AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ದಿನಗಳಲ್ಲಿ ಸಿಎಂ ಆಗಲಿದ್ದಾರೆ ಎಂಬಿ ಪಾಟೀಲ್: ಮಹಾದೇವ ಶಿವಾಚಾರ್ಯ ಸ್ವಾಮೀಜಿ ಭವಿಷ್ಯ

ವಿಜಯಪುರ ಜಿಲ್ಲೆಯ ಬಬಲೇಶ್ವರ ಪಟ್ಟಣದ ಹೊರವಲಯದಲ್ಲಿ ನಡೆದ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದ ಜಮಖಂಡಿ ಆಲಗೂರಿನ ವೀರಶೈವ ಪಂಚಮಸಾಲಿ ಮೂರನೇ ಪೀಠದ ಪೀಠಾಧಿಪತಿ ಶ್ರೀ ಮಹಾದೇವ ಶಿವಾಚಾರ್ಯ ಸ್ವಾಮೀಜಿ, ಮುಂಬರುವ ದಿನಗಳಲ್ಲಿ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಮುಖ್ಯಮಂತ್ರಿ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.

ಮುಂದಿನ ದಿನಗಳಲ್ಲಿ ಸಿಎಂ ಆಗಲಿದ್ದಾರೆ ಎಂಬಿ ಪಾಟೀಲ್: ಮಹಾದೇವ ಶಿವಾಚಾರ್ಯ ಸ್ವಾಮೀಜಿ ಭವಿಷ್ಯ
ಮಹದೇವ ಶಿವಾಚಾರ್ಯಶ್ರೀ, ಸಚಿವ ಎಂಬಿ ಪಾಟೀಲ್
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Mar 09, 2024 | 6:56 PM

Share

ವಿಜಯಪುರ, ಮಾರ್ಚ್​​ 09: ಮುಂಬರುವ ದಿನಗಳಲ್ಲಿ ಕೈಗಾರಿಕಾ ಸಚಿವ ಎಂಬಿ ಪಾಟೀಲ್ (MB Patil) ಮುಖ್ಯಮಂತ್ರಿ ಆಗುತ್ತಾರೆ ಎಂದು ಜಮಖಂಡಿ ಆಲಗೂರಿನ ವೀರಶೈವ ಪಂಚಮಸಾಲಿ ಮೂರನೇ ಪೀಠದ ಪೀಠಾಧಿಪತಿ ಶ್ರೀ ಮಹಾದೇವ ಶಿವಾಚಾರ್ಯ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಬಬಲೇಶ್ವರ ಪಟ್ಟಣದ ಹೊರವಲಯದಲ್ಲಿ ನಡೆದ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಸ್ವಾಮೀಜಿ ಆಶೀರ್ವಾದ ಮಾಡಿದ್ದಾರೆ. ಗುರುಪಾದೇಶ್ವರ ಮಠದ ಆಶೀರ್ವಾದ ಅವಶ್ಯವಾಗಿ ಇದೆ. ವಿಜಯಪುರ ಬರಗಾಲ ಬೀಡು ಅನ್ನಿಸಿಕೊಂಡಿತ್ತು. ಅದನ್ನ ಅಳಿಸಿ ಹಾಕಲು ನೀರಾವರಿ ಸಚಿವರಾಗಿ ತಮ್ಮ ಕರ್ತವ್ಯ ನಿರ್ವಹಿಸಿ ಅಭಿವೃದ್ಧಿ ಮಾಡಿದ್ದಾರೆ. ರೈತರ ಜೀವನವನ್ನು ಬಂಗಾರ ಮಾಡಿದ್ದಾರೆ ಎಂದು ಹಾಡಿಹೊಗಳಿದ್ದಾರೆ. ಎಂ.ಬಿ ಪಾಟೀಲ್​​ರಿಗೆ ಸಿದ್ದೇಶ್ವರ ಸ್ವಾಮೀಜಿ, ನಮ್ಮ ಮತ್ತು ಜನರ, ಮಹಿಳೆಯರ ಆಶೀರ್ವಾದ ಇದೆ ಎಂದು ಹೇಳಿದ್ದಾರೆ.

ಲೋಕಸಭಾ ಚುನಾವಣೆಯ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ವಿಚಾರವಾಗಿ ಮಾತನಾಡಿದ ಸಚಿವ ಎಂಬಿ ಪಾಟೀಲ್​, ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ಕರ್ನಾಟಕದ ಮೊದಲ ವಿಜಯಪುರ ಲೋಕಸಭಾ ಕ್ಷೇತ್ರದ ಟಿಕೆಟ್ ಘೋಷಣೆಯಾಗಿದೆ. ಕಾಂಗ್ರೆಸ್ ಮುಖಂಡ ರಾಜೂ ಆಲಗೂರಗೆ ಮೊದಲ ಟಿಕೆಟ್ ಘೋಷಣೆಯಾಗಿದೆ. ಶಿವರಾತ್ರಿಯ ಶುಭ ದಿನದಂದು ಘೋಷಣೆಯಾಗಿದೆ. ನಾವೆಲ್ಲ ಸೇರಿ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸುವ ಕೆಲಸ ಮಾಡುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ: ನೀರಿನ ಸಮಸ್ಯೆಯಿಂದ ಕಂಪನಿಗಳು ಬೆಂಗಳೂರು ಬರಲು ಹಿಂದೇಟು: ಆರ್ ಅಶೋಕ ಹೇಳಿಕೆಗೆ ಕೃಷ್ಣ ಬೈರೇಗೌಡ ತಿರುಗೇಟು

ಜಿಲ್ಲೆಯ ಸಚಿವರು ಶಾಸಕರ ಒಟ್ಟಾಭಿಪ್ರಾಯದಂತೆ ರಾಜೂ ಆಲಗೂರ ಅಭ್ಯರ್ಥಿಯಾಗಿದ್ದಾರೆ. ದಲಿತ ಸಮಾಜದ ಬಲಗೈ ಬಲಕ್ಕೆ ಟಿಕೆಟ್ ನೀಡಬೇಕೆಂಬುದು ಬಹಳ ದಿನಗಳ ಬೇಡಿಕೆಯಾಗಿತ್ತು. ಅಂಬೇಡ್ಕರ್ ವಾದಿಗಳ ಬೇಡಿಕೆಯಾಗಿತ್ತು. ಹಾಗಾಗಿ ಎಲ್ಲರ ಆಶಯದಂತೆ ಟಿಕೆಟ್ ನೀಡಲಾಗಿದೆ. ನಿಶ್ಚಿತವಾಗಿ ಗೆಲುವು ನಮ್ಮದೇ ಎಂದರು.

ಇದನ್ನೂ ಓದಿ: ರಾಮಮಂದಿರಕ್ಕೆ ಬಾಂಬ್‌ ಬೆದರಿಕೆ ವಿಚಾರ: ಎಲ್ಲಾ ದೇವಸ್ಥಾನಗಳಲ್ಲೂ ಸೂಕ್ತ ಭದ್ರತೆಗೆ ಸೂಚಿಸುವೆ: ಸಚಿವ ರಾಮಲಿಂಗಾರೆಡ್ಡಿ

ರಾಜೂ ಆಲಗೂರ ಸಂಸದರಾಗುವುದರಲ್ಲಿ ಸಂಶಯವಿಲ್ಲ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ನಾನು ವಿಜಯಪುರ ಜಿಲ್ಲೆಯ ಸಂಸದನಾಗಿದ್ದೇ ಕೊನೆಯಾಗಿತ್ತು. ಈಗ ರಾಜೂ ಆಲಗೂರ ಗೆಲ್ಲುವ ಮೂಲಕ ಗೆಲುವಿನ ಅಭಿಯಾನ ಪ್ರಾರಂಭವಾಗುತ್ತದೆ ಎಂದು ಹೇಳಿದ್ದಾರೆ.

ದಲಿತ ಸಿಎಂ ಆಗಲು ನಿಶ್ವಿತವಾಗಿ ನನ್ನ ಬೆಂಬಲವಿದೆ: ಸಚಿವ ಎಂಬಿ ಪಾಟೀಲ್

ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು ಸಚಿವ ಮಹಾದೇವಪ್ಪ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ತಪ್ಪೇನಿಲ್ಲ. ದಲಿತರು ಸಿಎಂ ಆಗಬೇಕು. ಈಗ ಸಿಎಂ ಕುರ್ಚಿ ಖಾಲಿಯಿಲ್ಲ. ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಸೂಕ್ತ ಸಂದರ್ಭ ಬಂದಾಗ ದಲಿತರು ಸಿಎಂ ಆಗುವುದರಲ್ಲಿ ತಪ್ಪೇನಿದೆ. ದಲಿತ ಸಿಎಂ ಆಗಲು ನಿಶ್ವಿತವಾಗಿ ನನ್ನ ಬೆಂಬಲವಿದೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ