ಮೆಡಿಕಲ್ ಸೀಟ್ ಬ್ಲಾಕಿಂಗ್ ದಂಧೆ: ಶಂಕರ್ ಬಿದರಿ ಗಂಭೀರ ಆರೋಪ

ಬೆಂಗಳೂರು: ಮೆಡಿಕಲ್ ಸೀಟ್ ಬ್ಲಾಕಿಂಗ್‌ನಲ್ಲಿ ಸಾವಿರಾರು ಕೋಟಿ ರೂಪಾಯಿ ಅವ್ಯವಹಾರ ಆಗಿದೆ ಎಂದು ನಿವೃತ್ತ ಪೊಲೀಸ್ ಮಹಾನಿರ್ದೇಶಕ ಶಂಕರ್ ಬಿದರಿ ಹೊಸ ಬಾಂಬ್ ಸಿಡಿಸಿದ್ದಾರೆ. ಖಾಸಗಿ ಮೆಡಿಕಲ್ ಕಾಲೇಜುಗಳ ಮೆಡಿಕಲ್ ಸೀಟ್​ ಬ್ಲಾಕಿಂಗ್ ದಂಧೆಯಲ್ಲಿ ಬರೋಬ್ಬರಿ ₹1,100 ಕೋಟಿ ಮೊತ್ತದ ಅವ್ಯವಹಾರವಾಗಿದೆ ಎಂದು ಆರೋಪ ಮಾಡಿದ್ದಾರೆ. ಮೆಡಿಕಲ್ ಸೀಟ್ ಬ್ಲಾಕಿಂಗ್​ನಿಂದ ಸಾವಿರಾರು ಕೋಟಿ ಹಣ ಅವ್ಯವಹಾರವಾಗಿದೆ. ಈ ಬಗ್ಗೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಕಳೆದ ಸೆಪ್ಟೆಂಬರ್‌ ತಿಂಗಳಲ್ಲಿ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಮಾಹಿತಿ ನೀಡಿದ್ದಾರೆ. ಇಷ್ಟು […]

ಮೆಡಿಕಲ್ ಸೀಟ್ ಬ್ಲಾಕಿಂಗ್ ದಂಧೆ: ಶಂಕರ್ ಬಿದರಿ ಗಂಭೀರ ಆರೋಪ
ಸಾಧು ಶ್ರೀನಾಥ್​

Updated on: Feb 14, 2020 | 8:06 PM

ಬೆಂಗಳೂರು: ಮೆಡಿಕಲ್ ಸೀಟ್ ಬ್ಲಾಕಿಂಗ್‌ನಲ್ಲಿ ಸಾವಿರಾರು ಕೋಟಿ ರೂಪಾಯಿ ಅವ್ಯವಹಾರ ಆಗಿದೆ ಎಂದು ನಿವೃತ್ತ ಪೊಲೀಸ್ ಮಹಾನಿರ್ದೇಶಕ ಶಂಕರ್ ಬಿದರಿ ಹೊಸ ಬಾಂಬ್ ಸಿಡಿಸಿದ್ದಾರೆ. ಖಾಸಗಿ ಮೆಡಿಕಲ್ ಕಾಲೇಜುಗಳ ಮೆಡಿಕಲ್ ಸೀಟ್​ ಬ್ಲಾಕಿಂಗ್ ದಂಧೆಯಲ್ಲಿ ಬರೋಬ್ಬರಿ ₹1,100 ಕೋಟಿ ಮೊತ್ತದ ಅವ್ಯವಹಾರವಾಗಿದೆ ಎಂದು ಆರೋಪ ಮಾಡಿದ್ದಾರೆ.

ಮೆಡಿಕಲ್ ಸೀಟ್ ಬ್ಲಾಕಿಂಗ್​ನಿಂದ ಸಾವಿರಾರು ಕೋಟಿ ಹಣ ಅವ್ಯವಹಾರವಾಗಿದೆ. ಈ ಬಗ್ಗೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಕಳೆದ ಸೆಪ್ಟೆಂಬರ್‌ ತಿಂಗಳಲ್ಲಿ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಮಾಹಿತಿ ನೀಡಿದ್ದಾರೆ. ಇಷ್ಟು ದೊಡ್ಡ ಅವ್ಯವಹಾರ ಆಗಿದ್ರೂ ಸರ್ಕಾರ ಹಾಗೂ ಐಟಿ ಇಲಾಖೆ ಏನು ಮಾಡ್ತಿದೆ? ಇಷ್ಟೊಂದು ದೊಡ್ಡ ಅವ್ಯವಹಾರ ಆಗಿದ್ರೂ ಪ್ರಕರಣದ ಬಗ್ಗೆ ಸರ್ಕಾರ ಮೌನ ವಹಿಸಿದೆ. ಖಾಸಗಿಯವರ ಲಾಬಿಗೆ ಸರ್ಕಾರದವರು ಮಣಿದ್ರಾ? ಎಂದು ಫೇಸ್​ಬುಕ್​ ಪೇಜ್​ನಲ್ಲಿ ಶಂಕರ್ ಬಿದರಿ ಪ್ರಶ್ನಿಸಿದ್ದಾರೆ.

Published On - 12:38 pm, Fri, 14 February 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us