Karnataka Weather: ಕರ್ನಾಟಕದ ಕರಾವಳಿ, ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕರ್ನಾಟಕದ ಉತ್ತರ ಒಳನಾಡು, ಕರಾವಳಿ ಭಾಗಗಳಲ್ಲಿ ಗರಿಷ್ಠ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಮೊದಲೆಲ್ಲಾ ಗರಿಷ್ಠ ತಾಪಮಾನ ಏರಿಕೆಯಾದರೆ ಮಳೆಯಾಗುತ್ತಿತ್ತು. ಆದರೆ ವರ್ಷದಿಂದ ವರ್ಷಕ್ಕೆ ಹವಾಮಾನವೂ ತುಂಬಾ ಬದಲಾವಣೆಗಳನ್ನು ಕಾಣುತ್ತಿದೆ.

Karnataka Weather: ಕರ್ನಾಟಕದ ಕರಾವಳಿ, ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನ ಮತ್ತಷ್ಟು ಹೆಚ್ಚಳ ಸಾಧ್ಯತೆ
ಬೇಸಿಗೆ
Image Credit source: English Jagran

Updated on: Mar 05, 2024 | 7:30 AM

ಕರ್ನಾಟಕದಲ್ಲಿ ಈ ಬಾರಿ ಮುಂಗಾರಿಗೂ ಮುನ್ನ ಮಳೆಯಾಗದಿದ್ದರೆ ಒಂದೆಡೆ ಬಿಸಿಲ ಬೇಗೆ ಮತ್ತೊಂದೆಡೆ, ಕುಡಿಯಲು ನೀರು ಇಲ್ಲದ ಪರಿಸ್ಥಿತಿ ನಿರ್ಮಾಣವಾಗಬಹುದು. ಕಲಬುರ್ಗಿಯಲ್ಲಿ 37.4 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ತಾಪಮಾನ, ಚಾಮರಾಜನಗರದಲ್ಲಿ 16.9 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ತಾಪಮಾನ ದಾಖಲಾಗಿದೆ. ಬೆಂಗಳೂರಿನಲ್ಲಿ ಬೆಳಗಿನ ಹೊತ್ತು ಮೋಡಕವಿದ ವಾತಾವರಣವಿರಲಿದ್ದು, ಬಳಿಕ ಬಿಸಿಲು ಹೆಚ್ಚಾಗಲಿದೆ.

ಎಚ್​ಎಎಲ್​ನಲ್ಲಿ 32.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ33.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 32.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಬಾಗಲಕೋಟೆಯಲ್ಲಿ ಅತ್ಯಂತ ಗರಿಷ್ಠ ಉಷ್ಣಾಂಶ, ಚಾಮರಾಜನಗರದಲ್ಲಿ ಅತ್ಯಂತ ಕನಿಷ್ಠ ತಾಪಮಾನ ದಾಖಲು

ಬೀದರ್​ನಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 34.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಧಾರವಾಡದಲ್ಲಿ 33.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಚಿಕ್ಕಮಗಳೂರಿನಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 14.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿತ್ರದುರ್ಗದಲ್ಲಿ 34.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 36.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹಾಸನದಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 14.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us