‌ನ ಬಾರ್ ಮುಂಭಾಗ ತಲುಪುತ್ತಿದ್ದಂತೆ ಯುವಕರ ಗುಂಪು ಹಾಗೂ ಈ ಮೂವರ ನಡುವೆ ವಾಗ್ವಾದ ನಡೆದು ಹರೀಶ್ ಹಾಗೂ ನಂದಕುಮಾರ್‌ಗೆ ಚೂರಿಯಿಂದ ಇರಿಯಲಾಗಿತ್ತು. ಕೃಷ್ಣಕುಮಾರ್‌ಗೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಲಾಗಿದ್ದು ಘಟನೆಯ ಸಂಪೂರ್ಣ ದೃಶ್ಯ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿತ್ತು.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಾಜಾ ಸುದ್ದಿ
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ
‘ಸೂಪರ್​ ಆಗಿದೆ’: ಬೆಂಗಳೂರಲ್ಲಿ ‘ಕಲ್ಕಿ 2898 ಎಡಿ’ ನೋಡಿ ಕನ್ನಡಿಗರು ಖುಷ್
‘ಸೂಪರ್​ ಆಗಿದೆ’: ಬೆಂಗಳೂರಲ್ಲಿ ‘ಕಲ್ಕಿ 2898 ಎಡಿ’ ನೋಡಿ ಕನ್ನಡಿಗರು ಖುಷ್
ಮಂಗಳೂರು: ಜಲದಿಗ್ಭಂದನಕ್ಕೊಳಗಾದ ಮನೆ, ಮನೆಯಲ್ಲಿ ಒಂಟಿ ಮಹಿಳೆ ವಾಸ!
ಮಂಗಳೂರು: ಜಲದಿಗ್ಭಂದನಕ್ಕೊಳಗಾದ ಮನೆ, ಮನೆಯಲ್ಲಿ ಒಂಟಿ ಮಹಿಳೆ ವಾಸ!
ಸಿದ್ದರಾಮಯ್ಯ ಕರೆದಿರುವ ಸಭೆಗೆ ಹೋಗ್ತೀರಾ ಅಂದಾಗ ಕುಮಾರಸ್ವಾಮಿ ಉಡಾಫೆ ಉತ್ತರ
ಸಿದ್ದರಾಮಯ್ಯ ಕರೆದಿರುವ ಸಭೆಗೆ ಹೋಗ್ತೀರಾ ಅಂದಾಗ ಕುಮಾರಸ್ವಾಮಿ ಉಡಾಫೆ ಉತ್ತರ
ಕೇಂಪೇಗೌಡ 515ನೇ ಜಯಂತಿ: ನಾಡಪ್ರಭುಗೆ ಪುಷ್ಪ ನಮನ ಸಲ್ಲಿಸಿದ ಸಿದ್ದರಾಮಯ್ಯ
ಕೇಂಪೇಗೌಡ 515ನೇ ಜಯಂತಿ: ನಾಡಪ್ರಭುಗೆ ಪುಷ್ಪ ನಮನ ಸಲ್ಲಿಸಿದ ಸಿದ್ದರಾಮಯ್ಯ
ದೆಹಲಿಗೆ ತೆರಳಿ ಪ್ರಧಾನಿ ಮೋದಿ, ಹಲವಾರು ಸಚಿವರನ್ನು ಭೇಟಿಯಾಗಲಿರುವ ಸಿಎಂ
ದೆಹಲಿಗೆ ತೆರಳಿ ಪ್ರಧಾನಿ ಮೋದಿ, ಹಲವಾರು ಸಚಿವರನ್ನು ಭೇಟಿಯಾಗಲಿರುವ ಸಿಎಂ
ಉಕ್ಕಿ ಹರಿಯುತ್ತಿದೆ ನೇತ್ರಾವತಿ, ನದಿಪಾತ್ರದ ಜನ ಎಚ್ಚರವಹಿಸುವಂತೆ ಸೂಚನೆ
ಉಕ್ಕಿ ಹರಿಯುತ್ತಿದೆ ನೇತ್ರಾವತಿ, ನದಿಪಾತ್ರದ ಜನ ಎಚ್ಚರವಹಿಸುವಂತೆ ಸೂಚನೆ
ಮಳೆಯ ಅಬ್ಬರಕ್ಕೆ ಇತಿಹಾಸ ಪ್ರಸಿದ್ಧ ಮಧೂರು ದೇಗುಲ ಜಲಾವೃತ; ವಿಡಿಯೋ ನೋಡಿ
ಮಳೆಯ ಅಬ್ಬರಕ್ಕೆ ಇತಿಹಾಸ ಪ್ರಸಿದ್ಧ ಮಧೂರು ದೇಗುಲ ಜಲಾವೃತ; ವಿಡಿಯೋ ನೋಡಿ