Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಮಳೆ ಅನಾಹುತ, 21 ರಾಜ್ಯ ಹೆದ್ದಾರಿಗಳ ಸಂಪರ್ಕ ಕಡಿತ: ಡಿಸಿಎಂ ಗೋವಿಂದ ಕಾರಜೋಳ

Karnataka Rains: ಬೆಳಗಾವಿ ಜಿಲ್ಲೆಯ 51 ಹಳ್ಳಿಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, 26 ಕಾಳಜಿ ಕೇಂದ್ರಗಳನ್ನು ಸ್ಥಾಪಿಸಿ 2 ಸಾವಿರ ಸಂತ್ರಸ್ತರನ್ನು ಸ್ಥಳಾಂತರ ಮಾಡಲಾಗಿದೆ ಎಂದು ಗೋವಿಂದ ಕಾರಜೋಳ ಹೇಳಿದರು.

ಕರ್ನಾಟಕದಲ್ಲಿ ಮಳೆ ಅನಾಹುತ, 21 ರಾಜ್ಯ ಹೆದ್ದಾರಿಗಳ ಸಂಪರ್ಕ ಕಡಿತ: ಡಿಸಿಎಂ ಗೋವಿಂದ ಕಾರಜೋಳ
ಶಿವಮೊಗ್ಗ ಜಿಲ್ಲೆಯಲ್ಲಿ ನೀರಿನ ರಭಸಕ್ಕೆ ಕೊಚ್ಚಿ ಹೋದ ರಸ್ತೆ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jul 23, 2021 | 10:00 PM

ಬೆಂಗಳೂರು: ಕರ್ನಾಟಕ ಹಲವು ಜಿಲ್ಲೆಗಳಲ್ಲಿ ಮಳೆ ಬಿರುಸಾಗಿ ಸುರಿಯುತ್ತಿದೆ. ಬೆಳಗಾವಿ, ಧಾರವಾಡ, ಬಾಗಲಕೋಟೆ ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಅನಾಹುತಗಳು ವರದಿಯಾಗಿವೆ. ಮಳೆ ಹೆಚ್ಚಾಗಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಸಬೆ ನಡೆಸಿ ಚರ್ಚಿಸಿದರು. ಮಳೆಯಿಂದ ಆಗಿರುವ ಅನಾಹುಗಳ ವಿವರಗಳನ್ನು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮುಖ್ಯಮಂತ್ರಿಗೆ ನೀಡಿದರು.

ಬೆಳಗಾವಿ ಸೇರಿ ವಿವಿಧ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ 21 ರಾಜ್ಯ ಹೆದ್ದಾರಿಗಳು ಸಂಪರ್ಕ ಕಳೆದುಕೊಂಡಿವೆ. ಬೆಳಗಾವಿ ಜಿಲ್ಲೆಯ 51 ಹಳ್ಳಿಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, 26 ಕಾಳಜಿ ಕೇಂದ್ರಗಳನ್ನು ಸ್ಥಾಪಿಸಿ 2 ಸಾವಿರ ಸಂತ್ರಸ್ತರನ್ನು ಸ್ಥಳಾಂತರ ಮಾಡಲಾಗಿದೆ ಎಂದು ಅವರು ಹೇಳಿದರು.

ಬೆಳಗಾವಿ ಜಿಲ್ಲೆಯಲ್ಲಿ 66 ಮಿಮೀ ಮಳೆಯಾಗಿದೆ. 24 ಗಂಟೆಗಳಲ್ಲಿ 1100 ಪರ್ಸೆಂಟ್ ಹೆಚ್ಚು ಮಳೆಯಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ 36 ಸೇತುವೆಗಳು ಮುಳುಗಡೆಯಾಗಿದ್ದು, ಭಾರಿ ಮಳೆಗೆ 37 ಕಿಮೀ ರಸ್ತೆ ಕೊಚ್ಚಿಕೊಂಡು ಹೋಗಿದೆ ಎಂದು ಕಾರಜೋಳ ನುಡಿದರು.

ಮಳೆ ನಿಂತ ಕೂಡಲೇ ರಸ್ತೆಗಳನ್ನು ದುರಸ್ತಿ ಮಾಡುವ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಆರಂಭಿಸಬೇಕು. ಮಳೆಯಿಂದಾದ ಹಾನಿಗೆ ಪರಿಹಾರಧನವನ್ನೂ ಶೀಘ್ರ ಬಿಡುಗಡೆ ಮಾಡಬೇಕು. ಬೆಳಗಾವಿ, ಉತ್ತರಕನ್ನಡ ಜಿಲ್ಲೆಯಲ್ಲಿ ಪರಿಹಾರ ಕಾರ್ಯಗಳು ತುರ್ತಾಗಿ ನಡೆಯಬೇಕಿದೆ. ಈ ಕೂಡಲೇ ₹ 50 ಕೋಟಿ ಬಿಡುಗಡೆ ಮಾಡಬೇಕು ಎಂದು ವಿನಂತಿಸಿದರು.

ಬೆಳಗಾವಿ ಜಿಲ್ಲೆಯಲ್ಲಿ ಎರಡು ರಾಷ್ಟ್ರೀಯ ವಿಪತ್ತು ಪರಿಹಾರ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ. ಬೆಳಗಾವಿ ಜಿಲ್ಲೆಗೆ ಹೆಚ್ಚುವರಿಯಾಗಿ ಮತ್ತೊಂದು ತಂಡ ಬೇಕಿದೆ. ಬಾಗಲಕೋಟೆ ಜಿಲ್ಲೆಯ ನದಿಪಾತ್ರದಲ್ಲಿ ನೀರು ಹೆಚ್ಚಾಗುತ್ತಿದೆ. ರಾತ್ರಿ ವೇಳೆಗೆ ನೀರಿನ ಪ್ರಮಾಣ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿರುವುದರಿಂದ ಅಲ್ಲಿಗೂ ಒಂದು ಎನ್​ಡಿಆರ್​ಎಫ್ ತಂಡವನ್ನು ಒದಗಿಸಬೇಕು ಎಂದು ಕಾರಜೋಳ ಮನವಿ ಮಾಡಿದರು.

ಹಿಡಕಲ್ ಜಲಾಶಯದಲ್ಲಿ ಪ್ರಸ್ತುತ 80 ಸಾವಿರ ಕ್ಯೂಸೆಕ್ ಒಳಹರಿವು, 25 ಸಾವಿರ ಕ್ಯೂಸೆಕ್ ಹೊರಹರಿವು ಇದೆ. ಬಳ್ಳಾರಿ ನಾಲಾದಿಂದ 13 ಸಾವಿರ ಕ್ಯೂಸೆಕ್ ನೀರು ಬರುತ್ತಿದ್ದೆ. ಒಟ್ಟಾರೆಯಾಗಿ ಘಟಪ್ರಭಾ ನದಿಗೆ 95 ಸಾವಿರ ಕ್ಯೂಸಿಕೆ ನೀರು ಬರುತ್ತಿದೆ ಎಂದು ಅವರು ಹೇಳಿದರು.

ತುರ್ತುಕ್ರಮಕ್ಕೆ ಯಡಿಯೂರಪ್ಪ ಸೂಚನೆ ಪ್ರವಾಹ ಪೀಡಿತ ಗ್ರಾಮದ ನಿವಾಸಿಗಳನ್ನು ಸ್ಥಳಾಂತರಿಸಿ. ಪ್ರವಾಹ ಸಾಧ್ಯತೆಯಿರುವ ಗ್ರಾಮಸ್ಥರನ್ನೂ ಸ್ಥಳಾಂತರಿಸಿ. NDRF, SDRF ತಂಡಗಳನ್ನು ಜಿಲ್ಲೆಗಳಿಗೆ ತುರ್ತಾಗಿ ಕಳಿಸಿ. ಅಗತ್ಯವಿರುವ ಜಿಲ್ಲೆಗಳಿಗೆ ತುರ್ತಾಗಿ ತಂಡಗಳನ್ನು ಕಳಿಸಿ ಎಂದು ಸಿಎಂ ಸೂಚನೆ ನೀಡಿದ್ದಾರೆ. ಆದಷ್ಟು ಹೆಚ್ಚು ಕಾಳಜಿ ಕೇಂದ್ರ ತೆರೆದು ಸರ್ವ ಸನ್ನದ್ಧಗೊಳಿಸಿ. ಅಧಿಕಾರಿಗಳು ರಜೆ ಹಾಕದೇ ಕೆಲಸ‌ ಮಾಡಬೇಕು ಎಂದು ಬಿ.ಎಸ್. ಯಡಿಯೂರಪ್ಪ ಆದೇಶ ನೀಡಿದ್ದಾರೆ.

(Many State Highways in Karnataka cut with network due to heavy rains says Govinda Karajola)

ಇದನ್ನೂ ಓದಿ: Karnataka Rains: ಕರ್ನಾಟಕದ ಹಲವೆಡೆ ಮಹಾಮಳೆ; 6 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಬಿಎಸ್ ಯಡಿಯೂರಪ್ಪ ಸಭೆ

ಇದನ್ನೂ ಓದಿ: Maharashtra Rains: ಮಹಾರಾಷ್ಟ್ರದಲ್ಲಿ ಭಾರೀ ಮಳೆ; ಮುಂಬೈ, ಕೊಂಕಣ ಮಾರ್ಗದ 30 ರೈಲುಗಳ ಸಂಚಾರ ರದ್ದು

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​