ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಭಾರಿ ಸ್ಫೋಟ: ಅಕ್ಕಪಕ್ಕದ ಪ್ರದೇಶಗಳಲ್ಲಿ ಹೆಚ್ಚಿದ ಆತಂಕ
ಮಂಗಳೂರಿನ ಜೋಕಟ್ಟೆ ಬಳಿಯ ಎಂಆರ್‌ಪಿಎಲ್ ತೈಲ ಸಂಸ್ಕರಣಾ ಘಟಕದಲ್ಲಿ ಭಾರಿ ಸ್ಫೋಟ ಮತ್ತು ಅಗ್ನಿ ಅವಘಡ ಸಂಭವಿಸಿದೆ. ಮುಗಿಲೆತ್ತರಕ್ಕೆ ದಟ್ಟ ಹೊಗೆ ಆವರಿಸಿದ್ದು, ಸುತ್ತಮುತ್ತಲ ಪ್ರದೇಶಗಳಲ್ಲಿ ತೀವ್ರ ಕಂಪನದ ಅನುಭವವಾಗಿದೆ. ಅನೇಕ ಮನೆಗಳು ಮತ್ತು ಅಂಗನವಾಡಿಗಳ ಕಿಟಕಿ ಗಾಜುಗಳು ಒಡೆದಿವೆ. ಸ್ಫೋಟದ ಕಾರಣ ಇನ್ನೂ ತಿಳಿದುಬಂದಿಲ್ಲ.
ಮಂಗಳೂರು, ಸೆಪ್ಟೆಂಬರ್ 30: ಜೋಕಟ್ಟೆ ಬಳಿ ಇರುವ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್) ಘಟಕದಲ್ಲಿ ಭಾರಿ ಸ್ಫೋಟ ಸಂಭವಿಸಿ, ಬಳಿಕ ದೊಡ್ಡ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ಈ ಘಟನೆಯಿಂದಾಗಿ ಮುಗಿಲೆತ್ತರಕ್ಕೆ ದಟ್ಟ ಹೊಗೆ ಆವರಿಸಿದ್ದು, ಸುತ್ತಮುತ್ತಲ ಪ್ರದೇಶಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ, ಜೋಕಟ್ಟೆಯಲ್ಲಿರುವ ಪಂಚಾಯತ್ ಕಟ್ಟಡ, ಅಂಗನವಾಡಿ ಕೇಂದ್ರ ಮತ್ತು ಗ್ರಂಥಾಲಯದ ಕಟ್ಟಡಗಳು ಕಂಪಿಸಿ, ಕಿಟಕಿ ಗಾಜುಗಳು ಪುಡಿಯಾಗಿವೆ. ಫೋಟದ ಶಬ್ದ ಮಂಗಳೂರು ನಗರದವರೆಗೂ ಕೇಳಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos

