AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pahalgam Terror Attack: ಉಗ್ರರ ಗುಂಡಿಗೆ ಬಲಿಯಾದ ಕನ್ನಡಿಗರ ಮೃತದೇಹ ಬೆಂಗಳೂರಿಗೆ ಬರುವುದು ಯಾವಾಗ?

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ಉಗ್ರರ ಗುಂಡಿನ ದಾಳಿಗೆ 27ಕ್ಕೂ ಹೆಚ್ಚು ಜನರು ಬಲಿಯಾಗಿದ್ದು. ಹಲವರು ಗಾಯಗೊಂಡಿದ್ದಾರೆ. ಈ ಘಟನೆಗ ಇಡೀ ದೇಶವೇ ಮರಗುತ್ತಿದೆ. ಉಗ್ರರ ಹೇಯ ಕೃತ್ಯದಲ್ಲಿ ಇಬ್ಬರು ಕನ್ನಡಿಗರು ಮೃತಪಟ್ಟಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು,. ಮೃತರ ಕುಟುಂಬಕ್ಕೆ ಕರ್ನಾಟಕ ಸರ್ಕಾರ ಪರಿಹಾರ ಘೋಷಿಸಿದೆ. ಇನ್ನು ಮೃತದೇಹಗಳು ಕಾಶ್ಮೀರದಿಂದ ಬೆಂಗಳೂರಿಗೆ ಯಾವಾಗ ಬರಲಿದೆ? ಎನ್ನುವ ಮಾಹಿತಿ ಇಲ್ಲಿದೆ.

Pahalgam Terror Attack: ಉಗ್ರರ ಗುಂಡಿಗೆ ಬಲಿಯಾದ ಕನ್ನಡಿಗರ ಮೃತದೇಹ ಬೆಂಗಳೂರಿಗೆ ಬರುವುದು ಯಾವಾಗ?
Pahalgam Terror Attack
Follow us
ರಮೇಶ್ ಬಿ. ಜವಳಗೇರಾ
|

Updated on:Apr 23, 2025 | 7:35 PM

ಬೆಂಗಳೂರು, (ಏಪ್ರಿಲ್ 23): ಜಮ್ಮು ಮತ್ತು ಕಾಶ್ಮೀರದ  (Jammu And Kashmir) ಪಹಲ್ಗಾಮ್​ನಲ್ಲಿ ಉಗ್ರರ ಗುಂಡಿನ ದಾಳಿ (Pahalgam Terror Attack) ಇಬ್ಬರು ಕನ್ನಡಿಗರು (Kannadigas) ಬಲಿಯಾಗಿದ್ದಾರೆ. ಪ್ರವಾಸಕ್ಕೆಂದು (Trip) ಹೋಗಿದ್ದಾಗ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಮೃತಪಟ್ಟಿದ್ದಾರೆ. ಶಿವಮೊಗ್ಗದ (Shivamogga) ಮಂಜುನಾಥ್ ರಾವ್ ಮತ್ತು ಬೆಂಗಳೂರು(Bengaluru) ಮೂಲದ ಭರತ್ ಭೂಷಣ್ ಎನ್ನುವರು ಉಗ್ರರ ಗುಂಡಿಗೆ ಬಲಿಯಾಗಿದ್ದು, ಇವರ ಮೃತದೇಹವನ್ನು ಕಾಶ್ಮೀರದಿಂದ ಅವರ ಊರುಗಳಿಗೆ ತರಲು ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ಇನ್ನು ಕರ್ನಾಟಕ ಸರ್ಕಾರ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.

ಪ್ರವಾಸಕ್ಕೆಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ತೆರಳಿದ್ದಾಗ ಟಿಆರ್​ಎಫ್ ಉಗ್ರರು ನಿನ್ನೆ(ಏಪ್ರಿಲ್ 22) ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ 27 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಇದರಲ್ಲಿ ಇಬ್ಬರು ಕರ್ನಾಟಕದವರು ಮೃತಪಟ್ಟಿದ್ದಾರೆ. ಶಿವಮೊಗ್ಗದ ಉದ್ಯಮಿ ಮಂಜುನಾಥ್​ ಹಾಗೂ ಬೆಂಗಳೂರಿನ ಭರತ್ ಭೂಷಣ್ ಉಗ್ರರ ಗುಂಡಿನ ದಾಳಿಗೆ ಬಲಿಯಾಗಿದ್ದು, ಇವರ ಮೃತದೇಹಗಳನ್ನು ಹುಟ್ಟೂರಿಗೆ ತರಲು ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಎಲ್ಲಾ ವ್ಯವಸ್ಥೆ ಮಾಡಿದೆ. ಅದರಲ್ಲೂ ಸಚಿವ ಸಂತೋಷ್ ಲಾಡ್ ಅವರು ನಿನ್ನೆಯೇ ಸ್ಥಳಕ್ಕೆ ತೆರಳಿ ಕನ್ನಡಿಗರ ನೆರವಿಗೆ ನಿಂತಿದ್ದಾರೆ.

ಇದನ್ನೂ ಓದಿ: ಪಹಲ್ಗಾಮ್ ಉಗ್ರರ ದಾಳಿ: ಮೃತ ಕನ್ನಡಿಗರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸರ್ಕಾರ

ಮಂಜುನಾಥ್ ರಾವ್ ಮತ್ತು ಭರತ್ ಭೂಷಣ್ ಮೃತದೇಹಗಳನ್ನು ಹೊತ್ತ ಇಂಡಿಯೋ ವಿಮಾನ ಕೆಲವೇ ಕ್ಷಣಗಳಲ್ಲಿ ಶ್ರೀನಗರದಿಂದ ದೆಹಲಿಯತ್ತ ಹೊರಡಲಿದೆ. ಬಳಿಕ ದೆಹಲಿಯಿಂದ ಮತ್ತೊಂದು ವಿಮಾನ ಮೂಲಕ ಮೃತದೇಹಗಳು ಬೆಂಗಳೂರಿಗೆ ಬರಲಿವೆ. ಗುರುವಾರ ಬೆಳಗಿನ ಜಾವ ಮೂರು ಗಂಟೆಗೆ ಮೃತದೇಹಗಳು ಬೆಂಗಳೂರು ತಲುಪುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಇದನ್ನೂ ಓದಿ
Image
ಪಹಲ್ಗಾಮ್ ದಾಳಿಗೆ ಪ್ರತೀಕಾರ; ಪಾಕ್ ವಿರುದ್ಧ ಕ್ರಮಕ್ಕೆ ಭಾರತ ಚಿಂತನೆ
Image
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
Image
ಪಹಲ್ಗಾಮ್​ನಲ್ಲಿ ಉಗ್ರರ ಗುಂಡಿನ ದಾಳಿ: 13 ಕನ್ನಡಿಗರ ಜೀವ ಉಳಿಸಿದ ಗುಡ್ಡ!
Image
ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಮೂವರು ಉಗ್ರರ ರೇಖಾಚಿತ್ರ ಬಿಡುಗಡೆ

ಇನ್ನು ಮಂಜುನಾಥ್​ ಮೃತದೇಹವನ್ನು ಸ್ವೀಕರಿಸಲು ಕುಟುಂಬಸ್ಥರು ಶಿವಮೊಗ್ಗದಿಂದ ಬೆಂಗಳೂರಿನತ್ತ ಹೊರಟ್ಟಿದ್ದಾರೆ. ಮೃತ ಮಂಜುನಾಥ್ ಪತ್ನಿ ಪಲ್ಲವಿ ಸಹೋದರ ಪ್ರದೀಪ್ ಹಾಗೂ ಸಹೋದರಿ ವಿನುತಾ ಅವರು ಕಾರಿನ ಮೂಲಕ ಶಿವಮೊಗ್ಗದಿಂದ ಬೆಂಗಳೂರಿನತ್ತ ತೆರಳುತ್ತಿದ್ದಾರೆ.

ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ

ಪ್ರವಾಸಕ್ಕೆಂದು ಹೋಗಿ ಕಾಶ್ಮೀರದಲ್ಲಿ ಸಿಲುಕಿಕೊಂಡಿರುವ ಕರ್ನಾಟಕದ ಜನರಿಗೆ ತವರಿಗೆ ವಾಪಸ್ ಆಗಲು ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ. ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಕಚೇರಿ, ಸ್ಥಳೀಯ ಸಚಿವರ ಜೊತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತುಕತೆ ನಡೆಸಿ ಸೂಕ್ತ ವ್ಯವಸ್ಥೆ ಮಾಡಿದ್ದಾರೆ.

ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಕಚೇರಿ, ಸ್ಥಳೀಯ ಸಚಿವರ ಜೊತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತುಕತೆ ನಡೆಸಿದ್ದು.ಪ್ರಧಾನಿಗಳ ಕಚೇರಿ, ಗೃಹ ಸಚಿವರ ಕಚೇರಿಯ ಜೊತೆ ನಿರಂತರ ಸಂಪರ್ಕದಲ್ಲಿದ್ದು, ಕರ್ನಾಟಕದವರನ್ನು ಸುರಕ್ಷಿತರಾಗಿ‌ ಹಿಂದಿರುಗಿಸಲು ವ್ಯವಸ್ಥೆ ನಡೆಯುತ್ತಿದೆ. ಗ್ರಾಹಕ ವ್ಯವಹಾರಗಳ ಸಚಿವರಾಗಿ ವೈಮಾನಿಕ ಟಿಕೆಟ್ ದರಕ್ಕೆ ಬ್ರೇಕ್ ಹಾಕಲಾಗಿದೆ. ಈ ಪರಿಸ್ಥಿತಿಯಲ್ಲಿ ಟಿಕೆಟ್ ದರ ಹೆಚ್ಚಳ‌ ಮಾಡದಂತೆ ಡಿಜಿಸಿಎ ಹಾಗೂ ವಿಮಾನಯಾನ‌ ಸಚಿವಾಲಯಕ್ಕೆ‌ ಸೂಚನೆ ನೀಡಲಾಗಿದೆ ಎಂದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:34 pm, Wed, 23 April 25

ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ