ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ರೂಲ್ಸ್ ಬ್ರೇಕ್; ಹಣ್ಣು, ತರಕಾರಿ ಖರೀದಿಗೆ ಮುಗಿಬಿದ್ದ ಜನ

ಕೋಲಾರದಲ್ಲೂ ವೀಕೆಂಡ್ ಕರ್ಪ್ಯೂ ನಡುವೆ ತರಕಾರಿ ಮಾರುಕಟ್ಟೆಯಲ್ಲಿ ಜನಜಂಗುಳಿ ಕಂಡುಬಂದಿದೆ. ಸಾಮಾಜಿಕ ಅಂತರ ಮರೆತು ಖರೀದಿಯಲ್ಲಿ ತೊಡಗಿರುವ ಜನರು ಕೊರೊನಾ ಬಗ್ಗೆ ಆತಂಕ ಇಲ್ಲದಂತೆ ವರ್ತಿಸಿದ್ದಾರೆ. ಅಲ್ಲದೇ ಯಾದಗಿರಿಯ ಬಾಲಾಜಿ ದೇವಸ್ಥಾನ ಬಳಿಯ ಮಾರುಕಟ್ಟೆಯಲ್ಲೂ ಕೊವಿಡ್ ನಿಯಮ ಉಲ್ಲಂಘಿಸಿ ಸಾರ್ವಜನಿಕರು ಅಗತ್ಯ ವಸ್ತುಗಳನ್ನು ಖರೀದಿಸಿದ್ದಾರೆ.

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ರೂಲ್ಸ್ ಬ್ರೇಕ್; ಹಣ್ಣು, ತರಕಾರಿ ಖರೀದಿಗೆ ಮುಗಿಬಿದ್ದ ಜನ
ಕೊರೊನಾ ನಿಯಮ ಉಲ್ಲಂಘನೆ ಮಾಡಿದ ಜನರು
Follow us
sandhya thejappa
|

Updated on: Apr 24, 2021 | 11:17 AM

ಕಲಬುರಗಿ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಜನರು ಕೊರೊನಾ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ. ಇನ್ನು ಕೆಲವು ಜಿಲ್ಲೆಗಳಲ್ಲಿ ಉತ್ತಮ ಸ್ಪಂದನೆ ಸಿಕ್ಕಿದೆ. ಕಲಬುರಗಿಯಲ್ಲಿ ಬೆಳಿಗ್ಗೆ ಹೊತ್ತಿಗೆ ಮಾರುಕಟ್ಟೆಯಲ್ಲಿ ಹೆಚ್ಚಿನ ವ್ಯಾಪಾರಸ್ಥರು ಕಣ್ಣಿಗೆ ಕಾಣಿಸಿರಲಿಲ್ಲ. ಅಂಗಡಿ ಮುಂಗಟ್ಟುಗಳು ಹೇಳವಷ್ಟು ಮಟ್ಟಿಗೆ ತೆರೆದಿರಲಿಲ್ಲ. ಇರುವ ವ್ಯಾಪರಸ್ಥರಲ್ಲಿಯೇ ಜನರು ತರಕಾರಿ ಸೇರಿದಂತೆ ಅಗತ್ಯ ವಸ್ತುಗಳನ್ನು ಖರೀದಿಸುತ್ತಿದ್ದರು. ಆದರೆ ಖರೀದಿಸುತ್ತಿದ್ದವರು ಕೂಡಾ ದೈಹಿಕ ಅಂತರ ಕಾಪಾಡದೆ, ಮಾಸ್ಕ್ ಧರಿಸದೆ ವ್ಯಾಪಾರ ಮಾಡುವ ಮೂಲಕ ಜನರು ನಿರ್ಲಕ್ಷ್ಯ ತೋರಿದ್ದಾರೆ.

ಕೋಲಾರದಲ್ಲೂ ವೀಕೆಂಡ್ ಕರ್ಪ್ಯೂ ನಡುವೆ ತರಕಾರಿ ಮಾರುಕಟ್ಟೆಯಲ್ಲಿ ಜನಜಂಗುಳಿ ಕಂಡುಬಂದಿದೆ. ಸಾಮಾಜಿಕ ಅಂತರ ಮರೆತು ಖರೀದಿಯಲ್ಲಿ ತೊಡಗಿರುವ ಜನರು ಕೊರೊನಾ ಬಗ್ಗೆ ಆತಂಕ ಇಲ್ಲದಂತೆ ವರ್ತಿಸಿದ್ದಾರೆ. ಅಲ್ಲದೇ ಯಾದಗಿರಿಯ ಬಾಲಾಜಿ ದೇವಸ್ಥಾನ ಬಳಿಯ ಮಾರುಕಟ್ಟೆಯಲ್ಲೂ ಕೊವಿಡ್ ನಿಯಮ ಉಲ್ಲಂಘಿಸಿ ಸಾರ್ವಜನಿಕರು ಅಗತ್ಯ ವಸ್ತುಗಳನ್ನು ಖರೀದಿಸಿದ್ದಾರೆ. ಯಾದಗಿರಿಯಲ್ಲಿ ಪ್ರತಿದಿನ 100ಕ್ಕೂ ಹೆಚ್ಚು ಪ್ರಕರಣ ಬರುತ್ತಿದ್ದರೂ ಜನರು ಮಾತ್ರ ಯಾವುದಕ್ಕೂ ಭಯ ಪಡದೇ ಬಿಂದಾಸ್ ಆಗಿ ಓಡಾಡುತ್ತಿದ್ದಾರೆ.

ಕೊರೊನಾ ಎರಡನೆ ಅಲೆ ಅಬ್ಬರ ಹಿನ್ನೆಲೆ ರಾಯಚೂರ ನಗರದ ರೈತ ಮಾರುಕಟ್ಟೆ, ಉಸ್ಮಾನಿಯಾ ತರಕಾರಿ ಮಾರುಕಟ್ಟೆ ಬಂದ್ ಆಗಿವೆ. ನಗರದ 35 ವಾರ್ಡ್ಗಳಲ್ಲಿ ಪ್ರತ್ಯಕವಾಗಿ ತಾತ್ಕಾಲಿಕ ತರಕಾರಿ ಮಾರುಕಟ್ಟೆ ಆರಂಭವಾಗಿದೆ. ತರಕಾರಿ ಮಾರುಕಟ್ಟೆಯಲ್ಲಿ ಭಾರಿ ಜನಜಂಗುಳಿ ಸೇರುತ್ತಿದ್ದರು. ಮಾಸ್ಕ್ ಧರಿಸದೇ ಸಾಮಾಜಿಕ ಅಂತರವೂ ಕಾಪಾಡದೆ ಕೊವಿಡ್ ನಿಯಮ ಉಲ್ಲಂಘಿಸುತ್ತಿದ್ದರು. ಹೀಗಾಗಿ ಜಿಲ್ಲಾಡಳಿತ ನಗರದ ಪ್ರಮುಖ ಮಾರುಕಟ್ಟೆಗಳನ್ನು ಸಂಪೂರ್ಣವಾಗಿ ಬಂದ್ ಮಾಡಿಸಿದೆ. ಜೊತೆಗೆ ಜನರಿಗೆ ಆಯಾ ವಾರ್ಡ್​ಗಳಲ್ಲೇ ತರಕಾರಿ ಖರೀದಿಗೆ ತಾತ್ಕಾಲಿಕ ವ್ಯವಸ್ಥೆ ಮಾಡಿದೆ.

ಕೊಪ್ಪಳದ ಎಪಿಎಂಸಿಯಲ್ಲಿ ಕೊವಿಡ್ ರೂಲ್ಸ್ ಬ್ರೇಕ್ ಆಗಿದ್ದು, ದೈಹಿಕ ಅಂತರ, ಮಾಸ್ಕ್ ಧರಿಸದೆ ಜನರು ನಿರ್ಲಕ್ಷ್ಯ ತೋರಿದ್ದಾರೆ. ಕಟ್ಟು ನಿಟ್ಟಿನ ಆದೇಶ ಇದ್ದರೂ ಕ್ಯಾರೆ ಎನ್ನದ ಜನ ಬೆಳ್ಳ ಬೆಳಗ್ಗೆ ಮಾರುಕಟ್ಟೆಯಲ್ಲಿ ಹಣ್ಣು, ತರಕಾರಿ ಖರೀದಿಸಿದ್ದಾರೆ.

ಇದನ್ನೂ ಓದಿ

ಭ್ರಷ್ಟಾಚಾರ ಪ್ರಕರಣ: ಮಹಾರಾಷ್ಟ್ರ ಮಾಜಿ ಗೃಹಸಚಿವ ಅನಿಲ್​ ದೇಶಮುಖ್​ ವಿರುದ್ಧ ಎಫ್​ಐಆರ್ ದಾಖಲಿಸಿದ ಸಿಬಿಐ

ಅಗತ್ಯ ವಸ್ತುಗಳನ್ನು ಖರೀದಿಸುವಾಗ ಕೊವಿಡ್ ನಿಯಮಗಳನ್ನು ಉಲ್ಲಂಘಿಸಿದ ಮಲ್ನಾಡ್ ಜನ

(Many district people of karnataka violated Corona rules)

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ