AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tv9 Digital Live | ಕೊರೊನಾ ಕಠಿಣ ಮಾರ್ಗಸೂಚಿಗೆ ಮಿಶ್ರ ಅಭಿಪ್ರಾಯಗಳು

ಸರ್ಕಾರ ಕಠಿಣ ಮಾರ್ಗಸೂಚಿಯನ್ನು ಹೊರಡಿಸಿದೆ. ಇದರಿಂದ ಕೊರೊನಾ ಸೋಂಕನ್ನು ತಡೆಗಟ್ಟಲು ಸಾಧ್ಯನಾ? ಎಷ್ಟರ ಮಟ್ಟಿಗೆ ಕೊರೊನಾ ಸೋಂಕು ತಡೆಗಟ್ಟಬಹುದು? ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಾಂಕ್ರಾಮಿಕ ರೋಗ ತಜ್ಞ ಡಾ.ಸುನೀಲ್, ಸರ್ಕಾರ ಕೈಗೊಂಡಿರುವ ನಿರ್ಧಾರ ಹೇಳುವಂತಹ ಮಟ್ಟಿಗೆ ಪರಿಣಾಮಕಾರಿಯಾಗಲ್ಲ ಎಂದಿದ್ದಾರೆ.

Tv9 Digital Live | ಕೊರೊನಾ ಕಠಿಣ ಮಾರ್ಗಸೂಚಿಗೆ ಮಿಶ್ರ ಅಭಿಪ್ರಾಯಗಳು
ಡಾ.ಸುನೀಲ್ , ಪ್ರಿಯಾ ಮತ್ತು ಸಿ.ಆರ್.ಜನಾರ್ಧನ್
sandhya thejappa
|

Updated on:Apr 22, 2021 | 11:00 AM

Share

ಬೆಂಗಳೂರು: ಕೊರೊನಾ ಸೋಂಕಿತರ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರಿಂದ ಅನಿವಾರ್ಯವಾಗಿ ರಾಜ್ಯದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ ಕಠಿಣ ಕ್ರಮ ಜಾರಿಗೊಳಿಸಬೇಕಾಗಿತ್ತು. ಈ ನಿಟ್ಟಿನಲ್ಲಿ ಕೊರೊನಾ ವಿರುದ್ಧ ಹೋರಾಡಲು ಏಪ್ರಿಲ್ 20 ಕ್ಕೆ ರಾಜ್ಯ ಸರ್ಕಾರ ಲಾಕ್​ಡೌನ್​​​ ಬದಲಿಗೆ ಕಠಿಣ ಮಾರ್ಗಸೂಚಿಯನ್ನು ಹೊರಡಿಸಿದೆ. ಆದರೆ ಕೆಲವರು ಲಾಕ್​ಡೌನ್​ ಮಾಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರೆ, ಇನ್ನು ಕೆಲವರು ಕಠಿಣ ಕ್ರಮಗಳಿಂದ ಕೊರೊನಾ ತಡೆಗಟ್ಟಬಹುದು ಎಂದು ಹೇಳುತ್ತಿದ್ದಾರೆ. ಈ ಬಗ್ಗೆ ಡಿಜಿಟಲ್ ಲೈವ್​ನಲ್ಲಿ ಚರ್ಚಿಸಲಾಗಿದೆ. ಚರ್ಚೆಯಲ್ಲಿ ಬೆಂಗಳೂರು ನಿವಾಸಿ ಪ್ರಿಯಾ, ಸಾಂಕ್ರಾಮಿಕ ರೋಗ ತಜ್ಞ ಡಾ.ಸುನೀಲ್ ಮತ್ತು ಎಫ್​ಕೆಸಿಸಿಐನ ಮಾಜಿ ಅಧ್ಯಕ್ಷ ಸಿ.ಆರ್.ಜನಾರ್ಧನ್ ಭಾಗವಹಿಸಿದ್ದರು. ಚರ್ಚೆಯನ್ನು ಆ್ಯಂಕರ್ ಹರಿಪ್ರಸಾದ್ ನಡೆಸಿಕೊಟ್ಟರು.

ಸರ್ಕಾರ ಕಠಿಣ ಮಾರ್ಗಸೂಚಿಯನ್ನು ಹೊರಡಿಸಿದೆ. ಇದರಿಂದ ಕೊರೊನಾ ಸೋಂಕನ್ನು ತಡೆಗಟ್ಟಲು ಸಾಧ್ಯನಾ? ಎಷ್ಟರ ಮಟ್ಟಿಗೆ ಕೊರೊನಾ ಸೋಂಕು ತಡೆಗಟ್ಟಬಹುದು? ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಾಂಕ್ರಾಮಿಕ ರೋಗ ತಜ್ಞ ಡಾ.ಸುನೀಲ್, ಸರ್ಕಾರ ಕೈಗೊಂಡಿರುವ ನಿರ್ಧಾರ ಹೇಳುವಂತಹ ಮಟ್ಟಿಗೆ ಪರಿಣಾಮಕಾರಿಯಾಗಲ್ಲ. ಕೇವಲ ಶೇ.25 ರಿಂದ 30ರ ಮಟ್ಟಿಗೆ ಮಾತ್ರ ಸೋಂಕನ್ನು ತಡೆಗಟ್ಟಬಹುದು. ಜಾರಿಯಾಗಿರುವ ಕಠಿಣ ಮಾರ್ಗಸೂಚಿಗಳಿಂದ ಸಂಪೂರ್ಣವಾಗಿ ಕೊರೊನಾ ಸೋಂಕನ್ನು ತಡೆಗಟ್ಟಲು ಸಾಧ್ಯವಿಲ್ಲ. ಲಾಕ್​ಡೌನ್​ನಿಂದ ಆರ್ಥಿಕ ಪರಿಸ್ಥಿತಿ ತೀರಾ ಹದಗೆಡುತ್ತದೆ. ಆದರೆ ಈ ಸಂದಿಗ್ಧ ಕಾಲದಲ್ಲಿ 14 ದಿನ ಅಥವಾ 21 ದಿನಗಳ ಕಾಲ ಲಾಕ್​ಡೌನ್​ ಅನಿವಾರ್ಯವಾಗಿತ್ತು ಎಂದು ಹೇಳಿದ್ದಾರೆ.

ಚರ್ಚೆಯ ಮುಂದಿನ ಭಾಗವಾಗಿ ಮಾತನಾಡಿದ ಬೆಂಗಳೂರು ನಿವಾಸಿ ಪ್ರಿಯಾ, ವೀಕೆಂಡ್​ನಲ್ಲಿ ಬಹಳಷ್ಟು ಜನರು ಪಾರ್ಟಿಗಾಗಿ ಹೊರಗೆ ಹೋಗುತ್ತಿದ್ದರು. ಇದರಿಂದ ತುಂಬಾ ದೊಡ್ಡ ಸಮಸ್ಯೆಯಾಗುತ್ತಿತ್ತು. ಆದರೆ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದೆ. ಇದರಿಂದ ಕೊರೊನಾ ಸೋಂಕನ್ನು ಸ್ವಲ್ಪ ಮಟ್ಟಿಗೆ ತಡೆಗಟ್ಟಬಹುದು. ಆದರೆ ಸಂಪೂರ್ಣವಾಗಿ ತೊಲಗಿಸಲು ಸಾಧ್ಯವಿಲ್ಲ. ಹೀಗಾಗಿ ಲಾಕ್​ಡೌನ್ ಮಾಡುವುದು ಸೂಕ್ತವಾಗಿದೆ. ಈಗಾಗಲೇ ಜಾರಿಯಾಗಿರುವ ನಿಯಮಗಳು ಸಾಕಾಗುವುದಿಲ್ಲ. ಜೀವ ಭಯ ಕಾಡುತ್ತಿದೆ. ಸರ್ಕಾರ ಲಾಕ್​ಡೌನ್​ ಜಾರಿ ಮಾಡಿದರೆ ಅದನ್ನು ಜನರು ಪಾಲಿಸಿ, ಸರ್ಕಾರಕ್ಕೆ ಸಹಕರಿಸುತ್ತಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸರ್ಕಾರ ಪ್ರಕಟಿಸಿದ ಮಾರ್ಗಸೂಚಿಯಿಂದ ತೃಪ್ತಿಯಾಗಿದೆ. ಕಾರಣ ಲಾಕ್​ಡೌನ್​ನಿಂದ ಆರ್ಥಿಕ ಪರಿಸ್ಥಿತಿ ಹದಗೆಡುತ್ತದೆ. ಲಾಕ್​ಡೌನ್​ ಮಾಡಿದರೆ ಕೈಗಾರಿಕೆಗಳು ಹೇಳಲಾಗದ ಮಟ್ಟಿಗೆ ನಷ್ಟವನ್ನು ಅನುಭವಿಸುತ್ತವೆ. ಲಾಕ್​ಡೌನ್​ ಮಾಡಿದಾಗ ಕಾರ್ಮಿಕರಿಗೆ ಸಂಬಳ ನೀಡಲು ಸಾಧ್ಯವಾಗಲ್ಲ. ಆಗ ಅವರಿಗೆ ತೊಂದರೆಯಾಗುತ್ತದೆ. ಲಾಕ್​ಡೌನ್ ಒಂದೇ ಪರಿಹಾರವಲ್ಲ. ಸರ್ಕಾರದ ಕಠಿಣ ಮಾರ್ಗಸೂಚಿಗಳನ್ನು ಎಲ್ಲರೂ ಪಾಲಿಸಿದರೆ ಕೊರೊನಾ ಸೋಂಕನ್ನು ತಡೆಗಟ್ಟಲು ಸಾಧ್ಯವಿದೆ. ಹೀಗಾಗಿ ಲಾಕ್​ಡೌನ್ ನಿರ್ಧಾರ ಬೇಡ ಎಂದು ಎಫ್​ಕೆಸಿಸಿಐನ ಮಾಜಿ ಅಧ್ಯಕ್ಷ ಸಿ.ಆರ್.ಜನಾರ್ಧನ್ ತಿಳಿಸಿದರು.

ಇದನ್ನೂ ಓದಿ

ಕೊರೊನಾ ಸೋಂಕಿನಿಂದ ಮೃತಪಟ್ಟ ದೆಹಲಿ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಎ.ಕೆ.ವಾಲಿಯಾ

ರಾಜ್ಯದಲ್ಲಿ ರೆಮ್​ಡೆಸಿವಿರ್ ಇಂಜೆಕ್ಷನ್ ಅಭಾವ ಹೆಚ್ಚಳ; ಅವಧಿ ಮುಗಿದ ಇಂಜೆಕ್ಷನ್ ಮರುಬಳಕೆಗೆ ಅನುಮತಿ ನೀಡಿದ ಸರ್ಕಾರ

(many opinions have been expressed about corona stringent guidelines in Tv9 Digital Live)

Published On - 10:58 am, Thu, 22 April 21

ಚಿತ್ರರಂಗದಲ್ಲಿ ಒಗ್ಗಟ್ಟಿನ ಕೊರತೆ ಇದೆ: ನಟಿ ರಮ್ಯಾ
ಚಿತ್ರರಂಗದಲ್ಲಿ ಒಗ್ಗಟ್ಟಿನ ಕೊರತೆ ಇದೆ: ನಟಿ ರಮ್ಯಾ
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ