AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೊರೊನಾ ಸ್ಫೋಟ; ಜಿಲ್ಲಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ

ಹಾಸನ ಜಿಲ್ಲೆಯಲ್ಲಿ ದಿನೇದಿನೆ ಕೊರೊನ ಸೋಂಕು ಸ್ಪೋಟವಾಗುತ್ತಿದೆ. ಸೋಂಕಿತರ ಸಂಖ್ಯೆ ಹೆಚ್ಚಳದ ಜೊತೆಗೆ ಸಾವಿನ ಸಂಖ್ಯೆಯಲ್ಲಿಯೂ ಕೂಡ ಗಣನೀಯ ಏರಿಕೆ ಕಂಡುಬಂದಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೊರೊನಾ ಸ್ಫೋಟ; ಜಿಲ್ಲಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ಪ್ರಧಾನಿ ನರೇಂದ್ರ ಮೋದಿ
TV9 Web
| Updated By: ganapathi bhat|

Updated on:Aug 23, 2021 | 12:27 PM

Share

ಹಾಸನ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೊರೊನ ಮಹಾಸ್ಪೋಟ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ವೀಡಿಯೋ ಸಂವಾದ ನಡೆಸಲಿದ್ದಾರೆ. ಮೇ 18 ರಂದು ಬೆಳಿಗ್ಗೆ 11 ಗಂಟೆಗೆ ರಾಜ್ಯದ 17 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಪ್ರಧಾನ ಮಂತ್ರಿ ಮಾತನಾಡಲಿದ್ದಾರೆ. ಹಾಸನ ಸೇರಿ ಅತಿ ಹೆಚ್ಚು ಸೋಂಕು ಹರಡುತ್ತಿರುವ ಜಿಲ್ಲೆಗಳ ಡಿಸಿಗಳ ಜೊತೆ ಪ್ರಧಾನಿ ಚರ್ಚೆ ನಡೆಸಲಿದ್ದಾರೆ.

ಹಾಸನ ಜಿಲ್ಲೆಯಲ್ಲಿ ದಿನೇದಿನೆ ಕೊರೊನ ಸೋಂಕು ಸ್ಪೋಟವಾಗುತ್ತಿದೆ. ಸೋಂಕಿತರ ಸಂಖ್ಯೆ ಹೆಚ್ಚಳದ ಜೊತೆಗೆ ಸಾವಿನ ಸಂಖ್ಯೆಯಲ್ಲಿಯೂ ಕೂಡ ಗಣನೀಯ ಏರಿಕೆ ಕಂಡುಬಂದಿದೆ. ಕೊರೊನ ನಿಯಂತ್ರಣ ಸಂಬಂಧ ನರೇಂದ್ರ ಮೋದಿ ಮಾರ್ಗದರ್ಶನ ಮಾಡಲಿದ್ದಾರೆ.

ಹಾಸನದ ಸುಂಡಹಳ್ಳಿ ಗ್ರಾಮದಲ್ಲಿ 17 ಜನರಿಗೆ ಕೊರೊನಾ ಪಾಸಿಟಿವ್ ಆಗಿದೆ. ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣ ತಾಲೂಕಿನ ಸುಂಡಹಳ್ಳಿಯಲ್ಲೇ ಕೊವಿಡ್-19 ಟೆಸ್ಟ್​ ಕೇಂದ್ರ ಆರಂಭಿಸಲು ಸೂಚಿಸಲಾಗಿದೆ. ಗ್ರಾಮದ ಎಲ್ಲರಿಗೂ ಆರ್​ಟಿಪಿಸಿಆರ್​ ಪರೀಕ್ಷೆಗೆ ಸೂಚನೆ ನೀಡಲಾಗಿದೆ. ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಶ್ರವಣಬೆಳಗೊಳ ಕ್ಷೇತ್ರದ ಜೆಡಿಎಸ್​ ಶಾಸಕ ಬಾಲಕೃಷ್ಣ ಹೀಗೆ ತಿಳಿಸಿದ್ದಾರೆ. ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರ ವಿವರ ರಾಜ್ಯದಲ್ಲಿಂದು ಹೊಸದಾಗಿ 31,531 ಜನರಿಗೆ ಕೊರೊನಾ ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 22,03,462ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 15,81,457 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 403 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 21,837 ಜನರ ಸಾವು ಸಂಭವಿಸಿದೆ. 6,00,147 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ಬಾದಾಮಿ ಕ್ಷೇತ್ರದಲ್ಲಿ ಕೊರೊನಾ ಪ್ರಕರಣ ಹೆಚ್ಚಳ; ನೆರವಿಗೆ ಧಾವಿಸಿದ ಸಿದ್ದರಾಮಯ್ಯ

ಭಾರತ ಮತ್ತು ಬ್ರಿಟನ್​ನ​ಲ್ಲಿ ಕಂಡುಬರುವ ಕೊರೊನಾವೈರಸ್ ತಳಿಗಳ ವಿರುದ್ಧ ಕೊವಾಕ್ಸಿನ್ ಪರಿಣಾಮಕಾರಿ: ಭಾರತ್ ಬಯೋಟೆಕ್‌

Published On - 7:37 pm, Sun, 16 May 21