ಶಿವಮೊಗ್ಗ: ನಗರದ ಪುರಲೆಯಲ್ಲಿ ಮೆಡಿಕಲ್ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾನೆ. ಮೃತ ನಿತಿನ್ ಮೂಲತಃ ದಾವಣಗೆರೆಯ ಜಯನಗರ ಬಡಾವಣೆ ನಿವಾಸಿ ಎಂದು ತಿಳಿದುಬಂದಿದೆ. ಶಿವಮೊಗ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮಾಹಿತಿ ನೀಡಲು ಕಾಲೇಜು ಆಡಳಿತ ಮಂಡಳಿ ಹಿಂದೇಟು: ಸುಬ್ಬಯ್ಯ ಮೆಡಿಕಲ್ ಕಾಲೇಜಿನ ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ನಿತಿನ್ (23) ನಿನ್ನೆ ರಾತ್ರಿ ಕೊಠಡಿಯಲ್ಲಿ ಬಟ್ಟೆ ಐರನ್ ಮಾಡುವ ವೇಳೆ ವಿದ್ಯುತ್ ಹರಿದು ಮೃತಪಟ್ಟಿದ್ದಾನೆ ಎಂದು ಶಂಕಿಸಲಾಗಿದೆ.
ಮೆಡಿಕಲ್ ವಿದ್ಯಾರ್ಥಿ ಐರನ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ಮೃತಪಡುವ ಸಾಧ್ಯತೆ ಕಡಿಮೆ. ಹಾಗಾಗಿ, ಮರಣೋತ್ತರ ಪರೀಕ್ಷೆಗೆ ದಾವಣಗೆರೆಯ ಎಫ್ ಎಸ್ ಎಲ್ ತಂಡ ಆಗಮಿಸಿದೆ. ಈ ಮಧ್ಯೆ, ನಿನ್ನೆ ಯುವಕ ಮೃತಪಟ್ಟಿದ್ದು ಎಲ್ಲಿ ಹೇಗೆ ಎನ್ನುವ ಮಾಹಿತಿ ನೀಡಲು ಕಾಲೇಜು ಆಡಳಿತ ಮಂಡಳಿ ಹಿಂದೇಟು ಹಾಕುತ್ತಿದೆ.