ಕರ್ನಾಟಕದ ಬಹುತೇಕ ಜಲಾಶಯಗಳಲ್ಲಿ ನೀರಿನ ಸಂಗ್ರಹದಲ್ಲಿ ಭಾರೀ ಕುಸಿತ; ಯಾವ ಜಲಾಶಯದಲ್ಲಿ ಎಷ್ಟಿದೆ ನೀರು? ಇಲ್ಲಿದೆ ವಿವರ

| Updated By: ಗಣಪತಿ ಶರ್ಮ

Updated on: Aug 22, 2023 | 3:06 PM

Karnataka reservoirs water level; ಆಗಸ್ಟ್ 22 ರ ಹೊತ್ತಿಗೆ, ಆಲಮಟ್ಟಿ, ಕಬಿನಿ, ಘಟಪ್ರಭಾ, ಹೇಮಾವತಿ ಮತ್ತು ಹಾರಂಗಿ ಜಲಾಶಯಗಳ ಮಟ್ಟವು ಅವುಗಳ ಪೂರ್ಣ ಸಾಮರ್ಥ್ಯದ ಅರ್ಧದಷ್ಟು ಮಾತ್ರ ಇರುವುದು ತಿಳಿದುಬಂದಿದೆ. ಆದರೆ, ಮುಂದಿನ ದಿನಗಳಲ್ಲಿ ಕರಾವಳಿ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದು ತುಸು ನಿರಾಳತೆ ಒದಗಿಸಿದೆ.

ಕರ್ನಾಟಕದ ಬಹುತೇಕ ಜಲಾಶಯಗಳಲ್ಲಿ ನೀರಿನ ಸಂಗ್ರಹದಲ್ಲಿ ಭಾರೀ ಕುಸಿತ; ಯಾವ ಜಲಾಶಯದಲ್ಲಿ ಎಷ್ಟಿದೆ ನೀರು? ಇಲ್ಲಿದೆ ವಿವರ
ಕೆಆರ್​ಎಸ್ ಡ್ಯಾಂ
Follow us on

ಬೆಂಗಳೂರು, ಆಗಸ್ಟ್ 22: ಮುಂಗಾರು ಮಳೆಯ (Monsoon Rain) ಕೊರತೆಯಿಂದಾಗಿ ಕರ್ನಾಟಕದ (Karnataka) ಜಲಾಶಯಗಳಲ್ಲಿ (Karnataka reservoirs) ನೀರಿನ ಮಟ್ಟ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಪರಿಣಾಮವಾಗಿ ರಾಜ್ಯಾದ್ಯಂತ ನೀರಿನ ತೀವ್ರ ಅಭಾವದ ಭೀತಿ ಎದುರಾಗಿದೆ. ತುಂಗಭದ್ರಾ, ಮಲಪ್ರಭಾ, ಕೆಆರ್‌ಎಸ್, ಲಿಂಗನಮಕ್ಕಿ, ಭದ್ರಾ, ವಾರಾಹಿ ಮತ್ತು ಸೂಪಾ ಜಲಾಶಯಗಳಲ್ಲಿನ ನೀರಿನ ಮಟ್ಟವು ಪ್ರಸ್ತುತ ಪೂರ್ಣ ನೀರಿನ ಸಂಗ್ರಹ ಸಾಮರ್ಥ್ಯಕ್ಕಿಂತ ತೀರಾ ಕಡಿಮೆ ಇದೆ. ಆಗಸ್ಟ್ 22 ರ ಹೊತ್ತಿಗೆ, ಆಲಮಟ್ಟಿ, ಕಬಿನಿ, ಘಟಪ್ರಭಾ, ಹೇಮಾವತಿ ಮತ್ತು ಹಾರಂಗಿ ಜಲಾಶಯಗಳ ಮಟ್ಟವು ಅವುಗಳ ಪೂರ್ಣ ಸಾಮರ್ಥ್ಯದ ಅರ್ಧದಷ್ಟು ಮಾತ್ರ ಇರುವುದು ತಿಳಿದುಬಂದಿದೆ.

ನೆರೆಯ ರಾಜ್ಯವಾದ ತಮಿಳುನಾಡಿಗೆ ಕಾವೇರಿ ನೀರು ಬಿಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ರೈತ ಸಂಘಟನೆಗಳು ಮತ್ತು ವಿರೋಧ ಪಕ್ಷಗಳು ಪ್ರತಿಭಟನೆ ನಡೆಸಿವೆ. ಈ ಮಧ್ಯೆ, ಬೆಳೆ ಉಳಿಸಲು ಆಗಸ್ಟ್ 14 ರಿಂದ 31 ರ ನಡುವೆ 24,000 ಕ್ಯೂಸೆಕ್ ನೀರು ಬಿಡುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ತಮಿಳುನಾಡು ಅರ್ಜಿ ಸಲ್ಲಿಸಿದೆ. ಕಾವೇರಿ ವಿವಾದಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಗೆ ಪೀಠವನ್ನು ರಚಿಸುವುದಾಗಿ ಸುಪ್ರೀಂ ಕೋರ್ಟ್ ಘೋಷಿಸಿದ್ದು, ಮುಂದಿನ ವಾರ ವಿಚಾರಣೆ ನಡೆಯುವ ಸಾಧ್ಯತೆಯಿದೆ.

ಈ ಮಧ್ಯೆ, ಮುಂದಿನ ದಿನಗಳಲ್ಲಿ ಕರಾವಳಿ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದು ತುಸು ನಿರಾಳತೆ ಒದಗಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ವಿಜಯಪುರ, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಗೆ ವಿರೋಧ; ಮಂಡ್ಯದಲ್ಲಿ ಬಿಜೆಪಿ ನಾಯಕರ ಸಭೆ

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವುದನ್ನು ವಿರೋಧಿಸಿ ಮಂಡ್ಯದಲ್ಲಿ ಸೋಮವಾರ ಭಾರೀ ಪ್ರತಿಭಟನೆ ನಡೆಸಲಾಗಿತ್ತು. ರೈತರ ಪ್ರತಿಭಟನೆ ಪ್ರತಿಪಕ್ಷ ಬಿಜೆಪಿ ಬೆಂಬಲ ಘೋಷಿಸಿತ್ತು. ಈ ಮಧ್ಯೆ, ಕಾವೇರಿ ನದಿಯಿಂಡ ತಮಿಳುನಾಡಿಗೆ ನೀರು ಬಿಡುವ ವಿಚಾರ ರಾಜ್ಯದಲ್ಲಿ ರಾಜಕೀಯ ಜಿದ್ದಾಜಿದ್ದಿಗೂ ಕಾರಣವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:44 pm, Tue, 22 August 23