ಕೋಮು ದ್ವೇಷ vs ಅಭಿವೃದ್ಧಿ: ಶಾಂತಿಯುತ ಕರ್ನಾಟಕ ಹೆಲ್ಪ್ಲೈನ್ ಆರಂಭಿಸುವಂತೆ ಎಂಬಿ ಪಾಟೀಲ್ ಸಲಹೆ
ಸಚಿವ ಎಂಬಿ ಪಾಟೀಲ್ "ಶಾಂತಿಯುತ ಕರ್ನಾಟಕ" ಹೆಲ್ಪ್ಲೈನ್ ಆರಂಭಿಸುವಂತೆ ಸಚಿವ ಡಾ.ಜಿ ಪರಮೇಶ್ವರ್, ಸಚಿವ ಪ್ರಿಯಾಂಕ ಖರ್ಗೆ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಆಗ್ರಹಿಸಿದ್ದಾರೆ.
ಬೆಂಗಳೂರು: ರಾಜ್ಯ ಬಿಜೆಪಿ (BJP) ಘಟಕ ಕೋಮು ದ್ವೇಷ ಹರಡುತ್ತಿದೆ ಎಂದು ಕಾಂಗ್ರೆಸ್ (Congress) ನಾಯಕರು ಆಗಾಗ ಆರೋಪ ಮಾಡುತ್ತಿರುತ್ತಾರೆ. ಇದೀಗ ಕೈ ಅಧಿಕಾರಕ್ಕೆ ಬಂದಿದ್ದು, ಕೋಮು ದ್ವೇಷಕ್ಕೆ ಬ್ರೇಕ್ ಹಾಕುತ್ತೇವೆ ಎಂದು ನಾಯಕರು ಹೇಳುತ್ತಿದ್ದಾರೆ. ಈ ಸಂಬಂಧ ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಸಚಿವ ಎಂಬಿ ಪಾಟೀಲ್ (MB Patil) “ಶಾಂತಿಯುತ ಕರ್ನಾಟಕ” ಹೆಲ್ಪ್ಲೈನ್ ಆರಂಭಿಸುವಂತೆ ಸಚಿವ ಡಾ.ಜಿ ಪರಮೇಶ್ವರ್ (G Parameshwara), ಸಚಿವ ಪ್ರಿಯಾಂಕ ಖರ್ಗೆ (Priyank Kharge) ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಅವರಿಗೆ ಆಗ್ರಹಿಸಿದ್ದಾರೆ.
Requesting @DrParameshwara @PriyankKharge @DKShivakumar @CMofKarnataka to consider setting up a new helpline called “Peaceful Karnataka”
To ensure there is no hatred being spread in Karnataka, and keep track of any such incidents.
Our agenda is only Development & Progress,… https://t.co/mBYdwHVC6m
— M B Patil (@MBPatil) June 5, 2023
ಈ ಕುರಿತು ಟ್ವೀಟ್ ಮಾಡಿದ ಸಚಿವ ಎಂಬಿ ಪಾಟೀಲ್ “ಶಾಂತಿಯುತ ಕರ್ನಾಟಕ” ಹೆಲ್ಪ್ ಲೈನ್ ಆರಂಭಿಸಬೇಕು. ಯಾವುದೇ ದ್ವೇಷ ಹರಡುವುದನ್ನು ತಡೆಯಲು ಹೆಲ್ಪ್ ಲೈನ್ ಆರಂಭಿಸಿ. ದ್ವೇಷ ಹರಡುವ ಘಟನೆಗಳನ್ನು ಟ್ರ್ಯಾಕ್ ಮಾಡಬೇಕು. ಕೇವಲ ಅಭಿವೃದ್ಧಿ ಮಂತ್ರ, ಬ್ರ್ಯಾಂಡ್ ಕರ್ನಾಟಕ ಕಾಪಾಡಬೇಕು ಎಂದು ಸಚಿವರಾದ ಡಾ.ಜಿ ಪರಮೇಶ್ವರ್, ಪ್ರಿಯಾಂಕ ಖರ್ಗೆ, ಹಾಗೂ ಡಿಸಿಎಂ ಡಿಕೆಶಿವಕುಮಾರ್” ಅವರಿಗೆ ಟ್ಯಾಗ್ ಮಾಡಿದ್ದಾರೆ.
ಏನಾದರೂ ಗಲಾಟೆ ಮಾಡಿದರೆ ಜೈಲಿಗೆ ಹಾಕ್ತಿವಿ: ಚಕ್ರವರ್ತಿ ಸೂಲಿಬೆಲೆಗೆ ಎಚ್ಚರಿಕೆ
ರಾಜ್ಯದಲ್ಲಿ ಹಿಟ್ಲರ್ ಆಡಳಿತವಿದೆ ಎಂದು ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಆರೋಪ ಮಾಡಿದ್ದರು. ಈ ವಿಚಾರವಾಗಿ ಸಚಿವ ಎಂಬಿ ಪಾಟೀಲ್ ನಿನ್ನೆ (ಜೂ.4) ವಿಜಯಪುರದಲ್ಲಿ ಸುದ್ದಿಗೋಷ್ಠಿ ನಡೆಸಿ ಏನಾದರೂ ಗಲಾಟೆ ಮಾಡಿದರೆ ಜೈಲಿಗೆ ಹಾಕ್ತಿವಿ ಎಂದು ಖಡಕ್ ಸೂಚನೆ ನೀಡಿದ್ದರು.
ಈ ಹಿಂದೆ ಹಿಜಾಬ್, ಹಲಾಲ್ ವಿಚಾರದಲ್ಲಿ ಗಲಾಟೆ ಮಾಡಿದಂಗೆ ಈಗ ನಾಟಕ ಮಾಡಿದ್ರೆ ಬ್ರೇಕ್ ಹಾಕುತ್ತೇವೆ. ಇನ್ನು ಮುಂದೆ ಅದೆಲ್ಲ ನಡೆಯಲ್ಲ. ಏನಾದರೂ ಗಲಾಟೆ ಮಾಡಿದರೆ ಜೈಲು ಕಂಬಿ ಏಣಿಸ್ತೀರಾ ಹುಷಾರ್ ಎಂದಿದ್ದರು.
ಇವರಿಗೇನು ಜನರು ಕೇಸರಿ ಗುತ್ತಿಗೆ ನೀಡಿಲ್ಲ. ಬಿಜೆಪಿ ಸರ್ಕಾರದಲ್ಲಿ ಹಿಜಾಬ್, ಹಲಾಲ್, ಉರಿಗೌಡ ಅಂತೆಲ್ಲಾ ಸಮಾಜದಲ್ಲಿ ಸಂಘರ್ಷಮಯ ವಾತಾವರಣ ಸೃಷ್ಟಿಸುವ ಕೆಲಸ ಮಾಡಿ, ರಾಜ್ಯದ ಅಭಿವೃದ್ಧಿ ಕುಂಠಿತಗೊಂಡಿತ್ತು. ಇದರಿಂದ ರೋಸಿಹೋದ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರಕ್ಕೆ ನೀಡಿದ್ದಾರೆ. ಸರ್ಕಾರ ಎಲ್ಲ ಸಮುದಾಯಗಳ ರಕ್ಷಣೆ ವಿಷಯದಲ್ಲಿ ವಿಶೇಷ ಕಾಳಜಿ ತೋರಲಿದೆ ಎಂದು ಹೇಳಿದ್ದರು.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ