ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಭಾರಿ ಸ್ಫೋಟ: ಅಕ್ಕಪಕ್ಕದ ಪ್ರದೇಶಗಳಲ್ಲಿ ಹೆಚ್ಚಿದ ಆತಂಕ

Edited By:

Updated on: Sep 30, 2026 | 2:06 PM

ಮಂಗಳೂರಿನ ಜೋಕಟ್ಟೆ ಬಳಿಯ ಎಂಆರ್‌ಪಿಎಲ್ ತೈಲ ಸಂಸ್ಕರಣಾ ಘಟಕದಲ್ಲಿ ಭಾರಿ ಸ್ಫೋಟ ಮತ್ತು ಅಗ್ನಿ ಅವಘಡ ಸಂಭವಿಸಿದೆ. ಮುಗಿಲೆತ್ತರಕ್ಕೆ ದಟ್ಟ ಹೊಗೆ ಆವರಿಸಿದ್ದು, ಸುತ್ತಮುತ್ತಲ ಪ್ರದೇಶಗಳಲ್ಲಿ ತೀವ್ರ ಕಂಪನದ ಅನುಭವವಾಗಿದೆ. ಅನೇಕ ಮನೆಗಳು ಮತ್ತು ಅಂಗನವಾಡಿಗಳ ಕಿಟಕಿ ಗಾಜುಗಳು ಒಡೆದಿವೆ. ಸ್ಫೋಟದ ಕಾರಣ ಇನ್ನೂ ತಿಳಿದುಬಂದಿಲ್ಲ.

ಮಂಗಳೂರು, ಸೆಪ್ಟೆಂಬರ್​​ 30: ಜೋಕಟ್ಟೆ ಬಳಿ ಇರುವ ಮಂಗಳೂರು ರಿಫೈನರಿ ಅಂಡ್‌ ಪೆಟ್ರೋಕೆಮಿಕಲ್ಸ್‌ ಲಿಮಿಟೆಡ್‌ (ಎಂಆರ್‌ಪಿಎಲ್) ಘಟಕದಲ್ಲಿ ಭಾರಿ ಸ್ಫೋಟ ಸಂಭವಿಸಿ, ಬಳಿಕ ದೊಡ್ಡ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ಈ ಘಟನೆಯಿಂದಾಗಿ ಮುಗಿಲೆತ್ತರಕ್ಕೆ ದಟ್ಟ ಹೊಗೆ ಆವರಿಸಿದ್ದು, ಸುತ್ತಮುತ್ತಲ ಪ್ರದೇಶಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ, ಜೋಕಟ್ಟೆಯಲ್ಲಿರುವ ಪಂಚಾಯತ್ ಕಟ್ಟಡ, ಅಂಗನವಾಡಿ ಕೇಂದ್ರ ಮತ್ತು ಗ್ರಂಥಾಲಯದ ಕಟ್ಟಡಗಳು ಕಂಪಿಸಿ, ಕಿಟಕಿ ಗಾಜುಗಳು ಪುಡಿಯಾಗಿವೆ. ಫೋಟದ ಶಬ್ದ ಮಂಗಳೂರು ನಗರದವರೆಗೂ ಕೇಳಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More