ಪ್ರಜ್ವಲ್ ಪಾಸ್​​​ಪೋರ್ಟ್ ರದ್ದತಿಗೆ ಸಿಎಂ ಬರೆದ ಪತ್ರಕ್ಕೆ ಪ್ರತಿಕ್ರಿಯಿಸಿದ ವಿದೇಶಾಂಗ ಸಚಿವ ಜೈಶಂಕರ್ ಹೇಳಿದ್ದಿಷ್ಟು

Prajwal Revanna Video Case: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್​ ರೇವಣ್ಣ ವಿರುದ್ಧ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪಾಸ್​ಪೋರ್ಟ್​​ ರದ್ದುಗೊಳಿಸುವಂತೆ ರಾಜ್ಯ ಸರ್ಕಾರ ಪತ್ರ ಬರೆದಿದ್ದು, ಇದೀಗ ಇದಕ್ಕೆ ವಿದೇಶಾಂಗ ಸಚಿವ ಎಸ್​​ ಜೈಶಂಕರ್​ ಪ್ರತಿಕ್ರಿಯಿಸಿದ್ದಾರೆ. ಅಲ್ಲದೇ ಪ್ರಜ್ವಲ್​ ರೇವಣ್ಣ ಪಾಸ್​ಪೋರ್ಟ್​ ರದ್ದುಗೊಳಿಸುವ ಬಗ್ಗೆಯೂ ಮಾತನಾಡಿದ್ದಾರೆ. ಹಾಗಾದ್ರೆ ಅವರು ಏನು ಹೇಳಿದ್ದಾರೆ ಎನ್ನುವ ವಿವರ ಈ ಕೆಳಗಿನಂತಿದೆ.

ಪ್ರಜ್ವಲ್ ಪಾಸ್​​​ಪೋರ್ಟ್ ರದ್ದತಿಗೆ ಸಿಎಂ ಬರೆದ ಪತ್ರಕ್ಕೆ ಪ್ರತಿಕ್ರಿಯಿಸಿದ ವಿದೇಶಾಂಗ ಸಚಿವ ಜೈಶಂಕರ್ ಹೇಳಿದ್ದಿಷ್ಟು
ಪ್ರಜ್ವಲ್ ರೇವಣ್ಣ, ಜೈಶಂಕರ್​

Updated on: May 24, 2024 | 6:54 PM

ನವದೆಹಲಿ/ಬೆಂಗಳೂರು, (ಮೇ 24): ಅಶ್ಲೀಲ ವಿಡಿಯೋ ಪೆನ್​ಡ್ರೈವ್ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಹಾಸನ ಸಂಸದ ಪ್ರಜ್ವಲ್​ ರೇವಣ್ಣ (Prajwal Revanna Case) ಅವರ ರಾಜತಾಂತ್ರಿಕ ಪಾಸ್​ಪೋರ್ಟ್​ (Diplomatic Passport) ರದ್ದುಗೊಳಿಸುವಂತೆ ಬಗ್ಗೆ ಸಿಎಂ ಸಿದ್ದರಾಮಯ್ಯ, ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಇದರ ಬೆನ್ನಲ್ಲೇ ವಿದೇಶಾಂಗ ಸಚಿವಾಲಯವು ಪ್ರಜ್ವಲ್​ ರೇವಣ್ಣ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಇದೀಗ ಈ ಬಗ್ಗೆ ವಿದೇಶಾಂಗ ಸಚಿವ ಜೈಶಂಕರ್ (External Affairs Minister Jaishankar) ಪ್ರತಿಕ್ರಿಯಿಸಿದ್ದಾರೆ. ​ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದುಗೊಳಿಸುವಂತೆ ಕರ್ನಾಟಕ ಸರ್ಕಾರ ಮಾಡಿದ ಮನವಿಯನ್ನು ಮೇ 21 ರಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸ್ವೀಕರಿಸಿದ್ದು, ಪಾಸ್ ಪೋರ್ಟ್ ವಶಪಡಿಸಿಕೊಳ್ಳುವ ಪ್ರಕ್ರಿಯೆ ಆರಂಭಿಸಿದೆ ಎಂದು ಸ್ಪಷ್ಟಪಡಿಸಿದರು.

ಇಂದು (ಮೇ 24) ಸುದ್ದಿ ವಾಹಿನಿಯೊಂದರ ಸಂದರ್ಶನದಲ್ಲಿ ಪ್ರಜ್ವಲ್ ರೇವಣ್ಣ ಪಾಸ್​ಪೋರ್ಟ್​ ರದ್ದತಿ ಬಗ್ಗೆ ಮಾತನಾಡಿರುವ ಜೈಶಂಕರ್,  ಮೇ 21ರಂದು ಮಾತ್ರ ವಿದೇಶಾಂಗ ಸಚಿವಾಲಯವು ಕರ್ನಾಟಕದ ಮನವಿಯನ್ನು ಸ್ವೀಕರಿಸಿದೆ. ಕರ್ನಾಟಕದ ಮನವಿ ಸ್ವೀಕರಿಸಿದ ತತಕ್ಷಣ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಕಾರ್ಯಪ್ರವೃತ್ತವಾಗಿದೆ. ಮೇ. 23 ರಿಂದಲೇ ಪಾಸ್ ಪೋರ್ಟ್ ವಶಪಡಿಸಿಕೊಳ್ಳುವ ಪ್ರಕ್ರಿಯೆ ಆರಂಭಿಸಿದೆ. ಆದ್ರೆ, ಪಾಸ್ ಪೋರ್ಟ್ ಕಾಯ್ದೆಯ ಅನ್ವಯವೇ ಪಾಸ್ ಪೋರ್ಟ್ ವಶಪಡಿಸಿಕೊಳ್ಳಬೇಕಾಗಿದೆ. ಪಾಸ್ ಪೋರ್ಟ್ ವಶಪಡಿಸಿಕೊಳ್ಳಲು ನ್ಯಾಯಾಲಯ ಅಥವಾ ಪೊಲೀಸರ ಮನವಿ ಅಗತ್ಯವಿದೆ ಎಂದರು.

ಇದನ್ನೂ ಓದಿ: ಅಶ್ಲೀಲ ವಿಡಿಯೋ ಪ್ರಕರಣ: ಸಿಎಂ ಪತ್ರ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ಕೊಟ್ಟ ವಿದೇಶಾಂಗ ಸಚಿವಾಲಯ

ವಿದೇಶಾಂಗ ಸಚಿವಾಲಯದಿಂದ ಶೋಕಸ್ ನೋಟಿಸ್

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಸಿಲುಕಿ, ವಿದೇಶಕ್ಕೆ ಪರಾರಿಯಾಗಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣನ ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್‌ ರದ್ದುಗೊಳಿಸಬೇಕು ಎಂದು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡು ಪತ್ರ ಬರೆದ ಬೆನ್ನಲ್ಲೇ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಪಾಸ್‌ಪೋರ್ಟ್‌ ರದ್ದತಿಯ ಪ್ರಕ್ರಿಯೆ ಆರಂಭಿಸಿದ್ದು, ಈ ಸಂಬಂಧ ಮೊದಲಿಗೆ ಪ್ರಜ್ವಲ್‌ ರೇವಣ್ಣನಿಗೆ ಶೋಕಾಸ್‌ ನೋಟಿಸ್‌ ಜಾರಿಗೊಳಿಸಿದೆ.

ವಿದೇಶಕ್ಕೆ‌ ಯಾವ ಕೆಲಸದ ಮೇಲೆ‌ ವಿದೇಶಕ್ಕೆ‌ ಹೋಗಲಾಗಿದೆ. ಹಾಗೇ ವಿದೇಶದಿಂದ ವಾಪಾಸ್ ಬರುವ ಬಗ್ಗೆಯೂ ಮಾಹಿತಿ ನೀಡಬೇಕಿದೆ. ಅಲ್ಲದೇ ಯಾಕೆ ಪಾಸ್ ಪೋರ್ಟ್ ರದ್ದು ಮಾಡಬಾರದು ಎಂಬುದಕ್ಕೆ ಸಮಜಾಯಿಸಿ ನೀಡಬೇಕಿದೆ. ಈ ಎಲ್ಲಾ ಮಾಹಿತಿಯನ್ನು ವಿದೇಶಾಂಗ ಸಚಿವಾಲಯಕ್ಕೆ 10 ದಿನಗಳ ಒಳಗೆ ಮಾಹಿತಿ ನೀಡಬೇಕಿದೆ. ಇದರಿಂದ ಪ್ರಜ್ವಲ್​​ಗೆ ಹಂತ ಹಂತವಾಗಿ ಸಂಕಷ್ಟು ಶುರುವಾದಂತಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:45 pm, Fri, 24 May 24