ರಾಮನಗರ ಜಿಲ್ಲೆಯಲ್ಲಿ ಆಕಾಲಿಕ ಮಳೆ: ಸಂಕಷ್ಟಕ್ಕೆ ಗುರಿಯಾದ ಮಾವು ಬೆಳೆಗಾರರು

ಜನವರಿ-ಫೆಬ್ರುವರಿಯಲ್ಲಿ ಬೀಳುವ ಇಬ್ಬನಿಯ ತೇವಾಂಶವೇ ಮಾವಿನ ಮರಗಳಿಗೆ ಸಾಕಿತ್ತು. ಅಂದ ಹಾಗೆ ರಾಮನಗರ ಜಿಲ್ಲೆ ರಾಜ್ಯದಲ್ಲಿಯೇ ಮಾವು ಬೆಳೆಯುವಲ್ಲಿ ಎರಡನೇ ಸ್ಥಾನದಲ್ಲಿದ್ದು, ಸುಮಾರು 32 ಸಾವಿರ ಹೆಕ್ಟರ್ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತದೆ. ರಾಜ್ಯದ ಮಾರುಕಟ್ಟೆಗೆ ಮೊದಲು ರಾಮನಗರ ಜಿಲ್ಲೆಯಿಂದಲೇ ಮಾವು ಬರುವುದಾಗಿದ್ದು, ವಾರ್ಷಿಕ 25 ಲಕ್ಷ ಟನ್ ನಷ್ಟು ಮಾವನ್ನ ಜಿಲ್ಲೆಯಲ್ಲಿ ಬೆಳೆಯಲಾಗುತ್ತದೆ. ಸುಮಾರು 400 ಕೋಟಿ ವಹಿವಾಟು ಮಾವು ಜಿಲ್ಲೆಯಲ್ಲಿ ನಡೆಯುತ್ತದೆ.

ರಾಮನಗರ ಜಿಲ್ಲೆಯಲ್ಲಿ ಆಕಾಲಿಕ ಮಳೆ: ಸಂಕಷ್ಟಕ್ಕೆ ಗುರಿಯಾದ ಮಾವು ಬೆಳೆಗಾರರು
ಮಾವಿನ ಮರ
Follow us
preethi shettigar
| Updated By: ಆಯೇಷಾ ಬಾನು

Updated on: Jan 13, 2021 | 6:49 AM

ರಾಮನಗರ: ಜಿಲ್ಲೆಯಾದ್ಯಂತ ಕಳೆದ ಹಲವು ದಿನಗಳಿಂದ ಮಳೆಯಾಗಿದ್ದು, ಅಕಾಲಿಕ ಮಳೆ ರಾಮನಗರ ಜಿಲ್ಲೆಯ ಮಾವು ಬೆಳೆಗಾರರ ನೆಮ್ಮದಿ ಕಸಿದಿದೆ. ಈ ಬಾರಿ ಮುಂಗಾರು ಫಲಪ್ರದವಾಗಿದ್ದು, ಮಾವಿನ ಮರಗಳು ಮೈ ತುಂಬಾ ಹೂವು ಹೊದ್ದು ನಿಂತಿದ್ದ ಕೆಲವು ಕಡೆ ಪೀಚು ಗಾತ್ರದ ಮಾವಿನಕಾಯಿಗಳು ಅರಳಿವೆ. ಹೀಗಾಗಿ ಈ ಬಾರಿ ಉತ್ತಮ ಫಸಲು ಸಿಗುವ ನಿರೀಕ್ಷೆ ಜಿಲ್ಲೆಯ ಮಾವು ಬೆಳೆಗಾರರದ್ದಾಗಿತ್ತು. ಆದರೆ ಜಿಲ್ಲೆಯಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಹೂವಿನ ಜೊತೆಗೆ ಪೀಚು ಕಾಯಿಯೂ ಉದುರುವ ಆತಂಕ ರೈತರಿಗೆ ಎದುರಾಗಿದೆ.

ಈ ಬಾರಿ ನವೆಂಬರ್‌-ಡಿಸೆಂಬರ್‌ವರೆಗೆ ಸುರಿದ ಮಳೆಯಿಂದಾಗಿ ಸಾಕಷ್ಟು ಕಡೆ ಕಾಯಿ ಸಹ ಕಚ್ಚಿದ್ದವು. ಆದರೆ ಈಗ ಬೀಳುತ್ತಿರುವ ಮಳೆಯಿಂದ ಕಾಯಿ ಉದುರುವ ಸಾಧ್ಯತೆ ಹೆಚ್ಚಾಗಿದ್ದು, ಮಳೆ ಹೀಗೆಯೇ ಮುಂದುವರಿದರೇ ಶೇ 80ರಷ್ಟು ಬೆಳೆ ಹಾಳಾಗುತ್ತದೆ. ಅದರಲ್ಲೂ ಬದಾಮಿ ತಳಿಯ ಮಾವು ಉಳಿಯುವುದಿಲ್ಲ ಎಂಬುದು ರೈತರ ಆತಂಕ. ಇನ್ನು ಈಗ ಸುರಿಯುತ್ತಿರುವ ಮಳೆ ತೀರ ಅಕಾಲಿಕವಾಗಿದ್ದು, ಹಿಂದೆ ಎಂದೂ ಜನವರಿಯಲ್ಲಿ ಈ ರೀತಿ ಅಕಾಲಿಕ ಮಳೆ ಆಗಿರಲಿಲ್ಲ.

ಜನವರಿ-ಫೆಬ್ರುವರಿಯಲ್ಲಿ ಬೀಳುವ ಇಬ್ಬನಿಯ ತೇವಾಂಶವೇ ಮಾವಿನ ಮರಗಳಿಗೆ ಸಾಕಿತ್ತು. ಅಂದ ಹಾಗೆ ರಾಮನಗರ ಜಿಲ್ಲೆ ರಾಜ್ಯದಲ್ಲಿಯೇ ಮಾವು ಬೆಳೆಯುವಲ್ಲಿ ಎರಡನೇ ಸ್ಥಾನದಲ್ಲಿದ್ದು, ಸುಮಾರು 32 ಸಾವಿರ ಹೆಕ್ಟರ್ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತದೆ. ರಾಜ್ಯದ ಮಾರುಕಟ್ಟೆಗೆ ಮೊದಲು ರಾಮನಗರ ಜಿಲ್ಲೆಯಿಂದಲೇ ಮಾವು ಬರುವುದಾಗಿದ್ದು, ವಾರ್ಷಿಕ 25 ಲಕ್ಷ ಟನ್ ನಷ್ಟು ಮಾವನ್ನ ಜಿಲ್ಲೆಯಲ್ಲಿ ಬೆಳೆಯಲಾಗುತ್ತದೆ. ಸುಮಾರು 400 ಕೋಟಿ ವಹಿವಾಟು ಮಾವು ಜಿಲ್ಲೆಯಲ್ಲಿ ನಡೆಯುತ್ತದೆ.

ಮಾವಿನ ಮರ

ಆದರೆ ಕಳೆದ ಬಾರಿ ಹೆಚ್ಚಾದ ಮಳೆ ಹಾಗೂ ಮಾರಾಟ ಸಮಯದಲ್ಲಿ ಕೊರೊನಾ ಮಹಾಮಾರಿಯಿಂದಾಗಿ ಮಾವು ಕೇಳುವವರೇ ಇಲ್ಲದಂತೆ ಆಗಿತ್ತು. ಇನ್ನು ಈ ಬಾರಿ ಉತ್ತಮ ಬೆಳೆ ಬಂದು, ಮಾವು ನಮ್ಮ ಕೈ ಹಿಡಿಯಲಿದೆ ಎಂದುಕೊಂಡಿದ್ದ ರೈತರಿಗೆ ಪ್ರಾರಂಭದಲ್ಲೇ ಬೂದು ರೋಗ ಸಂಕಷ್ಟ ತಂದು ಒಡ್ಡಿತ್ತು. ಅದರ ಬೆನ್ನಲ್ಲೇ ಈಗ ಅಕಾಲಿಕ ಮಳೆ ಮಾವು ಬೆಳೆಗಾರರನ್ನ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸಿದೆ.

ಔಷದೋಪಚಾರ ಏನು? ಅಕಾಲಿಕ ಮಳೆಯಿಂದಾಗಿ ಮಾವಿನ ಹೂವು ತೆನೆ ಕಪ್ಪಾಗುವುದು ಹಾಗೂ ಬೂದಿ ರೋಗ ಬರುವ ಸಾಧ್ಯತೆ ಇದೆ. ಅದರ ನಿಯಂತ್ರಣಕ್ಕೆ ಬೆಳೆಗಾರರು ಹೆಕ್ಸಾಕೊನಾಜೋಲ್‌ 2 ಮಿ.ಲೀ. ಅಥವಾ ಥಯೋಫಿನೆಟ್‌ ಮಿಡೈಲ್‌ 1 ಗ್ರಾಂ ಅಥವಾ ಕಾರ್ಬನ್‌ಡಾಜಿಮ್‌ 1.5 ಗ್ರಾಂ ಅಥವಾ ಟ್ರೈಸಕ್ಲೊಜೋಲ್‌ 0.25 ಗ್ರಾಂ ಈ 4ರಲ್ಲಿ ಒಂದು ರಾಸಾಯನಿಕ ಔಷಧವನ್ನು ಪ್ರತಿ 1 ಲೀಟರ್‌ ನೀರಿನಲ್ಲಿ ಬೆರೆಸಿ ಬೆಳೆಗೆ ಸಿಂಪಡಿಸಬೇಕು ಎಂದು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ರಾಮನಗರ

ಈ ಬಾರಿ ನಾವು ಸಾಕಷ್ಟು ನಿರೀಕ್ಷೆಯಲ್ಲಿ ಇದ್ದೇವು. ಆದರೆ ಅಕಾಲಿಕ ಮಳೆ ನಮ್ಮ ಬದುಕನ್ನ ಅತಂತ್ರ ಮಾಡುತ್ತಿದೆ. ಇದೇ ರೀತಿ ಮಳೆ ಮುಂದುವರೆದರೇ ಸಂಪೂರ್ಣ ಮಾವು ಬೆಳೆ ಹಾನಿಯಾಗಲಿದೆ ಎಂದು ಮಾವು ಬೆಳೆಗಾರರ ಸಂಘದ ಮಾಜಿ ಅಧ್ಯಕ್ಷ ಸಿದ್ಧರಾಜು ಹೇಳಿದ್ದಾರೆ.

ಮಾವು ಹೂ ಬಿಟ್ಟಿರುವ ಕಾರಣ ಈ ಅವಧಿಯಲ್ಲಿ ಮಳೆಯ ಅವಶ್ಯಕತೆ ಇರಲಿಲ್ಲ. ತೇವಾಂಶ ಹೆಚ್ಚಾದಷ್ಟು ಹೂವು ಉದುರುವ ಜೊತೆಗೆ ಅದರಲ್ಲಿ ಬೂದಿ ರೋಗ ಹರಡುವ ಸಾಧ್ಯತೆ ಇದೆ. ಆಗ ರೈತರು ಅಗತ್ಯ ಔಷದೋಪಚಾರ ಮಾಡಬೇಕಾಗುತ್ತದೆ ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಮುನೇಗೌಡ ಅಳಲು ತೋಡಿಕೊಂಡಿದ್ದಾರೆ.

ರಾಮನಗರ: ಮಾವು ಸಂಸ್ಕರಣಾ ಘಟಕ ಸ್ಥಾಪನೆಗೆ ಸರ್ಕಾರದ ನಿರ್ಧಾರ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್