Sign In

By signing in or creating an account, you agree with Associated Broadcasting Company's Terms & Conditions and Privacy Policy.

Mann Ki Baat: ಕರ್ನಾಟಕದ ಹುಲಿ ವೇಷ ಕುಣಿತ ಹಾಡಿ ಹೊಗಳಿದ ಪ್ರಧಾನಿ ಮೋದಿ

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮ್ಮ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಕರ್ನಾಟಕದ ಹುಲಿ ವೇಷ ಕುಣಿತವನ್ನು ಹಾಡಿ ಹೊಗಳಿದ್ದಾರೆ. ಚಾಮರಾಜನಗರದ ಬಿಆರ್​ಟಿ ಅರಣ್ಯದಲ್ಲಿ ಹುಲಿ ಸಂರಕ್ಷಣೆಯಲ್ಲಿ ಸ್ಥಳೀಯ ಸೋಲಿಗರ ಪಾತ್ರವನ್ನು ಹಾಡಿ ಹೊಗಳಿದರು. ಜೊತೆಗೆ ಆರೋಗ್ಯದ ಬಗ್ಗೆಯೂ ಕೆಲವು ಟಿಪ್ಸ್​ ನೀಡಿದ್ದಾರೆ.

Follow us
ಕಿರಣ್​ ಹನಿಯಡ್ಕ
| Updated By: ವಿವೇಕ ಬಿರಾದಾರ

Updated on:Feb 23, 2025 | 1:02 PM

ಬೆಂಗಳೂರು, ಫೆಬ್ರವರಿ 23: ಪ್ರಧಾನಮಂತ್ರಿ ನರೇಂದ್ರ ಮೋದಿಯವರ (Narendra Modi) 119ನೇ ಮನ್​ ಕಿ ಬಾತ್​ (Mann Ki Baat) ಸಂಚಿಕೆ ರವಿವಾರ (ಫೆ.23) ಪ್ರಸಾರವಾಯಿತು. ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿಯವರು ಹಲವು ವಿಚಾರಗಳನ್ನು ಹಂಚಿಕೊಂಡರು. ಕರ್ನಾಟಕದ ಹಲವು ವೈಶಿಷ್ಟ್ಯಗಳ ಬಗ್ಗೆ ತಮ್ಮ ಮನ್​ ಕಿ ಬಾತ್​ ಕಾರ್ಯಕ್ರಮದಲ್ಲಿ ಮಾತನಾಡುವ ಪ್ರಧಾನಿ ಮೋದಿಯವರು ಈ ಬಾರಿ ರಾಜ್ಯದ ಜನಪದ ಕಲೆಯಾಗಿರುವ “ಹುಲಿ ವೇಷ ಕುಣಿತ”ವನ್ನು ಉಲ್ಲೇಖಿಸುವುದರ ಜೊತೆಗೆ ಹುಲಿ ವೇಷ ಹಾಕುವವರನ್ನೂ ಹಾಡಿ ಹೊಗಳಿದರು.

“ಕರ್ನಾಟಕ, ಕೇರಳ ಮತ್ತು ತಮಿಳುನಾಡಿನಲ್ಲಿ ಹುಲಿ ವೇಷ ತೊಟ್ಟು ಕುಣಿತದ ದೃಶ್ಯ ನೋಡುಗರ ಕಣ್ಮನ ಸೆಳೆಯುತ್ತದೆ. ಇದು ವಿಶೇಷ ಹಾಗೂ ಗಮನ ಸೆಳೆಯುವ ಕಾರ್ಯಕ್ರಮವಾಗಿದೆ. ಕರ್ನಾಟಕದ ಚಾಮರಾಜನಗರ ಜಿಲ್ಲೆಯಲ್ಲಿ ಬಿಆರ್​​​​ಟಿ ಅರಣ್ಯವಿದೆ. ಬಿಆರ್​​​​ಟಿ ಅರಣ್ಯ ಅತಿಹೆಚ್ಚು ಹುಲಿಗಳಿರುವ ಪ್ರದೇಶವಾಗಿದೆ. ಹುಲಿಗಳನ್ನು ಉಳಿಸುವುದರಲ್ಲಿ ಸ್ಥಳೀಯ ಸೋಲಿಗರ ಪಾತ್ರ ದೊಡ್ಡದಿದೆ. ಹುಲಿಗಳನ್ನು ಉಳಿಸಿರುವ ಕ್ರೆಡಿಟ್ ಸ್ಥಳೀಯ ಸೋಲಿಗರಿಗೆ ಸಲ್ಲಬೇಕು. ಈಗಲೂ ಪ್ರಾಣಿ-ಮಾನವನ ಸಂಘರ್ಷ ನಡೆಯುತ್ತಲೇ ಇರುತ್ತದೆ. ಆದರೂ ಅದನ್ನು ಕಾಪಾಡಿಕೊಂಡು ಹೋಗಲಾಗುತ್ತಿದೆ” ಎಂದು ಹೇಳಿದರು.

ಇದನ್ನೂ ಓದಿ: ಮಕ್ಕಳಲ್ಲಿ ಬೊಜ್ಜು ನಾಲ್ಕು ಪಟ್ಟು ಹೆಚ್ಚಾಗಿದೆ ಎಂದ ಮೋದಿ, ಡಾ. ದೇವಿಶೆಟ್ಟಿ ಕೊಟ್ಟ ಸಲಹೆಗಳೇನು?

ಪ್ರಧಾನಿ ಮೋದಿಯವರು ಆರೋಗ್ಯದ ಕುರಿತು ಕೆಲವು ಟಿಪ್ಸ್​ ನೀಡಿದ್ದಾರೆ. “ದೇಹದ ಬೊಜ್ಜು ಹಲವು ರೋಗಗಳಿಗೆ ಆಹ್ವಾನ ನೀಡುತ್ತದೆ. 8 ಜನರ ಪೈಕಿ ಒಬ್ಬರು ಬೊಜ್ಜು ಸಮಸ್ಯೆಯಿಂದ ಬಳಲುತ್ತಿದ್ದಾರೆ. ಮಕ್ಕಳಲ್ಲಿ ಬೊಜ್ಜಿನ ಸಮಸ್ಯೆ ಶೇಕಡಾ 4ರಷ್ಟು ಇದೆ. ಅಡುಗೆ ಎಣ್ಣೆ ಕಡಿಮೆ ಬಳಕೆಯಿಂದ ಬೊಜ್ಜು ತಗ್ಗಿಸಬಹುದು. ಆಹಾರದಲ್ಲಿ ಶೇ 10 ಕಡಿಮೆ ಅಡುಗೆ ಎಣ್ಣೆ ಬಳಸಲು ಸಲಹೆ. ದೇಶದಲ್ಲಿ ಬೊಜ್ಜಿನ ಸಮಸ್ಯೆ ತೀವ್ರ ಗತಿಯಲ್ಲಿ ಹೆಚ್ಚಳವಾಗುತ್ತಿದೆ” ನೀಡಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:01 pm, Sun, 23 February 25

ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ ಕಾರು ಜಸ್ಟ್​ ಮಿಸ್, ಬೈಕ್ ಹೋಗೇಬಿಡ್ತು
ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ ಕಾರು ಜಸ್ಟ್​ ಮಿಸ್, ಬೈಕ್ ಹೋಗೇಬಿಡ್ತು
Daily Devotional: ಪ್ರದೂಷ ಕಾಲದ ಮಹತ್ವ ಹಾಗೂ ಹಿಂದಿನ ರಹಸ್ಯ ತಿಳಿಯಿರಿ
Daily Devotional: ಪ್ರದೂಷ ಕಾಲದ ಮಹತ್ವ ಹಾಗೂ ಹಿಂದಿನ ರಹಸ್ಯ ತಿಳಿಯಿರಿ
ಬಾಂಬೆ ಹೈಕೋರ್ಟ್​ ಆವರಣದಲ್ಲಿ ವಾಮಾಚಾರ?
ಬಾಂಬೆ ಹೈಕೋರ್ಟ್​ ಆವರಣದಲ್ಲಿ ವಾಮಾಚಾರ?