ದೇಶದ ವಿವಿಧೆಡೆ ಕೊರೊನಾ ಆತಂಕ: ಮಣಿಪಾಲದಲ್ಲಿ 72 ಮಂದಿಗೆ ಸೋಂಕು ದೃಢ, ತಮಿಳುನಾಡಿನಲ್ಲಿ ಶಾಲೆಗಳಿಗೆ ರಜೆ ಘೋಷಣೆ
ಕೊರೊನಾ ಪ್ರಕರಣಗಳ ಪ್ರಮಾಣ ಮತ್ತೆ ಏರಿಕೆಯಾಗುತ್ತಿದೆ. ಮಹಾರಾಷ್ಟ್ರ, ಕೇರಳ, ಪಂಜಾಬ್, ಚಂಡೀಗಢ, ರಾಜಸ್ಥಾನ್, ಗುಜರಾತ್ ಸಹಿತ ಕರ್ನಾಟಕದಲ್ಲೂ ಕೊವಿಡ್19 ಆತಂಕ ಹೆಚ್ಚಾಗಿದೆ. ಈ ನಡುವೆ, ನೆರೆಯ ರಾಜ್ಯವಾದ ತಮಿಳುನಾಡಿನಲ್ಲಿ ಎಲ್ಲಾ ಕಾಲೇಜುಗಳಿಗೆ ಇಂದು (ಮಾರ್ಚ್ 22) ರಜೆ ಘೋಷಣೆ ಮಾಡಲಾಗಿದೆ.
ಕರ್ನಾಟಕ ಸೇರಿದಂತೆ ದೇಶದ ವಿವಿಧೆಡೆ ಕೊರೊನಾ ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚಾಗುತ್ತಿದೆ. ಉಡುಪಿ ಜಿಲ್ಲೆಯಲ್ಲಿ ಇಂದು 113 ಜನರಿಗೆ ಕೊರೊನಾ ದೃಢವಾಗಿದೆ. ಮಣಿಪಾಲದ MIT ಕ್ಯಾಂಪಸ್ ಒಂದರಲ್ಲೇ 72 ಜನರಿಗೆ ಕೊರೊನಾ ಪತ್ತೆಯಾಗಿದೆ. ಈ ಮೂಲಕ, ಎಂಐಟಿ ಕ್ಯಾಂಪಸ್ನಲ್ಲಿ ಸೋಂಕಿತರ ಸಂಖ್ಯೆ 372ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಈವರೆಗೆ ಕೊರೊನಾದಿಂದ 190 ಜನರು ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 439ಕ್ಕೆ ಏರಿಕೆಯಾಗಿದ್ದು, ಈವರೆಗೆ ಒಟ್ಟು 24,328 ಕೋವಿಡ್ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಉಡುಪಿ DHO ಡಾ. ಸುಧೀರ್ ಚಂದ್ರ ಸೂಡ ಮಾಹಿತಿ ನೀಡಿದ್ದಾರೆ.
ಕೊರೊನಾ ಪ್ರಕರಣಗಳ ಪ್ರಮಾಣ ಮತ್ತೆ ಏರಿಕೆಯಾಗುತ್ತಿದೆ. ಮಹಾರಾಷ್ಟ್ರ, ಕೇರಳ, ಪಂಜಾಬ್, ಚಂಡೀಗಡ, ರಾಜಸ್ಥಾನ, ಗುಜರಾತ್ ಸಹಿತ ಕರ್ನಾಟಕದಲ್ಲೂ ಕೊವಿಡ್-19 ಆತಂಕ ಹೆಚ್ಚಾಗಿದೆ. ಈ ನಡುವೆ, ನೆರೆಯ ರಾಜ್ಯವಾದ ತಮಿಳುನಾಡಿನಲ್ಲಿ ಎಲ್ಲಾ ಕಾಲೇಜುಗಳಿಗೆ ಇಂದು (ಮಾರ್ಚ್ 22) ರಜೆ ಘೋಷಣೆ ಮಾಡಲಾಗಿದೆ. ಆನ್‌ಲೈನ್ ತರಗತಿಗಳನ್ನು ಮಾತ್ರ ನಡೆಸುವಂತೆ ಸೂಚನೆ ನೀಡಲಾಗಿದೆ. ನಿನ್ನೆಯಷ್ಟೇ 9, 10, 11ನೇ ತರಗತಿ ಶಾಲೆಗಳಿಗೆ ರಜೆ ನೀಡಲಾಗಿತ್ತು.
ಕರ್ನಾಟಕ ರಾಜ್ಯದಲ್ಲಿ ಇಂದು ಹೊಸದಾಗಿ 1,445 ಜನರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 9,71,647ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೆ ಕೊರೊನಾಗೆ 12,444 ಜನರು ಬಲಿಯಾಗಿದ್ದು, ಇಂದು ಸೋಂಕಿನಿಂದ 10 ಜನರ ಸಾವನ್ನಪ್ಪಿದ್ದಾರೆ.
ಬೆಂಗಳೂರಲ್ಲಿ ಇಂದು ಒಂದೇ ದಿನ 886 ಜನರಿಗೆ ಸೋಂಕು ಪತ್ತೆಯಾಗಿದೆ. ತನ್ಮೂಲಕ ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 4,18,558ಕ್ಕೆ ಏರಿಕೆಯಾಗಿದೆ. ಹಾಗೂ ನಗರದಲ್ಲಿ ಸೋಂಕಿನಿಂದ ಇಂದು ನಾಲ್ವರು ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ ಕೊವಿಡ್ನಿಂದ ತೀರಿಕೊಂಡವರ ಸಂಖ್ಯೆ 4,553 ಆಗಿದೆ.
ರಾಜ್ಯದ ಒಟ್ಟು ಸೋಂಕಿತರ ಪೈಕಿ 9,44,917 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಪ್ರಸ್ತುತ 14,267 ಮಂದಿ ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಕುರಿತು ಮಾಹಿತಿ ನೀಡಿದೆ.
ಕೊರೊನಾ ಲಸಿಕೆ ಪಡೆದ ಎಐಎಂಐಎಂ ಪಕ್ಷದ ವರಿಷ್ಠ, ಸಂಸದ ಅಸಾದುದ್ದೀನ್ ಒವೈಸಿ
Published On - 10:43 pm, Mon, 22 March 21