ಬಾಣಂತಿ ಮತ್ತು ಶಿಶುಗಳ ಸಾವು ಪ್ರಕರಣ; ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಮಾರ್ಗಸೂಚಿ ಹೊರಡಿಸಿದ ಆರೋಗ್ಯ ಇಲಾಖೆ
ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿ ಮತ್ತು ಅವಳಿ ಮಕ್ಕಳ ಸಾವು ನಂತರ ಎಚ್ಚೆತ್ತ ಆರೋಗ್ಯ ಇಲಾಖೆ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಮಾರ್ಗಸೂಚಿಗಳನ್ನು ಹೊರಡಿಸಿದೆ.
ಬೆಂಗಳೂರು: ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಸಕಾಲದಲ್ಲಿ ಚಿಕಿತ್ಸೆ ಸಿಗದ ಕಾರಣ ಬಾಣಂತಿ ಮತ್ತು ನವಜಾತ ಶಿಶುಗಳ ಸಾವನ್ನಪ್ಪಿದ ನಂತರ ಎಚ್ಚೆತ್ತ ಆರೋಗ್ಯ ಇಲಾಖೆ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಮಾರ್ಗಸೂಚಿಯಂತೆ ಇನ್ನು ಮುಂದೆ ತುರ್ತು ಆರೋಗ್ಯ ಸೇವೆಯನ್ನು ನೀಡುವ ಸಂದರ್ಭದಲ್ಲಿ ತಾಯಿ ಕಾರ್ಡ್ ಆಧಾರ್ ಕಾರ್ಡ್, ಪಡಿತರ ಕಾರ್ಡ್ ಇತ್ಯಾದಿ ಯಾವುದೇ ದಾಖಲೆಗಳು ಸಲ್ಲಿಸುವ ಅವಶ್ಯವಿರುವುದಿಲ್ಲ.
ಮಾರ್ಗಸೂಚಿಯಲ್ಲಿ ಏನಿದೆ?
- ತುರ್ತು ಆರೋಗ್ಯ ಸೇವೆಯನ್ನು ನೀಡುವ ಸಂದರ್ಭದಲ್ಲಿ ಯಾವುದೇ ದಾಖಲೆಗಳು ಅವಶ್ಯವಿರುವುದಿಲ್ಲ.
- ತಾಯಿ ಕಾರ್ಡ್, ಆಧಾರ ಕಾರ್ಡ್, ಪಡಿತರ ಚೀಟಿ ಇತರೆ ದಾಖಲೆಗಳು ಇಲ್ಲದೇ ಇದ್ದರೂ ಚಿಕಿತ್ಸೆ ನೀಡಬೇಕು.
- ತುರ್ತು ಪರಿಸ್ಥಿತಿಯಲ್ಲಿ ಆರೋಗ್ಯ ಸೇವೆಯನ್ನು ನೀಡುವುದು ಆರೋಗ್ಯ ಕೇಂದ್ರಗಳ ಆದ್ಯ ಕರ್ತವ್ಯವಾಗಿರುತ್ತದೆ.
- ಆರೋಗ್ಯ ಸೇವೆಯನ್ನು ನೀಡುವಾಗ ರೋಗಿಯ ರಾಷ್ಟ್ರೀಯತೆ, ಜಾತಿ, ವರ್ಗ, ಆರ್ಥಿಕ ಸ್ಥಿತಿಯನ್ನು ಅವಲಂಭಿಸಬಾರದು.
- ತುರ್ತು ಪರಿಸ್ಥಿತಿಯಲ್ಲಿ ರೋಗಿಯ ನೋವು ಸಂಕಟವನ್ನು ನಿವಾರಿಸುವುದು ವೈದ್ಯರ, ಶುಶ್ರೂಷಕರ ಮತ್ತು ಇತರೆ ಸಿಬ್ಬಂದಿ ವರ್ಗದವರ ಆದ್ಯ ಕರ್ತವ್ಯ.
- ಸಾರ್ವಜನಿಕ ಆರೋಗ್ಯ ಸಂಸ್ಥೆಗಳು ತುರ್ತು ಪರಿಸ್ಥಿತಿಯಲ್ಲಿ ರೋಗಿಯು ಯಾವುದೇ ರೀತಿಯ ದಾಖಲೆಗಳನ್ನು ಒದಗಿಸಲು ಒತ್ತಾಯಿಸಬಾರದು.
- ಇಂತಹ ಘಟನೆಯು ಮರುಕಳಿಸಿದರೆ ಅಂತಹ ಅಧಿಕಾರಿ, ನೌಕರರನ್ನು ಸೇವೆಯಿಂದ ವಜಾಗೊಳಿಸಲಾಗುವುದು, ಅಲ್ಲದೆ ಕ್ರಿಮಿನಲ್ ಮೊಕದ್ದಮೆಯನ್ನು ಹೂಡಲಾಗುತ್ತದೆ.
ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:47 am, Fri, 4 November 22