ಮೆಡಿಕಲ್ ಸೀಟ್ ಬ್ಲಾಕಿಂಗ್ ದಂಧೆ: ಶಂಕರ್ ಬಿದರಿ ಗಂಭೀರ ಆರೋಪ
ಬೆಂಗಳೂರು: ಮೆಡಿಕಲ್ ಸೀಟ್ ಬ್ಲಾಕಿಂಗ್‌ನಲ್ಲಿ ಸಾವಿರಾರು ಕೋಟಿ ರೂಪಾಯಿ ಅವ್ಯವಹಾರ ಆಗಿದೆ ಎಂದು ನಿವೃತ್ತ ಪೊಲೀಸ್ ಮಹಾನಿರ್ದೇಶಕ ಶಂಕರ್ ಬಿದರಿ ಹೊಸ ಬಾಂಬ್ ಸಿಡಿಸಿದ್ದಾರೆ. ಖಾಸಗಿ ಮೆಡಿಕಲ್ ಕಾಲೇಜುಗಳ ಮೆಡಿಕಲ್ ಸೀಟ್ ಬ್ಲಾಕಿಂಗ್ ದಂಧೆಯಲ್ಲಿ ಬರೋಬ್ಬರಿ ₹1,100 ಕೋಟಿ ಮೊತ್ತದ ಅವ್ಯವಹಾರವಾಗಿದೆ ಎಂದು ಆರೋಪ ಮಾಡಿದ್ದಾರೆ. ಮೆಡಿಕಲ್ ಸೀಟ್ ಬ್ಲಾಕಿಂಗ್ನಿಂದ ಸಾವಿರಾರು ಕೋಟಿ ಹಣ ಅವ್ಯವಹಾರವಾಗಿದೆ. ಈ ಬಗ್ಗೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಮಾಹಿತಿ ನೀಡಿದ್ದಾರೆ. ಇಷ್ಟು […]
ಬೆಂಗಳೂರು: ಮೆಡಿಕಲ್ ಸೀಟ್ ಬ್ಲಾಕಿಂಗ್‌ನಲ್ಲಿ ಸಾವಿರಾರು ಕೋಟಿ ರೂಪಾಯಿ ಅವ್ಯವಹಾರ ಆಗಿದೆ ಎಂದು ನಿವೃತ್ತ ಪೊಲೀಸ್ ಮಹಾನಿರ್ದೇಶಕ ಶಂಕರ್ ಬಿದರಿ ಹೊಸ ಬಾಂಬ್ ಸಿಡಿಸಿದ್ದಾರೆ. ಖಾಸಗಿ ಮೆಡಿಕಲ್ ಕಾಲೇಜುಗಳ ಮೆಡಿಕಲ್ ಸೀಟ್ ಬ್ಲಾಕಿಂಗ್ ದಂಧೆಯಲ್ಲಿ ಬರೋಬ್ಬರಿ ₹1,100 ಕೋಟಿ ಮೊತ್ತದ ಅವ್ಯವಹಾರವಾಗಿದೆ ಎಂದು ಆರೋಪ ಮಾಡಿದ್ದಾರೆ.
ಮೆಡಿಕಲ್ ಸೀಟ್ ಬ್ಲಾಕಿಂಗ್ನಿಂದ ಸಾವಿರಾರು ಕೋಟಿ ಹಣ ಅವ್ಯವಹಾರವಾಗಿದೆ. ಈ ಬಗ್ಗೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಮಾಹಿತಿ ನೀಡಿದ್ದಾರೆ. ಇಷ್ಟು ದೊಡ್ಡ ಅವ್ಯವಹಾರ ಆಗಿದ್ರೂ ಸರ್ಕಾರ ಹಾಗೂ ಐಟಿ ಇಲಾಖೆ ಏನು ಮಾಡ್ತಿದೆ? ಇಷ್ಟೊಂದು ದೊಡ್ಡ ಅವ್ಯವಹಾರ ಆಗಿದ್ರೂ ಪ್ರಕರಣದ ಬಗ್ಗೆ ಸರ್ಕಾರ ಮೌನ ವಹಿಸಿದೆ. ಖಾಸಗಿಯವರ ಲಾಬಿಗೆ ಸರ್ಕಾರದವರು ಮಣಿದ್ರಾ? ಎಂದು ಫೇಸ್ಬುಕ್ ಪೇಜ್ನಲ್ಲಿ ಶಂಕರ್ ಬಿದರಿ ಪ್ರಶ್ನಿಸಿದ್ದಾರೆ.
Published On - 12:38 pm, Fri, 14 February 20