ಮಸ್ಕಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್ಗೌಡ ಪಾಟೀಲ್ಗೆ ಕೊರೊನಾ ಸೋಂಕು
Karnataka ByElection 2021: ಅವರಿಗೆ ಲಿಂಗಸುಗೂರು ಸರ್ಕಾರಿ ಆಸ್ಪತ್ರೆಯಲ್ಲಿ ಆರ್‌ಟಿಪಿಸಿಆರ್ ಟೆಸ್ಟ್ ಮಾಡಲಾಗಿತ್ತು. ಪರೀಕ್ಷೆಯಲ್ಲಿ ಪ್ರತಾಪ್ಗೌಡ ಪಾಟೀಲ್ಗೆ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ರಾಯಚೂರು: ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಪ್ರತಾಪ್ಗೌಡ ಪಾಟೀಲ್ಗೆ ಕೊರೊನಾ ದೃಢಪಟ್ಟಿದೆ. ಸಿಎಂ ಯಡಿಯೂರಪ್ಪ ಮತ್ತು ಇತರ ಹಲವು ಸಚಿವರ ಜೊತೆ ಪ್ರತಾಪ್ಗೌಡ ಪಾಟೀಲ್ ಪ್ರಚಾರ ನಡೆಸಿದ್ದರು. ಅವರಿಗೆ ಲಿಂಗಸುಗೂರು ಸರ್ಕಾರಿ ಆಸ್ಪತ್ರೆಯಲ್ಲಿ ಆರ್‌ಟಿಪಿಸಿಆರ್ ಟೆಸ್ಟ್ ಮಾಡಲಾಗಿತ್ತು. ಪರೀಕ್ಷೆಯಲ್ಲಿ ಪ್ರತಾಪ್ಗೌಡ ಪಾಟೀಲ್ಗೆ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬಿಜೆಪಿ ಅಭ್ಯರ್ಥಿ ಪ್ರತಾಪ್ಗೌಡ ಪಾಟೀಲ್ಗೆ ಕೊರೊನಾ ಪಾಸಿಟಿವ್ ಬಂದಿರುವ ಬಗ್ಗೆ ಇಂದು ಆರೋಗ್ಯ ಇಲಾಖೆ ಮೂಲಗಳು ಟಿವಿ9ಗೆ ಮಾಹಿತಿ ನೀಡಿವೆ. ಆದರೆ, ಪ್ರತಾಪ್ಗೌಡ ಪಾಟೀಲ್ ಅಧಿಕೃತವಾಗಿ ಇದುವರೆಗೂ ತಮಗೆ ಕೊರೊನಾ ಸೋಂಕು ಬಂದಿರುವುದಾಗಿ ಘೋಷಣೆ ಮಾಡಿಕೊಂಡಿಲ್ಲ. ನಾಳೆ ಬಿಜೆಪಿ ಅಭ್ಯರ್ಥಿ ಪ್ರತಾಪ್ಗೌಡ ಪಾಟೀಲ್ ಅವರ ಕಡೆಯವರು ಸುದ್ದಿಗೋಷ್ಠಿಯಲ್ಲಿ ಅಧಿಕೃತವಾಗಿ ಈ ಕುರಿತು ಪ್ರಕಟಿಸುವ ಸಾಧ್ಯತೆ ಇದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸದ್ಯ ಮಸ್ಕಿಯಲ್ಲೇ ಬಿಜೆಪಿ ಅಭ್ಯರ್ಥಿ ಪ್ರತಾಪ್ಗೌಡ ಪಾಟೀಲ್ ಅವರ ಪರ ಪ್ರಚಾರ ನಡೆಸುತ್ತಿದ್ದಾರೆ. ಅಲ್ಲದೇ ರಾಜ್ಯ ಬಿಜೆಪಿಯ ಕೆಲವು ಸಚಿವರು ಮತ್ತು ನಾಯಕರು ಸಹ ಪ್ರತಾಪ್ಗೌಡ ಪಾಟೀಲ್ ಅವರ ಪರ ಪ್ರಚಾರ ನಡೆಸುತ್ತಿದ್ದಾರೆ. ಇದೀಗ ಏ ಎಲ್ಲ ಸಚಿವರು, ನಾಯಕರಿಗೂ ಕೊರೊನಾ ಭಯ ಎದುರಾಗಿದೆ. ಈ ಎಲ್ಲ ನಾಯಕರೂ ಕ್ವಾರಂಟೈನ್ ಆಗಬೇಕಿದೆ.
ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಮೂರು ಪಕ್ಷಗಳಿಗೂ ಮಸ್ಕಿ ವಿಧಾನಸಭಾ ಕ್ಷೇತ್ರದ ಚುನಾವಣೆ ಪ್ರತಿಷ್ಠೆಯ ಕಣವಾಗಿ ಪರಿಣಮಿಸಿದೆ. ಕಾಂಗ್ರೆಸ್ನಿಂದ ಬಸನಗೌಡ ತುರುವಿಹಾಳ ಕಣದಲ್ಲಿದ್ದಾರೆ. ಮಸ್ಕಿ ವಿಧಾನಸಭಾ ಕ್ಷೇತ್ರದ ಚುನಾವಣೆ ಏಪ್ರಿಲ್ 17 ರಂದು ನಡೆಯಲಿದೆ. ಮೇ 2 ಮತ ಎಣಿಕೆ ನಡೆಯಲಿದೆ.
ಇದನ್ನೂ ಓದಿ:ಮಸ್ಕಿ ಬೈಎಲೆಕ್ಷನ್‌ನಲ್ಲಿ ಪ್ರತಾಪಗೌಡ ಪಾಟೀಲ್ 20 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತಾರೆ – ಬಿ.ಎಸ್.ಯಡಿಯೂರಪ್ಪ
ಮಸ್ಕಿ ಉಪಚುನಾವಣಾ ಪ್ರಚಾರದ ವೇಳೆ ಮಿರ್ಚಿ ಕರಿದ ಶಾಸಕ ರೇಣುಕಾಚಾರ್ಯ
(maski constituency by election 2021 bjp candidate pratapgouda patil tests covid 19 positive GGD)
Published On - 7:08 pm, Sun, 11 April 21