ಶುಲ್ಕ ಇಳಿಕೆಗೆ ಆಗ್ರಹಿಸಿ ವೈದ್ಯಕೀಯ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಂದ ಮೌನ ಪ್ರತಿಭಟನೆ

| Updated By: sandhya thejappa

Updated on: Jul 20, 2021 | 10:24 AM

ಪ್ರತಿ ತಿಂಗಳು 10 ಸಾವಿರ ಕೊವಿಡ್ ಕರ್ತವ್ಯದ ಭತ್ಯೆ ಕೊಡುವುದಾಗಿ ಆರೋಗ್ಯ ಇಲಾಖೆ ಘೋಷಿಸಿತ್ತು. ಆದರೆ ಕೊವಿಡ್ ಕರ್ತವ್ಯದ ಭತ್ಯೆ ಈವರೆಗೆ ಒಂದೇ ಒಂದು ರೂಪಾಯಿ ಬಿಡುಗಡೆ ಆಗಿಲ್ಲ.

ಶುಲ್ಕ ಇಳಿಕೆಗೆ ಆಗ್ರಹಿಸಿ ವೈದ್ಯಕೀಯ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಂದ ಮೌನ ಪ್ರತಿಭಟನೆ
ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ (ಸಂಗ್ರಹ ಚಿತ್ರ)
Follow us on

ಬೆಂಗಳೂರು: ಶುಲ್ಕ ಇಳಿಕೆ ಮಾಡುವಂತೆ ಒತ್ತಾಯಿಸಿ ವೈದ್ಯಕೀಯ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು (Medical Post Graduate Students) ಮೌನ ಪ್ರತಿಭಟನೆ ನಡೆಸುತ್ತಿದ್ದಾರೆ. ಕಪ್ಪು ಪಟ್ಟಿ ಧರಿಸಿ ವಿದ್ಯಾರ್ಥಿಗಳು ವೈದ್ಯಕೀಯ ಸೇವೆಗೆ ಹಾಜರಾಗಿದ್ದಾರೆ. 2002 ರಿಂದ 2018ರ ಅವಧಿಯಲ್ಲಿ 5 ಬಾರಿ ಶುಲ್ಕ ಹೆಚ್ಚಳವಾಗಿದ್ದು, ದೇಶದಲ್ಲೇ ಅತಿ ಹೆಚ್ಚು ಶುಲ್ಕವನ್ನು ಕರ್ನಾಟಕ ಪಡೆಯುತ್ತಿದೆ. ಹೀಗಾಗಿ ರಾಜ್ಯದ ಕ್ರಮದ ವಿರುದ್ಧ ವೈದ್ಯಕೀಯ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ 4 ಸಾವಿರ ವೈದ್ಯಕೀಯ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿದ್ದು, ವರ್ಷಕ್ಕೆ 1.29 ಲಕ್ಷ ರೂ. ಶುಲ್ಕವನ್ನು ಭರಿಸುತ್ತಿದ್ದಾರೆ. ಪ್ರತಿ ತಿಂಗಳು 10 ಸಾವಿರ ಕೊವಿಡ್ ಕರ್ತವ್ಯದ ಭತ್ಯೆ ಕೊಡುವುದಾಗಿ ಆರೋಗ್ಯ ಇಲಾಖೆ ಘೋಷಿಸಿತ್ತು. ಆದರೆ ಕೊವಿಡ್ ಕರ್ತವ್ಯದ ಭತ್ಯೆ ಈವರೆಗೆ ಒಂದೇ ಒಂದು ರೂಪಾಯಿ ಬಿಡುಗಡೆ ಆಗಿಲ್ಲ ಅಂತ ಸರ್ಕಾರದ ವಿರುದ್ಧ ವಿದ್ಯಾರ್ಥಿಗಳು ಕಿಡಿಕಾರಿದ್ದಾರೆ.

ಡಿಪ್ಲೊಮಾ ವಿದ್ಯಾರ್ಥಿಗಳಿಂದ ಪ್ರತಿಭಟನೆ
ಡಿಪ್ಲೊಮಾ ಪರೀಕ್ಷಾ ದಿನಾಂಕ ಘೋಷಣೆಯಾದ ಬೆನ್ನಲ್ಲೆ ವಿದ್ಯಾರ್ಥಿಗಳು ನಿನ್ನೆ (ಜುಲೈ 20) ಪ್ರತಿಭಟನೆಗೆ ಇಳಿದಿದ್ದರು. ಪರೀಕ್ಷೆಗೆ ವಿದ್ಯಾರ್ಥಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಪ್ರತಿಭಟನೆಗೆ ಎಐಡಿಎಸ್ಒ (AIDSO) ವಿದ್ಯಾರ್ಥಿ ಸಂಘಟನೆ ಸಾಥ್ ನೀಡಿದೆ. ಜುಲೈ 28 ರಿಂದ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವುದಾಗಿ ತಾಂತ್ರಿಕ ಶಿಕ್ಷಣ ಇಲಾಖೆ ಘೋಷಿಸಿದೆ. ಪರೀಕ್ಷೆ ದಿನಾಂಕ ಘೋಷಣೆಯಿಂದ ವಿದ್ಯಾರ್ಥಿಗಳು ಆತಂಕಕ್ಕೊಳಗಾಗಿದ್ದು, ಪ್ರತಿಭಟನೆ ನಡೆದಿದ್ದರು.

ಇದನ್ನೂ ಓದಿ

‘ಲೀಡರ್ ಚೇಂಜ್’ಗೆ ಸಜ್ಜಾಗಿ ಬಿಟ್ಟಿದೆಯಾ ಕಮಲ ಹೈಕಮಾಂಡ್? ನಿಜಕ್ಕೂ ‘ಕೇಸರಿ ಮನೆ’ಯಲ್ಲಿನ ಬೆಳವಣಿಗೆಗಳು ಏನು? ಇಲ್ಲಿದೆ ಒಂದು ಇಣುಕು ನೋಟ

ಗರಿಬಿಚ್ಚಿ ಕುಣಿಯುತ್ತಿದ್ದ ನವಿಲಿನ ಮೇಲೆ ಹುಲಿ ದಾಳಿ; ರಾಷ್ಟ್ರಪಕ್ಷಿ ಹಾಗೂ ರಾಷ್ಟ್ರಪ್ರಾಣಿ ಮುಖಾಮುಖಿಯಾದ ವಿಡಿಯೋ ವೈರಲ್

(Medical post graduate students are protesting for fees reduction in Bengaluru)