ಐರನ್ ಮಾಡುವಾಗ ಮೆಡಿಕಲ್ ವಿದ್ಯಾರ್ಥಿ ನಿಗೂಢ ಸಾವು

ಶಿವಮೊಗ್ಗ: ನಗರದ ಪುರಲೆಯಲ್ಲಿ ಮೆಡಿಕಲ್ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾನೆ. ಮೃತ ನಿತಿನ್ ಮೂಲತಃ ದಾವಣಗೆರೆಯ ಜಯನಗರ ಬಡಾವಣೆ ನಿವಾಸಿ ಎಂದು ತಿಳಿದುಬಂದಿದೆ. ಶಿವಮೊಗ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮಾಹಿತಿ ನೀಡಲು ಕಾಲೇಜು ಆಡಳಿತ ಮಂಡಳಿ ಹಿಂದೇಟು: ಸುಬ್ಬಯ್ಯ ಮೆಡಿಕಲ್ ಕಾಲೇಜಿನ ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ನಿತಿನ್ (23) ನಿನ್ನೆ ರಾತ್ರಿ ಕೊಠಡಿಯಲ್ಲಿ ಬಟ್ಟೆ ಐರನ್ ಮಾಡುವ ವೇಳೆ ವಿದ್ಯುತ್ ಹರಿದು ಮೃತಪಟ್ಟಿದ್ದಾನೆ ಎಂದು ಶಂಕಿಸಲಾಗಿದೆ. ಮೆಡಿಕಲ್ ವಿದ್ಯಾರ್ಥಿ ಐರನ್ ಮಾಡುವಾಗ ವಿದ್ಯುತ್ […]

ಐರನ್ ಮಾಡುವಾಗ ಮೆಡಿಕಲ್ ವಿದ್ಯಾರ್ಥಿ ನಿಗೂಢ ಸಾವು
ಸಾಧು ಶ್ರೀನಾಥ್​

Updated on: Nov 12, 2019 | 5:09 PM

ಶಿವಮೊಗ್ಗ: ನಗರದ ಪುರಲೆಯಲ್ಲಿ ಮೆಡಿಕಲ್ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾನೆ. ಮೃತ ನಿತಿನ್ ಮೂಲತಃ ದಾವಣಗೆರೆಯ ಜಯನಗರ ಬಡಾವಣೆ ನಿವಾಸಿ ಎಂದು ತಿಳಿದುಬಂದಿದೆ. ಶಿವಮೊಗ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮಾಹಿತಿ ನೀಡಲು ಕಾಲೇಜು ಆಡಳಿತ ಮಂಡಳಿ ಹಿಂದೇಟು:
ಸುಬ್ಬಯ್ಯ ಮೆಡಿಕಲ್ ಕಾಲೇಜಿನ ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ನಿತಿನ್ (23) ನಿನ್ನೆ ರಾತ್ರಿ ಕೊಠಡಿಯಲ್ಲಿ ಬಟ್ಟೆ ಐರನ್ ಮಾಡುವ ವೇಳೆ ವಿದ್ಯುತ್ ಹರಿದು ಮೃತಪಟ್ಟಿದ್ದಾನೆ ಎಂದು ಶಂಕಿಸಲಾಗಿದೆ.

ಮೆಡಿಕಲ್ ವಿದ್ಯಾರ್ಥಿ ಐರನ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ಮೃತಪಡುವ ಸಾಧ್ಯತೆ ಕಡಿಮೆ. ಹಾಗಾಗಿ, ಮರಣೋತ್ತರ ಪರೀಕ್ಷೆಗೆ ದಾವಣಗೆರೆಯ ಎಫ್ ಎಸ್ ಎಲ್ ತಂಡ ಆಗಮಿಸಿದೆ. ಈ ಮಧ್ಯೆ, ನಿನ್ನೆ ಯುವಕ ಮೃತಪಟ್ಟಿದ್ದು ಎಲ್ಲಿ ಹೇಗೆ ಎನ್ನುವ ಮಾಹಿತಿ ನೀಡಲು ಕಾಲೇಜು ಆಡಳಿತ ಮಂಡಳಿ ಹಿಂದೇಟು ಹಾಕುತ್ತಿದೆ.

Published On - 12:45 pm, Tue, 12 November 19

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us