ಮಸ್ಕಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್​ಗೌಡ ಪಾಟೀಲ್​ಗೆ ಕೊರೊನಾ ಸೋಂಕು

|

Updated on: Apr 11, 2021 | 9:34 PM

Karnataka ByElection 2021: ಅವರಿಗೆ ಲಿಂಗಸುಗೂರು ಸರ್ಕಾರಿ ಆಸ್ಪತ್ರೆಯಲ್ಲಿ ಆರ್‌ಟಿಪಿಸಿಆರ್‌ ಟೆಸ್ಟ್‌ ಮಾಡಲಾಗಿತ್ತು. ಪರೀಕ್ಷೆಯಲ್ಲಿ ಪ್ರತಾಪ್​ಗೌಡ ಪಾಟೀಲ್​ಗೆ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಸ್ಕಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್​ಗೌಡ ಪಾಟೀಲ್​ಗೆ ಕೊರೊನಾ ಸೋಂಕು
ಬಿಜೆಪಿ ಅಭ್ಯರ್ಥಿ ಪ್ರತಾಪ್​ಗೌಡ ಪಾಟೀಲ್
Follow us on

ರಾಯಚೂರು: ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಪ್ರತಾಪ್​ಗೌಡ ಪಾಟೀಲ್​ಗೆ ಕೊರೊನಾ ದೃಢಪಟ್ಟಿದೆ. ಸಿಎಂ ಯಡಿಯೂರಪ್ಪ ಮತ್ತು ಇತರ ಹಲವು ಸಚಿವರ ಜೊತೆ ಪ್ರತಾಪ್​ಗೌಡ ಪಾಟೀಲ್ ಪ್ರಚಾರ ನಡೆಸಿದ್ದರು. ಅವರಿಗೆ ಲಿಂಗಸುಗೂರು ಸರ್ಕಾರಿ ಆಸ್ಪತ್ರೆಯಲ್ಲಿ ಆರ್‌ಟಿಪಿಸಿಆರ್‌ ಟೆಸ್ಟ್‌ ಮಾಡಲಾಗಿತ್ತು. ಪರೀಕ್ಷೆಯಲ್ಲಿ ಪ್ರತಾಪ್​ಗೌಡ ಪಾಟೀಲ್​ಗೆ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬಿಜೆಪಿ ಅಭ್ಯರ್ಥಿ ಪ್ರತಾಪ್​ಗೌಡ ಪಾಟೀಲ್​ಗೆ ಕೊರೊನಾ ಪಾಸಿಟಿವ್ ಬಂದಿರುವ ಬಗ್ಗೆ ಇಂದು ಆರೋಗ್ಯ ಇಲಾಖೆ ಮೂಲಗಳು ಟಿವಿ9ಗೆ ಮಾಹಿತಿ ನೀಡಿವೆ. ಆದರೆ, ಪ್ರತಾಪ್​ಗೌಡ ಪಾಟೀಲ್​ ಅಧಿಕೃತವಾಗಿ ಇದುವರೆಗೂ ತಮಗೆ ಕೊರೊನಾ ಸೋಂಕು ಬಂದಿರುವುದಾಗಿ ಘೋಷಣೆ ಮಾಡಿಕೊಂಡಿಲ್ಲ. ನಾಳೆ ಬಿಜೆಪಿ ಅಭ್ಯರ್ಥಿ ಪ್ರತಾಪ್​ಗೌಡ ಪಾಟೀಲ್ ಅವರ ಕಡೆಯವರು ಸುದ್ದಿಗೋಷ್ಠಿಯಲ್ಲಿ ಅಧಿಕೃತವಾಗಿ ಈ ಕುರಿತು ಪ್ರಕಟಿಸುವ ಸಾಧ್ಯತೆ ಇದೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸದ್ಯ ಮಸ್ಕಿಯಲ್ಲೇ ಬಿಜೆಪಿ ಅಭ್ಯರ್ಥಿ ಪ್ರತಾಪ್​ಗೌಡ ಪಾಟೀಲ್ ಅವರ ಪರ ಪ್ರಚಾರ ನಡೆಸುತ್ತಿದ್ದಾರೆ. ಅಲ್ಲದೇ ರಾಜ್ಯ ಬಿಜೆಪಿಯ ಕೆಲವು ಸಚಿವರು ಮತ್ತು ನಾಯಕರು ಸಹ ಪ್ರತಾಪ್​ಗೌಡ ಪಾಟೀಲ್ ಅವರ ಪರ ಪ್ರಚಾರ ನಡೆಸುತ್ತಿದ್ದಾರೆ. ಇದೀಗ ಏ ಎಲ್ಲ ಸಚಿವರು, ನಾಯಕರಿಗೂ ಕೊರೊನಾ ಭಯ ಎದುರಾಗಿದೆ. ಈ ಎಲ್ಲ ನಾಯಕರೂ ಕ್ವಾರಂಟೈನ್ ಆಗಬೇಕಿದೆ.

ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್​ ಮೂರು ಪಕ್ಷಗಳಿಗೂ ಮಸ್ಕಿ ವಿಧಾನಸಭಾ ಕ್ಷೇತ್ರದ ಚುನಾವಣೆ ಪ್ರತಿಷ್ಠೆಯ ಕಣವಾಗಿ ಪರಿಣಮಿಸಿದೆ. ಕಾಂಗ್ರೆಸ್​ನಿಂದ ಬಸನಗೌಡ ತುರುವಿಹಾಳ ಕಣದಲ್ಲಿದ್ದಾರೆ. ಮಸ್ಕಿ ವಿಧಾನಸಭಾ ಕ್ಷೇತ್ರದ ಚುನಾವಣೆ ಏಪ್ರಿಲ್ 17 ರಂದು ನಡೆಯಲಿದೆ. ಮೇ 2 ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ:ಮಸ್ಕಿ ಬೈಎಲೆಕ್ಷನ್‌ನಲ್ಲಿ ಪ್ರತಾಪಗೌಡ ಪಾಟೀಲ್ 20 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತಾರೆ – ಬಿ.ಎಸ್.ಯಡಿಯೂರಪ್ಪ

ಮಸ್ಕಿ ಉಪಚುನಾವಣಾ ಪ್ರಚಾರದ ವೇಳೆ ಮಿರ್ಚಿ ಕರಿದ ಶಾಸಕ ರೇಣುಕಾಚಾರ್ಯ

(maski constituency by election 2021 bjp candidate pratapgouda patil tests covid 19 positive GGD)

Published On - 7:08 pm, Sun, 11 April 21