AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೆಕ್ಕರಾಮಯ್ಯ ಅಲ್ಲ ಸಾಲರಾಮಯ್ಯ: ಸಿದ್ದರಾಮಯ್ಯ ಬಜೆಟ್​​ಗೆ ಪ್ರಹ್ಲಾದ ಜೋಶಿ ವ್ಯಂಗ್ಯ

ಸಿಎಂ ಸಿದ್ದರಾಮಮಯ್ಯ 2026ನೇ ಸಾಲಿನ ಬಜೆಟ್ ಮಂಡಿಸಿದ್ದು, ಈ ಸಲ ಕೂಡ 1 ಕೋಟಿ 32 ಸಾವಿರ ರೂ. ಸಾಲ ಮಾಡಲಾಗಿದೆ. ಇದರೊಂದಿಗೆ ರಾಜ್ಯದ ಸಾಲ 8 ಕೋಟಿ 24 ಸಾವಿರಕ್ಕೆ ತಲುಪಿದೆ. ಹೀಗಾಗಿ ಇದಕ್ಕೆ ವಿಪಕ್ಷ ಬಿಜೆಪಿ ನಾಯಕರು ಸಿದ್ದರಾಮಯ್ಯರದ್ದು ಸಾಲದ ಬಜೆಟ್ ಎಂದು ಕಿಡಿಕಾರಿದ್ದಾರೆ. ಇನ್ನು ಕರ್ನಾಟಕ ಬಜೆಟ್ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವ್ಯಂಗ್ಯವಾಡಿದ್ದಾರೆ.

ಲೆಕ್ಕರಾಮಯ್ಯ ಅಲ್ಲ ಸಾಲರಾಮಯ್ಯ: ಸಿದ್ದರಾಮಯ್ಯ ಬಜೆಟ್​​ಗೆ ಪ್ರಹ್ಲಾದ ಜೋಶಿ ವ್ಯಂಗ್ಯ
Pralhad Joshi
ರಮೇಶ್ ಬಿ. ಜವಳಗೇರಾ
|

Updated on: Mar 06, 2026 | 9:17 PM

Share

ನವದೆಹಲಿ, (ಮಾರ್ಚ್ 06): ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಮಂಡಿಸಿದ 17ನೇ ಬಜೆಟ್ 4.48 ಲಕ್ಷ ಕೋಟಿ ರೂಪಾಯಿ ಬೃಹತ್ ಗಾತ್ರದ ಹೆಗ್ಗಳಿಕೆಗಷ್ಟೇ ಸೀಮಿತ. ಅಂತೆಯೇ ರಾಜ್ಯದ ಸಾಲ ಹೆಚ್ಚಳ ಮತ್ತು ವಿತ್ತೀಯ ಕೊರತೆಯಲ್ಲಿ ಸಹ ದಾಖಲೆ ನಿರ್ಮಿಸಿದ್ದಲ್ಲದೆ, “ವೋಟ್ ಬ್ಯಾಂಕ್” ಪ್ರೇರಿತ ಎಂಬಂತಿದೆ. ಕರ್ನಾಟಕ ಸರ್ಕಾರದ 2026-27ನೇ ಸಾಲಿನ ಈ ಬಜೆಟ್ ನಲ್ಲಿ (Karnataka Budget) ರಾಜ್ಯವನ್ನು ಆರ್ಥಿಕ ಪ್ರಗತಿಯತ್ತ ಕೊಂಡೊಯ್ಯುವ ಬದಲು ಆರ್ಥಿಕ ಸಂಕಷ್ಟವನ್ನು ತೆರೆದಿಟ್ಟಿದೆ. ಅಲ್ಪಸಂಖ್ಯಾತ ಸಮುದಾಯ ಸೇರಿದಂತೆ ಕೆಲವೇ ಕೆಲವು ಸಮಾಜಗಳಿಗೆ ಬಜೆಟ್ ಮೀಸಲಿಟ್ಟಂತೆ ಕಾಣುತ್ತಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ ಜೋಶಿ (Union Minister Pralhad Joshi) ಕಿಡಿಕಾರಿದ್ದಾರೆ.

ಲೆಕ್ಕರಾಮಯ್ಯ ಅಲ್ಲ ಸಾಲರಾಮಯ್ಯ

ಪ್ರಸ್ತುತ 4.48 ಲಕ್ಷ ಕೋಟಿ ದೊಡ್ಡ ಗಾತ್ರದ ಬಜೆಟ್ ಆಗಿದ್ದರೂ ಇದೊಂದು ಸ್ಪಷ್ಟ ಅರ್ಥ ನೀತಿ ಬಿಂಬಿಸದ, ‘ಅರ್ಥ’ವಿಲ್ಲದ ಈ ಆಯವ್ಯಯ ಥೇಟ್ ರಾಜಕೀಯ ಭಾಷಣದಂತಿದೆಯೇ ಹೊರತು ಯಾವುದೇ ಅರ್ಥಶಾಸ್ತ್ರದ ಮಾರ್ಗದರ್ಶಿಗೆ ಒಳಪಟ್ಟಂತೆ ಕಾಣುತ್ತಿಲ್ಲ. ಪ್ರಸಕ್ತ ಬಜೆಟ್ ನಲ್ಲಿ 97,449 ಕೋಟಿ ವಿತ್ತೀಯ ಕೊರತೆ ಮತ್ತು 29,957 ಕೋಟಿ ರಾಜಸ್ವ ಸಂಗ್ರಹ ಕೊರತೆ ತೋರಿಸಿರುವ ಸಿಎಂ ಸಿದ್ದರಾಮಯ್ಯ ಅವರು ಲೆಕ್ಕರಾಮಯ್ಯ ಅಲ್ಲ, ಸಂಪದ್ಭರಿತವಾಗಿದ್ದ ಕರುನಾಡಿನ ಪಾಲಿಗೆ 1.32 ಲಕ್ಷ ಕೋಟಿ ಸಾಲದ ಹೊರೆ ಹೊರಿಸಿದ “ಸಾಲರಾಮಯ್ಯ” ಆಗಿದ್ದಾರೆಂದು ಲೇವಡಿ ಮಾಡಿದ್ದಾರೆ.

ಇದನ್ನೂ ಓದಿ: ದಾಖಲೆ ಬಜೆಟ್, ಮಿತಿಮೀರದ ಸಾಲ, ವಿತ್ತೀಯ ಶಿಸ್ತು: ಸರ್ಕಾರದ ಸಾಧನೆ ಹೇಳಿದ ಸಿದ್ದರಾಮಯ್ಯ

ಜಿ ರಾಮ್ ಜಿ ಗೆ ನಯಾ ಪೈಸೆ ಇಲ್ಲ

ಜನಕ್ಕೆ 125 ದಿನಗಳ ಉದ್ಯೋಗ ಖಾತ್ರಿ ನೀಡುವುದರೊಂದಿಗೆ ನಗರ ಮತ್ತು ಗ್ರಾಮೀಣ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸಿರುವ ‘ಜಿ ರಾಮ್ ಜಿ ‘ ಯೋಜನೆಗೆ ರಾಜ್ಯ ಸರ್ಕಾರ ತನ್ನ ಬಜೆಟ್ ಅಲ್ಲಿ ನಯಾ ಪೈಸೆ ಅನುದಾನ ಒದಗಿಸಿಲ್ಲ. ಇದು ಇವರ ಅಭಿವೃದ್ಧಿ ವಿರೋಧಿ ನೀತಿಯನ್ನು ತೋರ್ಪಡಿಸುತ್ತದೆ ಎಂದು ಜೋಶಿ ಆಕ್ಷೇಪಿಸಿದ್ದಾರೆ.

ರಾಜ್ಯದ ಆರ್ಥಿಕಾಭಿವೃದ್ಧಿ ಮತ್ತು ಮೂಲಸೌಲಭ್ಯ ಅಭಿವೃದ್ಧಿಗೆ ಯಾವುದೇ ರಚನಾತ್ಮಕ ಪ್ರಸ್ತಾವನೆಗಳಿಲ್ಲದ ಇದು ರಾಜ್ಯದ ಪಾಲಿಗೆ “ಗ್ಯಾರೆಂಟಿ ಸಾಲ ಶೂಲ”ದ ಬಜೆಟ್ ಆಗಿದೆ. ‘ವೋಟ್ ಬ್ಯಾಂಕ್’ ಮತ್ತು ಗ್ರಾಮ ಪಂಚಾಯ್ತಿಗಳಿಗೆ ಮಹಾತ್ಮ ಗಾಂಧಿ ನಾಮಕರಣ ಘೋಷಿಸಿದ ‘ಕಾಂಗ್ರೆಸ್ ಹೈ ಕಮಾಂಡ್ ಓಲೈಕೆ’ಯ ಆಯವ್ಯಯ ಎಂದು ಟೀಕಿಸಿದ್ದಾರೆ.

ಕಳೆದ ವರ್ಷಕ್ಕಿಂತ 40 ಸಾವಿರ ಕೋಟಿ ಬಜೆಟ್ ಗಾತ್ರ ಹೆಚ್ಚಿಸಿದ ಸಿಎಂ, ರಾಜ್ಯ ಜಿಡಿಪಿಯ 2.95ಕ್ಕೆ ಮಿತಿಗೊಳಿಸಿದ್ದರೂ ಒಟ್ಟು ಸಾಲದ ಗಾತ್ರವನ್ನು 8.24 ಲಕ್ಷ ಕೋಟಿಗೆ ಕೊಂಡೊಯ್ದಿದ್ದಾರೆ. ರಾಜ್ಯದ ಆರ್ಥಿಕ ಇತಿಹಾಸದಲ್ಲೇ ಇದು ದಾಖಲೆ. ಇದೇ ಸಿದ್ದರಾಮಯ್ಯ ಸರ್ಕಾರದ ಸಾಧನೆಯಾಗಿದೆ. ಆದರೆ, ತಮ್ಮ ವಿತ್ತೀಯ ಅಶಿಸ್ತಿನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಅಭ್ಯಾಸಬಲ ಎನ್ನುವಂತೆ ಮತ್ತೆ ಕೇಂದ್ರ ಸರ್ಕಾರದತ್ತ ಬೆರಳು ತೋರಿದ್ದಾರೆ ಎಂದು ಜೋಶಿ ಆರೋಪಿಸಿದ್ದಾರೆ.

ಬಜೆಟ್‌ ಅನ್ನು ಸಮಗ್ರವಾಗಿ ಅವಲೋಕಿಸಿದರೆ ಸಿಎಂ ಅವರ ಸರ್ವ ಸಮಾನತೆ ಸ್ಲೋಗನ್ ಗೆ ತಕ್ಕಂತೆ ಯಾವುದೇ ಅಂತಃಸತ್ವ ಇಲ್ಲವೆಂದೇ ಹೇಳಬೇಕು. ಎಂದಿನಂತೆ ಅಲ್ಪಸಂಖ್ಯಾತರಿಗೆ ವಿಶೇಷ ಕೊಡುಗೆ ಮುಂದುವರೆದಿದೆ ಅಷ್ಟೇ. ಅಲ್ಪಸಂಖ್ಯಾತ ಕಾಲೋನಿಗಳಿಗೆ ಬರೋಬ್ಬರಿ ₹1635 ಕೋಟಿ ಅನುದಾನ ನೀಡಿದ್ದಲ್ಲದೆ, ಅಲ್ಪಸಂಖ್ಯಾತ ನಿಗಮ ಮಂಡಳಿಗಳಲ್ಲಿ ಸಾಲ ಪಡೆದವರ ಸಂಪೂರ್ಣ ಬಡ್ಡಿ ಮನ್ನಾ ಮಾಡಿದೆ. 5000 ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಗೆ ₹ 50000 ಘೋಷಿಸಿದೆ. ಹುಬ್ಬಳ್ಳಿ, ಕಲಬುರ್ಗಿಯಲ್ಲಿ ಹಜ್ ಭವನ ನಿರ್ಮಾಣ ಘೋಷಿಸಿದೆ. ಆದರೆ ಬಹುತೇಕ ಸಮಾಜಗಳನ್ನು ಕಡೆಗಣಿಸಿದೆ ಎಂದಿದ್ದಾರೆ.

ದಾವಣಗೆರೆ “ವೋಟ್ ಬ್ಯಾಂಕ್ “ಗೆ ಕೊಡುಗೆ: ಪ್ರಸಕ್ತ ಬಜೆಟ್ ಅಲ್ಲಿ ವಿಶೇಷವಾಗಿ ಮುಸ್ಲಿಂ ಮತದಾರರೇ ಹೆಚ್ಚಿರುವ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಉಪ ಚುನಾವಣೆ ದೃಷ್ಟಿಯಿಂದ 100 ಕೋಟಿ ಅನುದಾನ ಘೋಷಿಸಲಾಗಿದೆ ಎಂದು ಆರೋಪಿಸಿರುವ ಪ್ರಹ್ಲಾದ ಜೋಶಿ ಉಳಿದ ಕ್ಷೇತ್ರಗಳಿಗೆ ಏಕಿಲ್ಲ? ಇದು ಅಲ್ಪಸಂಖ್ಯಾತ ತುಷ್ಟೀಕರಣ ಮತ್ತು ವೋಟ್ ಬ್ಯಾಂಕ್ ಬಜೆಟ್ ಅಲ್ಲದೇ ಮತ್ತೇನು? ಎಂದು ಪ್ರಶ್ನಿಸಿದ್ದಾರೆ.

ಗ್ಯಾರೆಂಟಿ ಕೈ ಬಿಡುವ ಸೂಚನೆಯೇ? ಪ್ರಸಕ್ತ ಬಜೆಟ್ ಅಲ್ಲಿ ತಾವೇ ಘೋಷಿಸಿದ್ದ ಗ್ಯಾರೆಂಟಿ ಯೋಜನೆ “ಯುವ ನಿಧಿ”ಗೆ ಈ ಬಾರಿ ಅನುದಾನವನ್ನೇ ಮೀಸಲಿಟ್ಟಿಲ್ಲ. ಇದು ಕ್ರಮೇಣ ಒಂದೊಂದೇ ಗ್ಯಾರೆಂಟಿಗಳನ್ನು ಕೈ ಬಿಡುವ ಮುನ್ಸೂಚನೆ ನೀಡಿದಂತಿದೆ. ಯುವ ಸಮುದಾಯವನ್ನು ಸಂಪೂರ್ಣ ನಿರ್ಲಕ್ಷಿಸಿದೆ. ಕಾರಣ “ಪ್ರಜ್ಞಾವಂತ ಯುವ ಸಮುದಾಯ ತಮ್ಮ ವೋಟ್ ಬ್ಯಾಂಕ್ ಅಲ್ಲ” ಎಂಬ ಸ್ಪಷ್ಟ ಭಾವನೆ ಮೂಡಿದಂತಿದೆ ಈ ಕಾಂಗ್ರೆಸ್ ಸರ್ಕಾರಕ್ಕೆ ಎಂದು ಪ್ರಹ್ಲಾದ ಜೋಶಿ ವಿಶ್ಲೇಷಿಸಿದ್ದಾರೆ.

ರಾಜ್ಯ ಸರ್ಕಾರದ ಈ ಬಜೆಟ್ ಅಲ್ಲಿ ಶಿಕ್ಷಣ ಕ್ಷೇತ್ರ ಮತ್ತು ಅವೈಜ್ಞಾನಿಕ ಗ್ಯಾರೆಂಟಿಗಳನ್ನು ಬಿಟ್ಟರೆ ಬೇರೆ ಯಾವುದೇ ವಲಯಕ್ಕೆ ಅಂಥಾ ದೊಡ್ಡ ಕೊಡುಗೆ ಏನಿಲ್ಲ. ಅದರಲ್ಲೂ ಪ್ರಮುಖವಾಗಿ ಆರೋಗ್ಯ ಕ್ಷೇತ್ರ ಮತ್ತು ಕೃಷಿ ವಲಯವನ್ನು ಸಂಪೂರ್ಣ ನಿರ್ಲಕ್ಷಿಸಿದೆ. ಸಮಾಜ ಕಲ್ಯಾಣ, ಮೂಲಸೌಕರ್ಯ ಹಾಗೂ ಅಭಿವೃದ್ಧಿಯನ್ನು ಕಡೆಗಣಿಸಿದೆ ಎಂದು ಹೇಳಿದ್ದಾರೆ.

ಸಿಎಂ ದೂರದೃಷ್ಟಿಯ ಈ ಬಜೆಟ್ ಅಲ್ಲಿ ಒಟ್ಟಾರೆ ಇಂದಿರಾ ಕ್ಯಾಂಟೀನ್, ಬೆಂಗಳೂರು, ಮೈಸೂರು, ದಾವಣಗೆರೆ, ಮತ್ತು ಕಲ್ಬರ್ಗಿ ಅಷ್ಟೇ ಗೋಚರಿಸಿದಂತಿದೆ. ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಸೇರಿದಂತೆ ಬೇರೆ ಬೇರೆ ಪ್ರಾಂತ್ಯಗಳು, ಜಿಲ್ಲೆಗಳು ಹಿಂದುಳಿದಿವೆ. ಅಭಿವೃದ್ಧಿ ಶೂನ್ಯವಾಗಿದೆ ಎಂದಿದ್ದಾರೆ.

ದಿಕ್ಕು ದೆಸೆ ಇಲ್ಲದ ಮುಂಗಡ ಪತ್ರ: ರಾಜ್ಯದ ನೀರಾವರಿ ಯೋಜನೆಗಳಿಗೆ ಯಾವುದೇ ಹಣಕಾಸಿನ ಪ್ರಸ್ತಾಪವಿಲ್ಲ. ಕೇಂದ್ರದ ಅನುಮತಿ ನೆಪ ಹೇಳಿ ತಪ್ಪಿಸಿಕೊಳ್ಳುವ ವ್ಯರ್ಥ ಪ್ರಯತ್ನವಷ್ಟೇ ಇವರ ಕಸರತ್ತಾಗಿದೆ. ಯಾವುದೇ ದಿಕ್ಕು ದೆಸೆ ಇಲ್ಲದ ಈ ಒಂದು ದಾಖಲೆಯ ಮುಂಗಡ ಪತ್ರದಿಂದ ಜನಕಲ್ಯಾಣವೂ ಇಲ್ಲ ಆರ್ಥಿಕ ಪ್ರಗತಿಯೂ ಇಲ್ಲ. ಒಟ್ಟಾರೆ ಇದೊಂದು ಕೇವಲ ಸಾಲದ ಹೊರೆ ಮತ್ತು ವೋಟ್ ಬ್ಯಾಂಕ್ ಪ್ರೇರಿತ ಬಜೆಟ್ ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ
ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು
ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು
ಬಜೆಟ್ ಮಂಡನೆ ಬಳಿಕ ಸಿಎಂ ಸುದ್ದಿಗೋಷ್ಠಿಯ ನೇರ ಪ್ರಸಾರ
ಬಜೆಟ್ ಮಂಡನೆ ಬಳಿಕ ಸಿಎಂ ಸುದ್ದಿಗೋಷ್ಠಿಯ ನೇರ ಪ್ರಸಾರ
ಕೈಯಲ್ಲಿ ಚೊಂಬು, ಕಿವಿಯಲ್ಲಿ ಹೂ: ಬಿಜೆಪಿ ನಾಯಕರ ವಿನೂತನ ಪ್ರತಿಭಟನೆ
ಕೈಯಲ್ಲಿ ಚೊಂಬು, ಕಿವಿಯಲ್ಲಿ ಹೂ: ಬಿಜೆಪಿ ನಾಯಕರ ವಿನೂತನ ಪ್ರತಿಭಟನೆ
ರ‍್ಯಾಗಿಂಗ್​ನಿಂದ ನೊಂದ ಕೋತಿಮರಿಗೆ ಅಮ್ಮನಾದ ಗೊಂಬೆ!
ರ‍್ಯಾಗಿಂಗ್​ನಿಂದ ನೊಂದ ಕೋತಿಮರಿಗೆ ಅಮ್ಮನಾದ ಗೊಂಬೆ!
ಸಮಾಜ ಕಲ್ಯಾಣ ಇಲಾಖೆಯ 2,500 ಹುದ್ದೆ ಭರ್ತಿ ಮಾಡಲು ಸರ್ಕಾರ ನಿರ್ಧಾರ
ಸಮಾಜ ಕಲ್ಯಾಣ ಇಲಾಖೆಯ 2,500 ಹುದ್ದೆ ಭರ್ತಿ ಮಾಡಲು ಸರ್ಕಾರ ನಿರ್ಧಾರ
ಆಸ್ತಿ ನೋಂದಣಿಗೆ ಜನರ ಅಲೆದಾಟ ತಪ್ಪಿಸಲು ಬಜೆಟ್​ನಲ್ಲಿ ಮಹತ್ವದ ಘೋಷಣೆ
ಆಸ್ತಿ ನೋಂದಣಿಗೆ ಜನರ ಅಲೆದಾಟ ತಪ್ಪಿಸಲು ಬಜೆಟ್​ನಲ್ಲಿ ಮಹತ್ವದ ಘೋಷಣೆ